ನಾಟಕ ಜನರನ್ನು ತಲುಪಬಲ್ಲ ಮಾಧ್ಯಮ

Team Udayavani, Jan 25, 2018, 5:53 PM IST

tmk-1.jpg

ತುಮಕೂರು: ನಾಟಕ ಬಹುಬೇಗ ಜನರನ್ನು ತಲುಪಬಲ್ಲ ಮಾಧ್ಯಮವಾಗಿದ್ದು, ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜನರ ಗಮನ ಸೆಳೆಯಲು ಸೂಕ್ತ ಮಾಧ್ಯಮ ಎಂದು ಕನ್ನಡ ಸಾಹಿತ್ಯ ಪರಿಷತ್‌ ತುಮಕೂರು ನಗರ ಘಟಕದ ಅಧ್ಯಕ್ಷೆ ಅನ್ನಪೂರ್ಣ ತಿಳಿಸಿದರು.

 ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹ ಯೋಗದಲ್ಲಿ ಆಯೋಜಿಸಿದ್ದ ಸಿದ್ದಮಾದೇಶ ಮತ್ತು ಪಿ.ಲಂಕೇಶರ ತೆರೆಗಳು ನಾಟಕಗಳ ಪ್ರದರ್ಶನಕ್ಕೆ
ಚಾಲನೆ ನೀಡಿ ಮಾತನಾಡಿದರು. ಸಮಾಜದಲ್ಲಿನ ಆಗು ಹೋಗುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ನಾಟಕಗಳು ಹೆಚ್ಚು ಪರಿಣಾಮಕಾರಿ ಎಂದರು.

ಕಲಾವಿದರನ್ನು ಪ್ರೋತ್ಸಾಹಿಸಿ: ಅನೇಕ ಸವಾಲುಗಳ ನಡುವೆಯೂ ಕಲಾವಿದರು ಒಂದು ವಸ್ತು ವಿಷಯವನ್ನು ರಂಗಕ್ಕೆ ಅಳವಡಿಸಿದಾಗ ಅದನ್ನು ನೋಡಿ, ಚಪ್ಪಾಳೆ ತಟ್ಟಿ, ಪ್ರೋತ್ಸಾಹಿಸುವ ಮನಸ್ಸುಗಳ ಅಗತ್ಯ.ಸಾಂಸ್ಕೃತಿಕ ಮನಸ್ಸುಗಳ ಸಂಖ್ಯೆ ಕುಗ್ಗುತಿದ್ದು, ಸಮಾಜದಲ್ಲಿ ನಡೆಯುತ್ತಿರುವ ಎಷ್ಟೋ ಆನಾಹುತಗಳಿಗೆ ಇದೇ ಕಾರಣವಾಗಿದೆ ಎಂದು ನುಡಿದರು.

ಚಿಂತನೆಗೆ ಹಚ್ಚುವ ನಾಟಕಗಳು: ಡಾ.ಕೆ.ಎಸ್‌. ಕುಮಾರ್‌ ಮಾತನಾಡಿ, ನಾಟಕಗಳು ಜನರಲ್ಲಿ ಚಿಂತನೆ ಹೆಚ್ಚುವ ಕೆಲಸ ಮಾಡುತ್ತವೆ. ಇದನ್ನೇ ಅರಿತೇ ನಮ್ಮ ಪೂರ್ವಜರು ನಾಟಕ, ಗಣೇಶ ಉತ್ಸವಗಳ ಮೂಲಕ ಜನರನ್ನು ಸಂಘಟಿಸುವ ಕೆಲಸ ಮಾಡುತ್ತಿದ್ದು, ಇಂದಿನ ಬದಲಾವಣೆಗೆ ತಕ್ಕಂತೆ, ರಂಗಭೂಮಿಯಲ್ಲಿಯೂ ಬದಲಾವಣೆಗಳನ್ನು ತಂದುಕೊಂಡರೂ ಪ್ರೇಕ್ಷಕರ ಸ್ಪಂದನೆ ಇಲ್ಲದಿರುವುದು ನೋವಿನ ಸಂಗತಿ ಎಂದರು. 

ಸಂಸ್ಕಾರ ಮತ್ತು ಸಂಸ್ಕೃತಿ ಸಂಗಮ: ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಟಿ.ಎ.ವೀರಭದ್ರಯ್ಯ ಮಾತನಾಡಿ, ಗ್ರಾಮೀಣ ಕ್ರಿಯಾತ್ಮಕ ರಂಗ ತಂಡದ ಹಲವು ನಾಟಕಗಳನ್ನು ನೋಡಿದ್ದು, ಹೊಸ ವಿಚಾರಗಳ ಜೊತೆಗೆ, ನಾಡಿನ ಪ್ರಸ್ತುತ ಸಮಸ್ಯೆಗಳನ್ನು ಜನರ ಮುಂದಿಡಲು ನಾಟಕವನ್ನು ಯುವ ಜನರು ಬಳಸಿಕೊಳ್ಳುತ್ತಿದ್ದಾರೆ.

