ಕೇಂದ್ರ ಅನುದಾನದ ಲೆಕ್ಕ ಕೊಡ್ತೇನೆ : ಅಮಿತ್ ಶಾ ವಾಗ್ಧಾಳಿ
Team Udayavani, Jan 26, 2018, 6:25 AM IST
ಮೈಸೂರು: ‘ನರೇಂದ್ರ ಮೋದಿ ಸರಕಾರ ಕಳೆದ 3 ವರ್ಷಗಳಲ್ಲಿ ಕರ್ನಾಟಕಕ್ಕೆ ಏನು ಕೊಟ್ಟಿದೆ ಎಂದು ಪ್ರಶ್ನಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನೀವು ರಾಜ್ಯಕ್ಕೆ ಏನು ಕೊಟ್ಟಿದ್ದೀರಿ ಹೇಳಿ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಶ್ನಿಸಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಬಿಜೆಪಿ ಪರಿವರ್ತನ ಯಾತ್ರೆಯ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
‘ಅಣ್ಣ ಸಿದ್ದರಾಮಣ್ಣ’ ಎಂದು ಸಂಬೋಧಿಸಿದ ಅಮಿತ್ ಶಾ, ಐಟಿ ಸಿಟಿ ಬೆಂಗಳೂರಿನ ರಸ್ತೆಗಳು ಗುಂಡಿ ಬಿದ್ದಿವೆ. ರೈತರ ಸರಣಿ ಆತ್ಮಹತ್ಯೆಗಳಾಗಿವೆ. ಮಹಿಳೆಯರ ಮೇಲೆ ಅತ್ಯಾಚಾರ, ದಲಿತರ ಮೇಲೆ ದೌರ್ಜನ್ಯಗಳು ನಡೆದಿವೆ. ಇದಕ್ಕೆಲ್ಲ ಏನು ಕ್ರಮ ಕೈಗೊಂಡಿರಿ, ಯುವ ಜನತೆಗೆ ಏನು ಮಾಡಿದಿರಿ ಎಂದು ಪ್ರಶ್ನಿಸಿದರು.
ಲೆಕ್ಕ ಕೊಡ್ತೇನೆ: ಕಳೆದ 60 ವರ್ಷಗಳಲ್ಲಿ ಕೊಡದ ಅನುದಾನವನ್ನು ಕೇಂದ್ರದ ಬಿಜೆಪಿ ಸರಕಾರ ಕರ್ನಾಟಕಕ್ಕೆ ಕೊಟ್ಟಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಇದ್ದಾಗ 13ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಕೊಟ್ಟದ್ದು, 88 ,583 ಕೋಟಿ ರೂ. ಮಾತ್ರ. ಬಿಜೆಪಿ ಸರಕಾರದ ಅವಧಿಯಲ್ಲಿ 14ನೇ ಹಣಕಾಸು ಆಯೋಗದಿಂದ 2,19,506 ಕೋಟಿ ರೂ. ಅನುದಾನ ಕೊಟ್ಟಿದೆ. ಹೆಚ್ಚುವರಿಯಾಗಿ ಬಂದಿ ರುವ ಈ 1.30 ಲಕ್ಷ ಕೋಟಿ ರೂ. ಎಲ್ಲಿ ಹೋಯಿತು? ನಿಮ್ಮ ಹಳ್ಳಿಗಳಿಗೆ ಈ ಹಣ ಬಂದಿದೆಯಾ? ನಿಮ್ಮ ಹಳ್ಳಿಗಳ ಅಭಿವೃದ್ಧಿ ಆಗಿದೆಯಾ ಎಂದು ಜನರನ್ನು ಪ್ರಶ್ನಿಸಿದರು.
ಹಾಗಿದ್ದರೆ ಈ ಹಣ ಎಲ್ಲಿ ಹೋಯಿತು ಎಂಬುದನ್ನು ಹೇಳುತ್ತೇನೆ ಕೇಳಿ. 4 ವರ್ಷಗಳ ಹಿಂದೆ ಶೀಟ್ ಮನೆಯಲ್ಲಿ ವಾಸಿಸುತ್ತಿದ್ದ, ಮೊಪೆಡ್‌ನಲ್ಲಿ ಓಡಾಡುತ್ತಿದ್ದ ಕಾಂಗ್ರೆಸ್ ಮುಖಂಡರ ಮನೆಗಳೀಗ ಮಹಲುಗಳಾಗಿವೆ. ಅವರ ಮನೆಯ ಮುಂದೆ ಈಗ ಐಷಾರಾಮಿ ಕಾರುಗಳು ನಿಲ್ಲುತ್ತಿವೆ. ಅಲ್ಲಿಗೇ ಹೋಗಿದೆ ಕೇಂದ್ರ ಕೊಟ್ಟ ಹಣ ಎಂದು ಟೀಕಿಸಿದರು.
