ಪರೇಡ್ ಸಿದ್ಧತೆ ಪರಿಪೂರ್ಣ
Team Udayavani, Jan 25, 2018, 12:40 PM IST
ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ಜ.26ರಂದು ನಗರದ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್
ಮೈದಾನದಲ್ಲಿ ವಿಶೇಷ ಕವಾಯತು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಂಡಿರುವುದಾಗಿ ಗಣರಾಜ್ಯೋತ್ಸವ ಆಚರಣಾ ಸಮಿತಿ ಅಧ್ಯಕ್ಷ, ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣರಾಜ್ಯೋತ್ಸವ ಆಚರಣೆಗಾಗಿ ವೇದಿಕೆ ನಿರ್ಮಾಣ, ಬ್ಯಾರಿಕೇಡಿಂಗ್, ಧ್ವಜಸ್ಥಂಭ ನಿರ್ಮಾಣ ಸೇರಿ ಎಲ್ಲ ಅಗತ್ಯ ಸಿದ್ಧತೆ ಮಾಡಿದ್ದು, 11,500 ಆಸನ ವ್ಯವಸ್ಥೆ ಮಾಡಲಾಗಿದೆ. ಜ.26ರಂದು ಬೆಳಗ್ಗೆ 8.58ಕ್ಕೆ ರಾಜ್ಯಪಾಲರು ಮೈದಾನಕ್ಕೆ ಆಗಮಿಸಿ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ಇದೇ ವೇಳೆ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಮೂಲಕ ರಾಷ್ಟ್ರಧ್ವಜಕ್ಕೆ ಪುಷ್ಪವೃಷ್ಟಿ ವ್ಯವಸ್ಥೆ ಮಾಡಲಾಗಿದೆ. ಧ್ವಜಾರೋಹಣದ ಬಳಿಕ ರಾಜ್ಯಪಾಲರು ಪರೇಡ್ ವೀಕ್ಷಿಸಿ, ಗೌರವರಕ್ಷೆ ಸ್ವೀಕರಿಸಲಿದ್ದು, ನಂತರ ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದು ಹೇಳಿದರು.
ಪಥಸಂಚಲನದಲ್ಲಿ ಪೊಲೀಸ್, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ, ಸೇವಾ ದಳ ಹಾಗೂ ವಿವಿಧ ಶಾಲೆಗಳ ಮಕ್ಕಳು, ಬ್ಯಾಂಡ್ ನ 30 ತುಕಡಿಗಳಿಂದ ಸುಮಾರು 1,020 ಮಂದಿ ಭಾಗವಹಿಸಲಿದ್ದಾರೆ. ಜತೆಗೆ ಶಾಲಾ ಮಕ್ಕಳು ಎರಡು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದು, 1,330 ಮಕ್ಕಳು ಭಾಗವಹಿಸಲಿದ್ದಾರೆ. ಕೊನೆಯಲ್ಲಿ ವಿಜೇತರಿಗೆ ರಾಜ್ಯಪಾಲರು ಬಹುಮಾನ ವಿತರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಭದ್ರತೆ ದೃಷ್ಟಿಯಿಂದ ಮೈದಾನದ ಸುತ್ತ ಸೂಕ್ತ ಬಂದೋಬಸ್ತ್ ಮಾಡಲಾಗಿದ್ದು, ಮೈದಾನದಲ್ಲಿ ಭದ್ರತೆ ಹಾಗೂ ಸುರಕ್ಷತೆಗಾಗಿ 50 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜತೆಗೆ ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆ ಮಾಡಲಾಗಿದ್ದು, ಆ್ಯಂಬುಲೆನ್ಸ್, ಅಗ್ನಿಶಾಮಕ ವಾಹನಗಳು, ವೈದ್ಯಕೀಯ, ವೈದ್ಯಕೀಯೇತರ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ಆಯುಕ್ತರು ತಿಳಿಸಿದರು.
ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಮಾತನಾಡಿ, ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ವಿಶೇಷವಾಗಿ ಗೋವಾ ರಾಜ್ಯದ ಸಶಸ್ತ್ರ ಪಡೆಯ ಒಂದು ತುಕಡಿ ಭಾಗವಹಿಸುತ್ತಿದೆ. ಜ.26ರಂದು ನಗರದ ಎಲ್ಲ
ವಿಭಾಗಗಳಿಂದ 9 ಡಿಸಿಪಿ, 16 ಎಸಿಪಿ, 51 ಪಿಐ, 92 ಪಿಎಸ್‌ಐ, 16 ಮಹಿಳಾ ಪಿಎಸ್‌ಐ, 77 ಎಎಸ್‌ಐ, 535 ಎಚ್‌ಸಿ/ಪಿಸಿ, 71 ಮಹಿಳಾ ಸಿಬ್ಬಂದಿ, 56 ಕ್ಯಾಮೆರಾ ಸಿಬ್ಬಂದಿ, 126 ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ, 8 ಕೆಎಸ್‌ಆರ್‌ಪಿ ತುಕಡಿ, 2 ಡಿಸ್ವಾಟ್ ತಂಡ, 1 ಕ್ಷಿಪ್ರ ಕಾರ್ಯಾಚರಣೆ ಪಡೆ, ಗುರುಡ ಪಡೆ, 8 ಎ.ಎಸ್ ಪರಿಶೀಲನಾ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಯಾವ ಪಾಸ್‌ಗೆ ಎಲ್ಲಿ ನಿಲುಗಡೆ?
ಹಳದಿ ಪಾಸ್: ಕಬ್ಬನ್ ರಸ್ತೆಯಲ್ಲಿ ಸಂಚರಿಸಿ, ಪ್ರವೇಶ ದ್ವಾರ 1ರ ಮೂಲಕ ಮೈದಾನದ ಒಳಗೆ ಪ್ರವೇಶಿಸಿ ಪರೇಡ್ ಮೈದಾನದ ಪಶ್ಚಿಮ ಭಾಗದಲ್ಲಿ ವಾಹನ ನಿಲ್ಲಿಸಬೇಕು. ಬಿಳಿ ಪಾಸ್: ಗಣ್ಯರು, ಸಚಿವರು, ಸರ್ಕಾರದ ಕಾರ್ಯದರ್ಶಿಗಳು, ರಕ್ಷಣಾ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಕಬ್ಬನ್ ರಸ್ತೆ ಮೂಲಕ ಪ್ರವೇಶ ದ್ವಾರ 2ರಲ್ಲಿ ಮೈದಾನ ಪ್ರವೇಶಿಸಿ ಪಶ್ಚಿಮ ಭಾಗದಲ್ಲಿ ವಾಹನ ನಿಲ್ಲಿಸಬೇಕು.
ಪಿಂಕ್ ಪಾಸ್: ಮೇನ್ ಗಾರ್ಡ್ ಕ್ರಾಸ್ ರಸ್ತೆಯ ಸಫೀನಾ ಪ್ಲಾಜಾ ಮುಂಭಾಗ, ಕಾಮರಾಜ ರಸ್ತೆ ಆರ್ಮಿ ಪಬ್ಲಿಕ್ ಶಾಲೆ
ಮುಂಭಾಗ ಮತ್ತು ಆರ್‌ಎಸ್‌ಐ ಗೇಟ್ ಮುಂಭಾಗ ವಾಹನ ನಿಲ್ಲಿಸಿ, ಪ್ರವೇಶ ದ್ವಾರ 3ರ ಮೂಲಕ ಮೈದಾನ ಪ್ರವೇಶಿಸುವುದು.
ಹಸಿರು ಪಾಸ್: ಶಿವಾಜಿನಗರ ಬಸ್ ನಿಲ್ದಾಣ 1ನೇ ಮಹಡಿಯ ವಾಹನ ನಿಲುಗಡೆ ಸ್ಥಳದಲ್ಲಿ ವಾಹನ ನಿಲ್ಲಿಸಿ, ಪರೇಡ್
ಮೈದಾನದ ಪ್ರವೇಶ ದ್ವಾರ 4 ಮತ್ತು 5ರ ಮೂಲಕ ಮೈದಾನದೊಳಗೆ ಪ್ರವೇಶಿಸಬಹುದು.
ಎಲ್ಲೆಲ್ಲಿ ವಾಹನ ನಿಲುಗಡೆ, ಸಂಚಾರ ನಿಷೇಧ?
