ದ.ಕ., ಉಡುಪಿ ಜಿಲ್ಲೆಗೆ ತಟ್ಟದ ಬಂದ್ ಬಿಸಿ
Team Udayavani, Jan 26, 2018, 10:35 AM IST
ಮಂಗಳೂರು/ಉಡುಪಿ: ಮಹಾದಾಯಿ ನದಿ ನೀರು ಸಮಸ್ಯೆ ಇತ್ಯರ್ಥ ಆಗ್ರಹಿಸಿ ಕನ್ನಡಪರ ಒಕ್ಕೂಟ ಹಾಗೂ ಕೆಲವು ರೈತ ಸಂಘಟನೆಗಳು ಗುರುವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರತಿಕ್ರಿಯೆ ನೀರಸವಾಗಿತ್ತು.
ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ದಲ್ಲಿ ಹೊರ ಜಿಲ್ಲೆಗಳಿಗೆ ತೆರಳುವ ಪ್ರಯಾ ಣಿಕರು ಕೊಂಚ ಆತಂಕಕ್ಕೆ ಒಳಗಾಗಿದ್ದರು. ಮೈಸೂರು, ಬೆಂಗಳೂರು ಸಹಿತ ವಿವಿಧೆಡೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಈ ಕಡೆಗಳಿಗೆ ಮಂಗಳೂರು ವಿಭಾಗದಿಂದ ತೆರಳುವ ಕೆಲವು ಬಸ್‌ಗಳು ಸಂಚ ರಿಸಲಿಲ್ಲ. ವಿದ್ಯಾರ್ಥಿಗಳು, ಹೊರ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾದರು. ಬೆಳಗ್ಗೆ 10.30ರ ಬಳಿಕ ಕೆಎಸ್‌ಆರ್‌ಟಿಸಿ ಸಂಚಾರ ಸಹಜ ಸ್ಥಿತಿಗೆ ಮರಳಿತು.
ಇದೇ ಸ್ಥಿತಿ ಉಡುಪಿ, ಕುಂದಾಪುರದಲ್ಲಿಯೂ ಉಂಟಾಗಿತ್ತು. ಉಡುಪಿ ಜೆನರ್ಮ್ ಸರಕಾರಿ ಬಸ್ ನಿಲ್ದಾಣದಿಂದ ಯಾವುದೇ ಬಸ್‌ಗಳು ಸಂಚರಿಸದ ಕಾರಣ ಪ್ರಯಾಣಿಕರು ಖಾಸಗಿ ಬಸ್‌ಗಳನ್ನು ಅವಲಂಬಿಸ ಬೇಕಾಯಿತು. ಮಧ್ಯಾಹ್ನದ ಬಳಿಕ ಉಡುಪಿ ಯಿಂದ ಹೆಬ್ರಿ, ಕಾರ್ಕಳ ಕಡೆಗೆ ಹೋಗುವ ಕೆಲವು ಬಸ್‌ಗಳು ಸಂಚರಿಸಿದವು.
ಕುಂದಾಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಬೆಳಗ್ಗೆ ಕೆಲಕಾಲ ತಡೆಹಿಡಿದದ್ದರಿಂದ ವಿದ್ಯಾರ್ಥಿಗಳು, ನಿತ್ಯ ಸಂಚರಿಸುವ ಜನರು ಸಂಕಷ್ಟ ಅನುಭವಿಸಿದರು. ಗಂಗೊಳ್ಳಿ, ಸಿದ್ದಾಪುರ, ಹಾಲಾಡಿ ಭಾಗಗಳಿಗೆ ಮಧ್ಯಾಹ್ನದ ಬಳಿಕ ಸಂಚಾರ ಆರಂಭಗೊಂಡಿತು. ಹುಬ್ಬಳ್ಳಿ, ಉತ್ತರ ಕನ್ನಡ, ಶಿರಸಿ, ಯಲ್ಲಾಪುರ ಭಾಗಗಳಿಗೆ ಸಂಚರಿಸುವ ಸರಕಾರಿ ಬಸ್‌ಗಳೆಲ್ಲ ಕುಂದಾಪುರ ಬಸ್ ನಿಲ್ದಾಣದಲ್ಲಿ ನಿಂತಿದ್ದವು. ಸಂಜೆ ಬಳಿಕ ಅಂತರ್ ಜಿಲ್ಲಾ ಬಸ್ ಸಂಚಾರ ಆರಂಭಗೊಂಡಿತು. ಸಿಟಿ, ಖಾಸಗಿ ಬಸ್, ಆಟೋ ರಿಕ್ಷಾ ಸಹಿತ ಅನ್ಯ ವಾಹನ ಸಂಚಾರ ಎಂದಿನಂತೆಯೇ ಇತ್ತು.
ರೈಲು ತಡೆದು ಪ್ರತಿಭಟನೆ
ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ. ನಾರಾಯಣ ಗೌಡ ಬಣದ ದ.ಕ. ಘಟಕವು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಕೇರಳಕ್ಕೆ ತೆರಳುವ ರೈಲನ್ನು ತಡೆದು ಪ್ರತಿಭಟನೆ ನಡೆಸಿತು.ಈ ಸಂದರ್ಭದಲ್ಲಿ ತುಳು ರಕ್ಷಣಾ ವೇದಿಕೆ ಕಾರ್ಯಕರ್ತರು ಮತ್ತು ಸ್ಥಳೀಯರು ಕರವೇ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡು, ನೇತ್ರಾವತಿ ತಿರುವು ಯೋಜನೆ ವಿರುದ್ಧ ಪ್ರತಿಕ್ರಿಯಿಸದ ನೀವು ಈಗೇಕೆ ಬೆಂಬಲ ನೀಡಿದ್ದೀರಿ ಎಂದು ಪ್ರಶ್ನಿಸಿದರು.
ಬಸ್ ನಿಲುಗಡೆಗೆ ಆದೇಶಿಸಿಲ್ಲ
ಮಹಾದಾಯಿ ನದಿ ನೀರಿನ ಸಮಸ್ಯೆ ನಿವಾ ರಣೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಕರಾವಳಿ ಸಹಿತ ಎಲ್ಲೂ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ರದ್ದು ಮಾಡುವಂತೆ ಕೆಎಸ್‌ಆರ್‌ಟಿಸಿ ನಿಗಮ ದಿಂದ ಯಾವುದೇ ಅಧಿಕೃತ ಆದೇಶ ನೀಡಿಲ್ಲ. ಆದರೆ ಬೆಂಗಳೂರು ಮತ್ತಿತರ ಭಾಗ ಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಸ್‌ಗಳಿಗೆ ಹಾನಿಯಾಗುವುದನ್ನು ತಪ್ಪಿಸಲು ಮುಂಚಿತ ವಾಗಿ ಬಸ್ ಸಂಚಾರ ರದ್ದುಗೊಳಿಸಲಾಗಿತ್ತು.
ಕೆ. ಗೋಪಾಲ ಪೂಜಾರಿ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.