14ನೇ ಹಣಕಾಸು ಆಯೋಗದ ಅನುದಾನದ ಜತೆಗೆ ಬೇರೆ ಬೇರೆ ಯೋಜನೆಗಳ ಮೂಲಕ ಹೆಚ್ಚುವರಿಯಾಗಿ 1.30 ಲಕ್ಷ ಕೋಟಿ ರೂ. ಅನುದಾನವನ್ನು ಕರ್ನಾಟಕಕ್ಕೆ ಕೊಟ್ಟಿದೆ. 3.33 ಲಕ್ಷ ಕುಟುಂಬಗಳಿಗೆ ಉಚಿತ ಗ್ಯಾಸ್ ಸಂಪರ್ಕ ನೀಡಲಾಗಿದೆ. ಮೋದಿ ಸರಕಾರ ಬಂದ ಮೇಲೆ 106 ಹೊಸ ಯೋಜನೆಗಳನ್ನು ಜಾರಿ ಮಾಡಿದೆ. ಈ ಎಲ್ಲ ಯೋಜನೆಗಳು ಜನತೆಗೆ ತಲುಪಿದರೆ ಮೋದಿ ಅವರ ಜನಪ್ರಿಯತೆ ಹೆಚ್ಚುತ್ತದೆ ಎಂಬ ಭಯದಿಂದ ಸಿದ್ದರಾಮಯ್ಯ ಸರಕಾರ, ಕೇಂದ್ರದ ಯೋಜನೆಗಳನ್ನು ಜಾರಿ ಮಾಡುತ್ತಿಲ್ಲ ಎಂದು ದೂರಿದರು.
ಬಂದ್ ನಡುವೆಯೂ ಯಾತ್ರೆ ಯಶಸ್ವಿ: ಕನ್ನಡಪರ ಸಂಘಟನೆಗಳ ಕರ್ನಾಟಕ ಬಂದ್ ಕರೆ ನಡುವೆಯೂ ಮೈಸೂರಿನಲ್ಲಿ ಅಮಿತ್ ಶಾ ಭಾಗವಹಿಸಿದ್ದ ಪರಿವರ್ತನ ಯಾತ್ರೆ ಯಶಸ್ಸಿನ ಮೂಲಕ ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಬಿಜೆಪಿ ಭರ್ಜರಿ ಶಕ್ತಿ ಪ್ರದರ್ಶನ ಮಾಡಿತು.
ದೇವಿ ದರ್ಶನ: ದಿಲ್ಲಿಗೆ ತುರ್ತಾಗಿ ತೆರಳ ಬೇಕಿದ್ದುದರಿಂದ ತಮ್ಮ ಭಾಷಣದ ಬಳಿಕ ವೇದಿಕೆಯಿಂದ ನಿರ್ಗಮಿಸಿದ ಅಮಿತ್ ಶಾ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ನೀವು ಎಸ್‌ಡಿಪಿಐ ಬೆಂಬಲಿಸುತ್ತೀರಾ ?
ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಬಿಜೆಪಿ, ಆರೆಸ್ಸೆಸ್ ಸಹಿತ ಸಂಘಪರಿವಾರದ 20ಕ್ಕೂ ಹೆಚ್ಚು ಕಾರ್ಯ ಕರ್ತರ ಕಗ್ಗೊಲೆಯಾಗಿದೆ. ಆದರೆ, ಸಿದ್ದರಾಮಯ್ಯ ಸರಕಾರ ಎಸ್‌ಡಿಪಿಐ ವಿರುದ್ಧದ ಪ್ರಕರಣವನ್ನು ಹಿಂಪಡೆಯುತ್ತದೆ. ಹಾಗಿದ್ದರೆ ನೀವು ಎಸ್‌ಡಿಪಿಐಯನ್ನು ಬೆಂಬಲಿಸುತ್ತೀರಾ ಎಂದು ಸಿದ್ದರಾಮಯ್ಯ ಅವರನ್ನು ಅಮಿತ್ ಶಾ ಪ್ರಶ್ನಿಸಿದರು. ನಮ್ಮ 20ಕ್ಕೂ ಹೆಚ್ಚು ಕಾರ್ಯಕರ್ತರ ಕೊಲೆಯನ್ನು ವ್ಯರ್ಥವಾಗಲು ಬಿಡಲ್ಲ. ಮುಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಈ ಕೊಲೆಗಡುಕರು ಪಾತಾಳದಲ್ಲಿ ಅಡಗಿದ್ದರೂ ಪತ್ತೆಹಚ್ಚಿ ಜೈಲಿಗೆ ಕಳುಹಿಸುತ್ತೇವೆಂದು ಗುಡುಗಿದ ಅವರು, ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವ ಮೂಲಕ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಿ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.