ಎನ್‌ಎಂಸಿ ಮಸೂದೆ ಪರಿಶೀಲಿಸಿ
Team Udayavani, Jan 24, 2018, 11:58 AM IST
ಬೆಂಗಳೂರು: ಸಿದ್ಧವಾಗಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ಮಸೂದೆ 2017ರಲ್ಲಿ ಕೆಲವು ನಿಯಮಗಳನ್ನು ಬದಲಾವಣೆ ಮಾಡುವಂತೆ ರಾಜ್ಯ ಆರೋಗ್ಯ ಸೇವೆಗಳ ಪರಿಣಿತರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಆಫ್ ಹೆಲ್ತ್ ಕೇರ್ ಪ್ರವೈಡರ್ಸ್ ಆಫ್ ಇಂಡಿಯಾದ ಅಧ್ಯಕ್ಷ ಡಾ.ಬಿ.ಎಸ್.ಅಜಯ್‌ಕುಮಾರ್, ಸರ್ಕಾರದ ಕ್ರಮ ಭವಿಷ್ಯತ್ತಿನ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ಆದರೆ ಇದರಲ್ಲಿ ಕೆಲವು ನ್ಯೂನತೆಗಳಿವೆ. ಅವುಗಳನ್ನು ಸರಿಪಡಿಸಿ ಮಸೂದೆ ಮಂಡನೆಯಾಗಲಿ ಎಂದು ಮನವಿ ಮಾಡಿದರು.
ಸರ್ಕಾರ ಈ ಮಸೂದೆ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಹಿಡಿತ ಸಾಧಿಸಲು ಹೊರಟಂತೆ ಕಾಣುತ್ತಿದ್ದು, ಇದನ್ನು ಕೈಬಿಡಬೇಕು. ಎಂಬಿಬಿಎಸ್ ಪರೀಕ್ಷೆ ಮುಗಿಸಿದ ನಂತರ ಮತ್ತೆ ನ್ಯಾಷನಲ್ ಲೈಸೆನ್ಷಿಯೇಟ್ ಎಕ್ಸಾಮಿನೇಷನ್ ಅನ್ನು ಮಾಡಬೇಕೆಂಬ ನಿಂಬಂಧನೆ ವಿಧಿಸಲಾಗಿದೆ. ಇದು ಕೂಡ ಸರಿಯಾದ ತೀರ್ಮಾನವಲ್ಲ. ಎಂಬಿಬಿಎಸ್ ಮುಗಿಸಿದ ಮೇಲೆ ಇಂತಹ ಪರೀಕ್ಷೆಗಳು ಅನಗತ್ಯ ಎಂದರು.
ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಣಕ್ಕೆ ಪರವಾನಿಗೆ, ಗುಣಮಟ್ಟ ಪರಿಶೀಲನೆ, ಮಾನ್ಯತೆ, ಮತ್ತು ಆಡಳಿತದ ಮೇಲೆ ನಿಗಾವಹಿಸಲು ಒಂದು ಸ್ವಾಯತ್ತ ಸಂಸ್ಥೆಯನ್ನು ನೇಮಕ ಮಾಡುವ ಅವಶ್ಯವಿದೆ ಎಂದು ಅಭಿಪ್ರಾಯಪಟ್ಟರು.
ಆಯುಷ್ ವೈದ್ಯರು ಅಲೋಪಥಿಕ್ ಔಷಧಿಯಲ್ಲಿ ಪ್ರಾಕ್ಟೀಸ್ ಮಾಡುವ ಸಂಬಂಧ ಕೋರ್ಸ್‌ಗಳಿಗೆ ಅವಕಾಶ ನೀಡಬಾರದು. ಅಲೋಪಥಿಕ್ ಶಿಕ್ಷಣವು ವಾಸ್ತವಿಕ ನೆಲೆಗಟ್ಟಿನ ಮೇಲಿರಬೇಕು. ಯಾವುದೇ ಗೊಂದಲಕ್ಕೆ ಎಡೆ ಮಾಡಿಕೊಡದಂತಿರಬೇಕು ಎಂದು ಹೇಳಿದರು.
ಅಸೋಸಿಯೇಷನ್ ಆಫ್ ನ್ಯಾಷನಲ್ ಬೋರ್ಡ್ ಅಕ್ರಿಡಿಟೆಡ್ ಇನ್‌ಸ್ಟಿಟ್ಯೂಷನ್ಸ್ (ಎಎನ್‌ಬಿಎಐ)ನ ಅಧ್ಯಕ್ಷ ಡಾ.ವೆಂಕಟೇಶ ಕೃಷ್ಣಮೂರ್ತಿ ಮಾತನಾಡಿ, ಭಾರತದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಗಂಭೀರವಾದ ಕಾನೂನಿನ ಅಗತ್ಯವಿದೆ ಎಂದರು.
ಜನಸಾಮಾನ್ಯರಿಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯಗಳು ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಕಾನೂನು ರೂಪಿಸಬೇಕಾಗಿದೆ.
-ಡಾ. ಅಲೆಕ್ಸಾಂಡರ್ ಥಾಮಸ್, ಎಎಚ್‌ಪಿಐ ಅಧ್ಯಕ್ಷ.
ಜನರು ಹಿಂದೇಟು ಹಾಕುತ್ತಿದ್ದಾರೆ: ನಮ್ಮಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಆಗತ್ಯ ಸೌಲಭ್ಯಗಳಿಲ್ಲ. ಹೀಗಾಗಿಯೇ ಜನರು ಸರ್ಕಾರಿ ಆಸ್ಪತ್ರೆಗಳಿಗೆ ಹೋಗಲು ಹಿಂದೇಟು ಹಾಕುತ್ತಾರೆ. ಕೇಂದ್ರ ಸರ್ಕಾರ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಣಕ್ಕೆ ಪರವಾನಿಗೆ ಸೇರಿದಂತೆ ಹಲವು ವಿಚಾರಗಳ ಮೇಲೆ ನಿಗಾ ವಹಿಸಲು ಒಂದು ಸ್ವಾಯತ್ತ ಸಂಸ್ಥೆಯನ್ನು ನೇಮಕ ಮಾಡಲಿ ಎಂದು ನಾರಾಯಣ ಹೆಲ್ತ್ ನ ಅಧ್ಯಕ್ಷ. ಡಾ.ದೇವಿ ಪ್ರಸಾದ್ ಶೆಟ್ಟಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.