28, ಮಾ.11ಕ್ಕೆ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮ


Team Udayavani, Jan 25, 2018, 4:50 PM IST

kol-2.jpg

ಕೋಲಾರ: ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜನವರಿ 28 ರಂದು ಮೊದಲ ಸುತ್ತಿನ ಹಾಗೂ ಮಾರ್ಚ್‌ 11 ರಂದು ಎರಡನೇ ಸುತ್ತಿನ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಲತಾ ಪ್ರಮಿಳಾ ತಿಳಿಸಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಮೊದಲ ಸುತ್ತಿನ ಕಾರ್ಯಕ್ರಮದ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಸಹಭಾಗಿತ್ವ ಅತ್ಯಗತ್ಯ: ಕಾರ್ಯಕ್ರಮದ ಯಶಸ್ಸಿಗೆ ಶಿಕ್ಷಣ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಸಾರಿಗೆ, ಎನ್‌ ಜಿಒಗಳು,ರೋಟರಿ ಮುಂತಾದ ಸಂಸ್ಥೆಗಳ ಸಹಭಾಗಿತ್ವ ಅತ್ಯಗತ್ಯ ಎಂದು ತಿಳಿಸಿದರು.

ಪ್ರತಿ ಶನಿವಾರ ಶಾಲೆಗಳಿಂದ ಜಾಥಾ: ಕಾರ್ಯಕ್ರಮದ ಬಗ್ಗೆ ಪ್ರಚಾರ ನೀಡಲು ಪ್ರತಿ ಶನಿವಾರ ಶಾಲೆಗಳಿಂದ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಗ್ರಾಮ ಪಂಚಾಯಿತಿಗಳು ಭಿತ್ತಿ ಪತ್ರಗಳು, ಕರಪತ್ರಗಳನ್ನು ಹಂಚಬೇಕು. ಚರ್ಚ್‌ಗಳು,ಮಸೀದಿಗಳ ಮೂಲಕ ಮೈಕ್‌ನಲ್ಲಿ ಪ್ರಚಾರ ನಡೆಸಲಾಗುವುದು. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಸಭೆ ನಡೆಸಿ ಬೂತ್‌ ಮಟ್ಟದಲ್ಲಿ ಅವರಿಂದ ಚಾಲನೆ ನೀಡಬೇಕು. ಲಸಿಕೆ ನೀಡುವ ದಿನಗಳಂದು ಶಾಲೆಗಳು ತೆರೆದಿರಬೇಕೆಂದು ಮಾಹಿತಿ ನೀಡಿದರು.

ಜಂತುಹುಳು ನಿವಾರಣಾ ಮಾತ್ರೆ: ರಾಷ್ಟ್ರೀಯ ಜಂತುಹುಳು ನಿವಾರಣಾ ಮಾತ್ರೆಯನ್ನು ಫೆಬ್ರವರಿ 12 ರಂದು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ನೀಡಬೇಕು. ಚಿಕ್ಕ ಮಕ್ಕಳಿಗೆ ಅರ್ಧ ಮಾತ್ರೆ ಹಾಗೂ 2 ರಿಂದ 19 ವರ್ಷದವರೆಗಿನವರಿಗೆ 1 ಮಾತ್ರೆ ನೀಡಬೇಕೆಂದರು.

 30ಕ್ಕೆ ಲೆಪ್ರಸಿ ಚಿಕಿತ್ಸೆ: ಜನವರಿ 30 ರಂದು ಲೆಪ್ರಸಿ ಚಿಕಿತ್ಸೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಲೆಪ್ರಸಿ ಕಾಯಿಲೆಯಿಂದ ಗುಣಮುಖರಾದವರಿಗೆ ವಿಕಲ ಚೇತನರಿಗೆ ದೊರೆಯುವ ಎಲ್ಲಾ ಸೌಲಭ್ಯಗಳು ಸರ್ಕಾರದಿಂದ ದೊರೆಯುತ್ತವೆ ಎಂದು ತಿಳಿಸಿದರು.

ಮತದಾನದ ಕುರಿತೂ ಪ್ರಚಾರ ಮಾಡಿ: ಪಲ್ಸ್‌ ಪೋಲಿಯೋ ಕಾರ್ಯಕ್ರಮದ ಬಗ್ಗೆ ಪ್ರಚಾರ ಮಾಡುವಾಗ ಮತದಾನದ ಮಹತ್ವದ ಕುರಿತು ಹೆಚ್ಚಿನ ಪ್ರಚಾರ ಮಾಡಬೇಕು. ಕಾರ್ಯಕ್ರಮಕ್ಕೆ ಬಳಸುವ ಪ್ರತಿ ಬ್ಯಾನರ್‌ನಲ್ಲಿ ಮತದಾನದ ಬಗ್ಗೆ ಘೋಷಣೆಗಳು ಇರಬೇಕು. ಚುನಾವಣಾ ಶಾಖೆಯಿಂದ ಮತದಾನದ ಬಗ್ಗೆ ಇರುವ ಭಿತ್ತಿ ಪತ್ರಗಳು, ಕರಪತ್ರಗಳನ್ನು ಬಳಸಿಕೊಂಡು ವ್ಯಾಪಕ ಪ್ರಚಾರ ನೀಡಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ತಿಳಿಸಲಾಯಿತು. ಸಭೆಯಲ್ಲಿ ಪಂಚಾಯತ್‌ ಅಭಿವೃದ್ಧಿ ಅಧಿಕಾರಗಳು, ಆರೋಗ್ಯಾಧಿಕಾರಿಗಳು, ಸಿಆರ್‌ಪಿಗಳು,ನಗರಸಭೆ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದ.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.