ಮರಳಿ ಶಾಲೆ ಸೇರಿದ ಮಕ್ಕಳು

Team Udayavani, Jan 23, 2018, 3:22 PM IST

vij-2.jpg

ಸಿಂದಗಿ: ಶಾಲೆಯಿಂದ ದೂರ ಉಳಿದು ಇಟ್ಟಂಗಿ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಮಕ್ಕಳನ್ನು ಗುರುತಿಸಿ ಮಕ್ಕಳಿಗೆ ಮತ್ತು ಪಾಲಕರ ಮನವೊಲಿಸಿ ಮಕ್ಕಳನ್ನು ಮರುಳಿ ಶಾಲೆಗೆ ಕಳುಹಿಸಿದ ಘಟನೆ ತಾಲೂಕಿನ ದೇವರಹಿಪ್ಪರಗಿ ಪಟ್ಟಣದ ಹೊರವಲಯದ ಇಟ್ಟಂಗಿ ಭಟ್ಟಿಯಲ್ಲಿ ಸೋಮವಾರ ನಡೆದಿದೆ.

ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್‌ ಬಿರಾದಾರ ಅವರು ಸ್ವತಃ ತಮ್ಮ ಸಿಬ್ಬಂದಿಯೊಂದಿಗೆ ದೇವರಹಿಪ್ಪರಗಿಯಲ್ಲಿನ ಇಟ್ಟಂಗಿ ಭಟ್ಟಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿ ಕೆಲಸ ಮಾಡುತ್ತಿರುವ ಇಬ್ಬರು ಶಾಲಾ ಮಕ್ಕಳನ್ನು ಗುರುತಿಸಿದ್ದಾರೆ. ತಾಲೂಕಿನ ಕೋರವಾರ ಗ್ರಾಮದ ಸರ್ಕಾರಿ ಉರ್ದು ಪ್ರೌಢಶಾಲೆ (ಆರ್‌ಎಂಎಸ್‌ಎ)ಯ 10ನೇ ತರಗತಿಯ
ವಿದ್ಯಾರ್ಥಿನಿ ಆಯಿಶಾ ಕೊಳಾಳ ಹಾಗೂ ಕೊಂಡಗೂಳಿ ಎಂಪಿಎಸ್‌ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಇರ್ಫಾನ್‌ ತಾಂಬೋಳಿ ಅವರನ್ನು ಗುರುತಿಸಿದ್ದಾರೆ. ಅವರನ್ನು ಸ್ವತಃ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವಾಹನದಲ್ಲಿ ಕರೆದುಕೊಂಡು ಹೋಗಿ ಶಾಲೆಗೆ ಕಳುಹಿಸಿದ್ದಾರೆ.

ಮಕ್ಕಳೊಂದಿಗೆ ಆಪ್ತಸಮಾಲೋಚನೆ ಮಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್‌ ಬಿರಾದಾರ ಮಾತನಾಡಿ, ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ಕೆಲಸಕ್ಕೆ ಸೇರಿಸುವುದು ಅಪರಾಧ. ಕೂಲಿ ಹಣ ಉಳಿತಾಯವಾಗುತ್ತದೆ ಎಂದು ಶಾಲಾ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳುವುದು ಅಪರಾಧ. ಕುಟುಂಬದ ಆರ್ಥಿಕ ಸಮಸ್ಯೆಯಿದ್ದಲ್ಲಿ ಪಾಲಕರು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ಕೆಲಸಕ್ಕೆ ಸೇರಿಸಬೇಡಿ ಎಂದರು. 

