ಆಹಾರ ಇಲಾಖೆ ಆಯುಕ್ತ ಹುದ್ದೆಗೆ 20 ಬಾರಿ ವರ್ಗಾವಣೆ ಭಾಗ್ಯ


Team Udayavani, Jan 23, 2018, 11:59 AM IST

anna-bhagya.jpg

ಬೆಂಗಳೂರು: ಮುಖ್ಯಮಂತ್ರಿಯವರ ಮಹತ್ವಕಾಂಕ್ಷೆಯ “ಅನ್ನಭಾಗ್ಯ’ ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಯುಕ್ತರ ಹುದ್ದೆ ಎಂಬುದು ಶಾಲಾ ಮಕ್ಕಳ “ಕುರ್ಚಿಯಾಟ’ ಆದಂತಾಗಿದೆ. 

ಕಳೆದ ನಾಲ್ಕೂವರೆ ವರ್ಷದಲ್ಲಿ ಬರೊಬ್ಬರಿ 19 ಆಯುಕ್ತರು ಈ ಇಲಾಖೆಗೆ ಬಂದು ಹೋಗಿದ್ದು, ಈಗ ಹೊಸ ಆಯುಕ್ತರನ್ನಾಗಿ ರಾಮನಗರ ಜಿಲ್ಲಾಧಿಕಾರಿಯಾಗಿದ್ದ ಡಾ. ಬಿ.ಆರ್‌. ಮಮತಾ ಅವರನ್ನು ಸರ್ಕಾರ ಸೋಮವಾರ ವರ್ಗಾವಣೆ ಮಾಡಿದೆ. ಅದರಂತೆ ಇಲಾಖೆಗೆ 20ನೇ ಆಯುಕ್ತರು ಬಂದಂತಾಗಿದೆ.

ಯಾವುದೇ ಇಲಾಖೆಯ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಆಯುಕ್ತರ ಪಾತ್ರ ಮುಖ್ಯವಾಗಿರುತ್ತದೆ. ಸಿದ್ದರಾಮಯ್ಯ ಸರ್ಕಾರದ ಬ್ಯಾಂಡ್‌ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಬೇಕಾದ ಆಯುಕ್ತರೇ “ಹೀಗೆ ಬಂದು ಹಾಗೆ ಹೋಗಿದ್ದಾರೆ’.

ಐಎಎಸ್‌ ಅಧಿಕಾರಿಗಳನ್ನು ಈ ನಾಲ್ಕೂವರೆ ವರ್ಷದ ಅವಧಿಯಲ್ಲಿ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಇದರಲ್ಲಿ ಮನೋಜ್‌ಕುಮಾರ್‌ ಮೀನಾ ಕೇವಲ ಮೂರು ದಿನಕ್ಕೆ ಆಯುಕ್ತರಾಗಿದ್ದ ಉದಾಹರಣೆಯಿದೆ.

ಉಳಿದಂತೆ ಜೆ. ಕಲ್ಪನಾ, ನವೀನ್‌ರಾಜ್‌ ಸಿಂಗ್‌, ಆರ್‌.ಆರ್‌. ಜನ್ನು, ಆಜಯ್‌ ನಾಗಭೂಷಣ್‌ ಆಯುಕ್ತರಾಗಿ ಬಂದು ಹೋದರು. ಈಗಿದ್ದ ವಿ.ಚೈತ್ರಾ ಕಳೆದ ವರ್ಷ ಜುಲೈ ತಿಂಗಳಲ್ಲಷ್ಟೇ ಆಯುಕ್ತರಾಗಿ ಬಂದಿದ್ದರು. ಈಗ ಅವರೂ ವರ್ಗಾವಣೆಗೊಂಡಿದ್ದು, ಆ ಜಾಗಕ್ಕೆ ಮಮತಾ ಬಂದಿದ್ದಾರೆ. 

ಸುದ್ದಿ ಮಾಡಿತ್ತು ತಿವಾರಿ ಸಾವು: 2016ರ ಆರಂಭದಲ್ಲಿ ಆಯುಕ್ತರಾಗಿದ್ದ ಬಂದಿದ್ದ ಅನುರಾಗ್‌ ತಿವಾರಿ, ಅದೇ ವರ್ಷ ಮೇ 17ರಂದು ಉತ್ತರ ಪ್ರದೇಶದ ಲಖನೌದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣ ರಾಜಕೀಯ ವಲಯದಲ್ಲಿ ಸಾಕಷ್ಟು ಗಲಾಟೆ ಸೃಷ್ಟಿಸಿತ್ತು. ಆಹಾರ ಇಲಾಖೆಯ ಹಗರಣಗಳನ್ನು ಬಯಲಿಗೆಳೆಯಲು ಮುಂದಾಗಿದ್ದಕ್ಕೆ ತಿವಾರಿ ಹತ್ಯೆ ಮಾಡಲಾಗಿದೆ ಎಂದು ಸರ್ಕಾರದ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿದ್ದವು. ಈ ಪ್ರಕರಣದ ತನಿಖೆ ಸಿಬಿಐ ನಡೆಸುತ್ತಿದೆ.

ದುರ್ಬಲ ಆಡಳಿತಕ್ಕೆ ಸಾಕ್ಷಿ: ಒಂದು ಇಲಾಖೆಯಲ್ಲಿ ನಾಲ್ಕೂವರೆ ವರ್ಷದಲ್ಲಿ 20 ಜನ ಆಯುಕ್ತರು ಬರುತ್ತಾರೆ ಎಂದರೆ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ. ದುರ್ಬಲ ಆಡಳಿತ ವ್ಯವಸ್ಥೆಗೆ ಇದು ಸಾಕ್ಷಿ. ಆಹಾರ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ನಡುವಿನ ಹೊಂದಾಣಿಕೆ ಮತ್ತು ಗೊಂದಲಗಳೇ ಇದಕ್ಕೆ ಕಾರಣ.

ತಿಂಗಳಿಗೊಂದು ಕಾನೂನು, ದಿನಕ್ಕೊಂದು ನೀತಿ ಜಾರಿಗೆ ಬರುವ ಈ ಇಲಾಖೆಯಲ್ಲಿ ಕೆಲಸ ಮಾಡಲು ಯಾರಿಗೂ ಮನಸ್ಸಿಲ್ಲ. ವರ್ಗಾವಣೆಯಾಗಿ ಬಂದವರು, ಅಧಿಕಾರವಹಿಸಿಕೊಳ್ಳುವ ಮೊದಲೇ ಇಲ್ಲಿಂದ ಹೇಗೆ ಬಿಡುಗಡೆ ಹೊಂದಬಹುದು ಎಂದು ಪ್ಲಾನ್‌ ಮಾಡುತ್ತಿರುತ್ತಾರೆ ಎಂದು ಕರ್ನಾಟಕ ರಾಜ್ಯ ಪಡಿತರ ವಿತರಕರ ಸಂಘದ ಅಧ್ಯಕ್ಷ ಕೃಷ್ಣಪ್ಪ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.