ವೀರಶೈವ ಮಹಾಸಭಾ ಇಬ್ಭಾಗ,ಲಿಂಗಾಯತ ಮಹಾಸಭಾ ಉದಯ
Team Udayavani, Jan 24, 2018, 6:00 AM IST
ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾ ಸಭಾಗೆ ಪರ್ಯಾಯವಾಗಿ ಜಾಗತಿಕ ಲಿಂಗಾಯತ ಮಹಾಸಭಾ ಅಸ್ತಿತ್ವಕ್ಕೆ ಬಂದಿದೆ. ಈ ಮೂಲಕ ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿದ್ದ ವೀರಶೈವ -ಲಿಂಗಾಯತ ಸಮುದಾಯದ ಮಹಾಸಭಾ ಇಬ್ಭಾಗವಾದಂತಾಗಿದೆ.
ಪ್ರತ್ಯೇಕ ಲಿಂಗಾಯತ ಮಹಾಸಭಾ ಅಸ್ತಿತ್ವಕ್ಕೆ ಬರುತ್ತಿದ್ದಂತೆ ವೀರಶೈವ ಮಹಾಸಭಾದ ಪ್ರಾಥಮಿಕ ಸದಸ್ಯತ್ವಕ್ಕೆ ವಿಧಾನ ಪರಿಷತ್‌ನ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಸಹಿತ ದಾವಣಗೆರೆ, ಧಾರವಾಡ, ಬೆಳಗಾವಿ ಹಾಗೂ ಮಂಡ್ಯ ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ 400ಕ್ಕೂ ಹೆಚ್ಚು ಸದಸ್ಯರು ರಾಜೀನಾಮೆ ಸಲ್ಲಿಸಿ, ಜಾಗತಿಕ ಲಿಂಗಾಯತ ಮಹಾಸಭಾ ಸೇರಿಕೊಂಡರು.
ಮಂಗಳವಾರ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಲಿಂಗಾಯತ ಮುಖಂಡರು ಮತ್ತು ಸ್ವಾಮೀಜಿಗಳ ಸಭೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ರಚನೆಗೆ ತೀರ್ಮಾನ ಕೈಗೊಳ್ಳಲಾಯಿತು.ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆಗಾಗಿ ಹೋರಾಡುತ್ತಿರುವ ಹಿರಿಯ ಮುಖಂಡ ಬಸವರಾಜ್ ಹೊರಟ್ಟಿ ಜಾಗತಿಕ ಲಿಂಗಾಯತ ಮಹಾಸಭೆಯ ಮೊದಲ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡರೆ, ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಕಾರ್ಯಾಧ್ಯಕ್ಷರಾಗಿ ಮತ್ತು ವೈದ್ಯ ಕೀಯ ಶಿಕ್ಷಣ ಸಚಿವ ಡಾ| ಶರಣ ಪ್ರಕಾಶ್ ಪಾಟೀಲ್ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡರು.
ಇಷ್ಟು ದಿನ ಉತ್ತರ ಕರ್ನಾಟಕ ಭಾಗದಲ್ಲಿ ಮಾತ್ರ ಹೋರಾಟ ಪ್ರಬಲವಾಗಿ ನಡೆಯುತ್ತಿತ್ತು. ಮುಂದಿನ ದಿನ ಗಳಲ್ಲಿ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಸಮಾವೇಶಗಳನ್ನು ನಡೆಸಲು ತೀರ್ಮಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.