ಈ ಹಿಂದೆ ಸ್ವಾತಂತ್ಯ ಹೋರಾಟಗಳ ಸಂದರ್ಭದಲ್ಲಿಯೂ ಜನರಿಗೆ ನಾಟಕಗಳ ಮೂಲಕವೇ ಸಂದೇಶಗಳನ್ನು ತಲುಪಿಸುವ ಕೆಲಸ ಮಾಡಿರುವುದನ್ನು ನಾವು ಇತಿಹಾಸದಲ್ಲಿ ಕಾಣುತ್ತವೆ. ಸಂಸ್ಕಾರ ಮತ್ತು ಸಂಸ್ಕೃತಿ ಎರಡು ನಾಟಕಗಳಿಂದ ಪಡೆಯುಬಹುದು ಎಂದು ಅವರು ಹೇಳಿದರು. 

ಕವಿ ಡಾ.ಜಿ.ಹನುಮಂತರಾಯ ಪಾಲಸಂದ್ರ ಮಾತನಾಡಿ, ಪಿ.ಲಂಕೇಶ್‌ ತಮ್ಮ ನಾಟಕಗಳ ಮೂಲಕ ಪ್ರಸ್ತುತ ವಿದ್ಯಮಾನಗಳಿಗೆ ಜನರನ್ನು ಮುಖಾ ಮುಖೀಯಾಗಿಸುವ ಕೆಲಸ ಮಾಡುತ್ತಿದ್ದರೂ, ಅವರ ತೆರೆಗಳು ನಾಟಕ 70ರ ದಶಕದಲ್ಲಿ ರಚನೆಯಾದರೂ ಇಂದಿಗೂ ಪ್ರಸ್ತುತವೆನಿಸುತ್ತದೆ. ಸಾರ್ವಜನಿಕ ಸಮಸ್ಯೆಗಳಿಗೆ ಕನ್ನಡಿಯಾಗುವ ನಾಟಕಗಳನ್ನು ಪ್ರೇಕ್ಷಕರು ಪ್ರೋತ್ಸಾಹಿಸಬೇಕು ಎಂದರು.

ರಂಗಾಸಕ್ತರನ್ನು ಸಂಘಟಿಸಿ: ಸಾಹಿತಿ ಶೈಲಾ ನಾಗರಾಜು ಮಾತನಾಡಿ, ನಾಟಕಗಳನ್ನು ಜನಮುಖೀಯಾಗಿಸುವ ಕೆಲಸ ಮಾಡಿದ ರೀತಿಯಲ್ಲಿ ರಂಗಾಸಕ್ತರನ್ನು ಸಂಘಟಿಸುವ ಅನಿವಾರ್ಯ ಪರಿಸ್ಥಿತಿ ಇಂದು ಕಲಾವಿದರಿಗೆ ಬಂದೊದಗಿದೆ. ರಂಗದ ಮೇಲೆ ಮತ್ತು ರಂಗದ ಹಿಂದೆ ಕೆಲಸ ಮಾಡುವುದರ ಜೊತೆಗೆ, ಸಾಮಾಜಿಕ ಜಾಲತಾಣ, ಆಧುನಿಕ ತಂತ್ರಜ್ಞಾನದ ಸಹಾಯದೊಂದಿಗೆ ಹೆಚ್ಚು  ಜನರನ್ನು ತಲುಪಿದರೆ ನಾಟಕದ ಆಶಯಗಳು ಸಫ‌ಲವಾಗುತ್ತವೆ ಎಂದು ಹೇಳಿದರು.

ವೇದಿಕೆಯಲ್ಲಿ ಬೆಳಗುಂಬ ಜಿಪಂಸದಸ್ಯ ನರಸಿಂಹಮೂರ್ತಿ, ರಂಗನಿರ್ದೇಶಕ ಕಾಂತರಾಜು ಕೌತುಮಾರನಹಳ್ಳಿ, ಗ್ರಾಮೀಣ ಕ್ರಿಯಾತ್ಮಕ ರಂಗತಂಡದ ಸಂಚಾಲಕ ಶಿವಕುಮಾರ್‌ ತಿಮ್ಮಲಾಪುರ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಂತರ ಹೊರೆಯಾಲ ದೊರೆಸ್ವಾಮಿ ಅವರು ರಚಿಸಿರುವ ಸಿದ್ದಮಾದೇಶ ಮತ್ತು ಪಿ.ಲಂಕೇಶರ ತೆರೆಗಳು ನಾಟಕಗಳು ಪ್ರದರ್ಶನಗೊಂಡವು. 

ಟಾಪ್ ನ್ಯೂಸ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.