ಕಾಮರಾಜ ರಸ್ತೆ, ಕಾವೇರಿ ಆರ್ಟ್ಸ್ ಮತ್ತು ಕ್ರಾಫ್ಟ್ ಜಂಕ್ಷನ್‌ನಿಂದ ಕಬ್ಬನ್ ರಸ್ತೆವರೆಗೆ, ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ, ಕಬ್ಬನ್ ರಸ್ತೆ, ಸಿಟಿಒ ವೃತ್ತದಿಂದ ಕೆ.ಆರ್.ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್‌ವರೆಗೆ, ಎಂಜಿ ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ. ಇದರೊಂದಿಗೆ ಜ. 26ರ ಬೆಳಗ್ಗೆ 8.30ರಿಂದ 10.30ರವರೆಗೆ ಕಬ್ಬನ್ ರಸ್ತೆಯಲ್ಲಿ ಬಿಆರ್‌ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗಿನ ಎರಡೂ ದಿಕ್ಕುಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗಗಳು
ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್‌ಫೆಂಟ್ರಿ ರಸ್ತೆ-ಸಫೀನಾ ಪ್ಲಾಜಾ ಬಳಿ ಎಡ ತಿರುವು ಪಡೆದು ಮೇನ್ ಗಾರ್ಡ್ ರಸ್ತೆ-ಆಲೀಸ್ ವೃತ್ತ-ಕಾಮರಾಜ ರಸ್ತೆ ಮತ್ತು ಡಿಕೆನ್ಸನ್ ರಸ್ತೆ ಜಂಕ್ಷನ್‌ನಲ್ಲಿ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ-ಕಬ್ಬನ್ ರಸ್ತೆ ಮತ್ತು ಕಾಮರಾಜ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು
ಪಡೆದು ಕಬ್ಬನ್ ರಸ್ತೆ ಮೂಲಕ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದು
ಮಣಿಪಾಲ್ ಸೆಂಟರ್ ಜಂಕ್ಷನ್ ನಿಂದ ಬಿಆರ್‌ವಿ ಜಂಕ್ಷನ್ ಕಡೆಗೆ ಬರುವ ವಾಹನಗಳು ಕಾಮರಾಜ ರಸ್ತೆಗೆ ಎಡತಿರುವು
ಪಡೆದು, ಕಾವೇರಿ ಆರ್ಟ್ಸ್ ಮತ್ತು ಕ್ರಾಫ್ಟ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು, ಎಂ.ಜಿ.ರಸ್ತೆ ಮೂಲಕ ಅನಿಲ್ ಕುಂಬ್ಳೆ ವೃತ್ತದ ಕಡೆಗೆ ಸಾಗಬಹುದು
ಅನಿಲ್ ಕುಂಬ್ಳೆ ವೃತ್ತದಿಂದ ಕಬ್ಬನ್ ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ರಸ್ತೆಯಲ್ಲಿ ಬಲಕ್ಕೆ ತಿರುವು ಪಡೆದು ಇನ್‌ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾ ಬಳಿ ಎಡಕ್ಕೆ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ ಮೂಲಕ ಡಿಕನ್ಸನ್ ರಸ್ತೆ ಜಂಕ್ಷನ್ ಬಳಿ ಬಲಕ್ಕೆ ತಿರುವು ಪಡೆದು ಕಾಮರಾಜ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದು ಕಬ್ಬನ್ ರಸ್ತೆಗೆ
ತಲುಪಬಹುದು
ಎಂ.ಜಿ.ರಸ್ತೆಯಲ್ಲಿ ಕಾವೇರಿ ಆರ್ಟ್ಸ್ ಮತ್ತು ಕ್ರಾಫ್ಟ್ ವೃತ್ತದಿಂದ ಬಂದು, ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ
ಜಂಕ್ಷನ್‌ಗೆ ಹೋಗುವ ವಾಹನಗಳು ನೇರವಾಗಿ ಎಂ.ಜಿ.ರಸ್ತೆಯಲ್ಲಿ ಸಾಗಿ ಅನಿಲ್ ಕುಂಬ್ಳೆ ವೃತ್ತದ ಬಳಿಗೆ ಬಂದು, ಬಲ ತಿರುವು ಪಡೆದು, ಬಿಆರ್‌ವಿ ಜಂಕ್ಷನ್‌ನಲ್ಲಿ ನೇರವಾಗಿ ಸಂಚರಿಸಿ, ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ಮುಂದೆ ಸಾಗಬಹುದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.