ಸರಕಾರ 14 ವರ್ಷದವರೆಗೆ ಕಡ್ಡಾಯ ಶಿಕ್ಷಣ ಮಾಡಿದೆ. ಕಷ್ಟದ ಜೀವನದಲ್ಲಿ ಶಿಕ್ಷಣ ಕಲಿಸಲು ತೊಂದರೆಯಾಗುತ್ತಿದ್ದಲ್ಲಿ
ಅನಾನೂಕೂಲವಾಗುತ್ತಿದ್ದಲ್ಲಿ ತಮ್ಮನ್ನು ಭೇಟಿ ಮಾಡಿ. ಆದರೆ ಮಕ್ಕಳನ್ನು ಕೂಲಿಗೆ ಕಳುಹಿಸಬೇಡಿ. ಕೂಲಿ ಮಾಡುವ ಮಕ್ಕಳನ್ನು ನೋಡಲು ನನ್ನಿಂದಾಗುವುದಿಲ್ಲ. ಸರಕಾರ ಸಾಕಷ್ಟು ಸೌಲಭ್ಯ ನೀಡುತ್ತಿದೆ. ಈ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಶಾಲಾ ಮಕ್ಕಳನ್ನು ಕೆಲಸಕ್ಕೆ ಇಡಲು ಬಂದ ಪಾಲಕರಿಗೆ ತಿಳಿವಳಿಕೆ ಹೇಳಿ ಶಾಲೆಗೆ ಕಳುಹಿಸುವ ಪ್ರಯತ್ನ ಮಾಡಬೇಕು ಎಂದು ಇಟ್ಟಂಗಿ ಭಟ್ಟಿ ಮಾಲೀಕರಿಗೆ ಕಿವಿಮಾತು ಹೇಳಿದರು. ಶಾಲೆಯಲ್ಲಿ ನಿರಂತರ ಗೈರು ಉಳಿಯುವ ಮಕ್ಕಳನ್ನು ಗುರುತಿಸಿ ಅವರ ಬಗ್ಗೆ ತಿಳಿದುಕೊಂಡು ಅಂಥವರನ್ನು ಮರಳಿ ಶಾಲೆಗೆ ಕರೆದುಕೊಂಡು ಬರಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಮುಖ್ಯಸ್ಥರಿಗೆ ಹಾಗೂ ಶಿಕ್ಷಕರಿಗೆ ಸೂಚಿಸಿದ್ದಾರೆ. 

ತಾಲೂಕಿನ ಕೋರವಾರ ಗ್ರಾಮದ ಸರಕಾರಿ ಉರ್ದು ಪ್ರೌಢಶಾಲೆ ಮುಖ್ಯೋಧ್ಯಾಪಕ ಎಂ.ಎಸ್‌. ಸ್ಥಾವರಮಠ, ಅತಿಥಿ ಶಿಕ್ಷಕ ಐ.ಬಿ. ಚಿಗರೊಳ್ಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆಯಿಶಾ ಕೊಳಾಳ ಹಾಗೂ ಇರ್ಫಾನ್‌ ತಾಂಬೋಳಿ ಸೋಮವಾರದಿಂದ ಶಾಲೆಗೆ ಹೋಗುತ್ತಿದ್ದಾರೆ. ಅವರ ಬಗ್ಗೆ ವಿಶೇಷ ಕಾಳಜಿ ತೆಗೆದುಕೊಳ್ಳುವಂತೆ ಆಯಾ ಶಿಕ್ಷಕರಿಗೆ ಮಾರ್ಗದರ್ಶನ ನೀಡಿರುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್‌ ಬಿರಾದಾರ ಪತ್ರಿಕೆಗೆ ತಿಳಿಸಿದ್ದಾರೆ.

ಶಾಲೆಯಿಂದ ದೂರ ಉಳಿದ ಮಕ್ಕಳನ್ನು ಗುರುತಿಸಿ ಮರಳಿ ಶಾಲೆಗೆ ಕಳುಹಿಸುವ ಕಾರ್ಯದಲ್ಲಿ ಸ್ವತಃ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್‌ ಬಿರಾದಾರ ಅವರ ಕಾರ್ಯ ಶ್ಲಾಘನೀಯ. ಇಂಥ ಕಾರ್ಯಾಚರಣೆ ಸಿಂದಗಿ ತಾಲೂಕಿನಲ್ಲಿ ಪ್ರಥಮವಾಗಿದೆ. ಸಿದ್ದಣ್ಣ ಚೌಧರಿ ಕನ್ನೊಳ್ಳಿ ಜಿಲ್ಲಾ ರೈತ ಮುಖಂಡ

ಮನೆಯಲ್ಲಿ ಬಹಳ ಕಷ್ಟವಿದೆ. ನನಗೆ ಶಾಲೆ ಕಲಿಯಲು ಇಷ್ಟ. ಆದರೆ ಬಡತನಕ್ಕಾಗಿ ಕೂಲಿ ಕೆಲಸಕ್ಕೆ ಬಂದಿದ್ದೇನೆ. ಬಿಇಒ ಸರ್‌ ಅವರು ನೀನು ಮೊದಲು ಶಾಲೆ ಕಲಿ ನೀನಗೆ ಉಜ್ವಲ ಭವಿಷ್ಯವಿದೆ ಎಂದಿದ್ದಾರೆ. ಅವರಿಗೆ ತುಂಬಾ ಧನ್ಯವಾದಗಳು. ನನಗೆ ಬಹಳ ಸಂತೋಷವಾಗಿದೆ. ಆಯಿಶಾ ಕೊಳ್ಯಾಳ ,10ನೇ ತರಗತಿ ವಿದ್ಯಾರ್ಥಿನಿ

ಟಾಪ್ ನ್ಯೂಸ್

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.