ಕ್ರೀಡಾಕೂಟ- ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ
Team Udayavani, Jan 25, 2018, 11:00 AM IST
ಮಹಾನಗರ: ಆರೋಗ್ಯವಂತರಾಗಿ ಬದುಕಲು ಕ್ರೀಡೆ ಮುಖ್ಯ ಪಾತ್ರ ವಹಿಸುತ್ತದೆ ಎಂದು ಮೇಯರ್ ಕವಿತಾ ಸನಿಲ್ ಹೇಳಿದರು.
ಬುಧವಾರ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿ.ಪಂ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ರಾಜ್ಯ ಸರಕಾರಿ ನೌಕರರ ಸಂಘದ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ- ಸಾಂಸ್ಕೃತಿಕ ಸ್ಪರ್ಧೆಯ ಉದ್ಘಾಟನೆ ವೇಳೆ ಮಾತನಾಡಿದ ಅವರು, ಸರಕಾರಿ ನೌಕರರಿಗೆ ರೋಗ ಬೇಗ ವ್ಯಾಪಿಸುತ್ತದೆ. ಇದಕ್ಕೆಂದೇ ದಿನದಲ್ಲಿ ಕನಿಷ್ಠ ಅರ್ಧ ಗಂಟೆಯಾದರೂ ವ್ಯಾಯಾಮ ಮಾಡುವ ಪರಿಪಾಠವನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ವ್ಯಾಯಾಮ ಮಾಡಿ
ಸರಕಾರಿ ನೌಕರರು ಹೆಚ್ಚಿನ ಸಮಯವನ್ನು ಕಚೇರಿಯಲ್ಲಿಯೇ ಕಳೆಯುತ್ತಾರೆ. ಸಾಕಷ್ಟು ಒತ್ತಡವೂ ಅವರ ಮೇಲೆ ಇರುತ್ತದೆ. ಮನಸ್ಸಿನ ಮೇಲೆ ಇದು ಪರಿಣಾಮ ಬೀರದಂತೆ ಮಾಡಲು ವ್ಯಾಯಾಮ ಮಾಡಬೇಕು ಎಂದರು.
ಅನೇಕ ಸರಕಾರಿ ನೌಕರರು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಇನ್ನೂ ಕೆಲವರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಕ್ರೀಡೆ ಎಂದ ಮೇಲೆ ಸೋಲು, ಗೆಲುವು ಸಾಮಾನ್ಯ. ಇದರಲ್ಲಿ ಭಾಗವಹಿಸುವಿಕೆ ಅತೀ ಮುಖ್ಯ ಎಂದು ಹೇಳಿದರು.
ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿದರು. ಮಣ್ಣಗುಡ್ಡ ವಾರ್ಡ್ ಪಾಲಿಕೆ ಸದಸ್ಯೆ ಜಯಂತಿ ಆಚಾರ್, ಜಿಲ್ಲಾ ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ., ಜಿಲ್ಲಾ ಪಂಚಾಯತ್ ಸಿಇಒ ಡಾ| ಎಂ.ಆರ್. ರವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿ’ಸೋಜಾ, ವಾರ್ತಾಧಿಕಾರಿ ಖಾದರ್ ಷಾ, ರೀಟಾ ಡೇಸ, ಉಮಾನಾಥ, ನಾರಾಯಣ ಆಳ್ವ, ಶಿವಶಂಕರ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.