ಜೈಲು ಹಕ್ಕಿಗಳಿಗೆ ಸಿಗಲಿಲ್ಲ ಬಿಡುಗಡೆ ಭಾಗ್ಯ


Team Udayavani, Jan 26, 2018, 11:59 AM IST

Parappana_Agrahara_760x400.jpg

ಬೆಂಗಳೂರು: ಸನ್ನಡತೆ ಆಧಾರದಲ್ಲಿ ಬಿಡುಗಡೆಗಾಗಿ ಈ ಬಾರಿಯ ಗಣರಾಜ್ಯೋತ್ಸವವನ್ನು ಎದುರು ನೋಡುತ್ತಿದ್ದ 100ಕ್ಕೂ ಜೈಲುಹಕ್ಕಿಗಳಿಗೆ ಮತ್ತೆ ನಿರಾಸೆ ಮೂಡಿದೆ. ಪರಪ್ಪನ ಅಗ್ರಹಾರ, ರಾಜ್ಯದ 8 ಕೇಂದ್ರ ಕಾರಾಗೃಹಗಳು ಸೇರಿ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ಸನ್ನಡತೆ ಆಧಾರದಲ್ಲಿ ಬಿಡುಗಡೆಗೆ ಶಿಫಾರಸುಗೊಂಡಿರುವ ಕೈದಿಗಳ ಪಟ್ಟಿಗೆ ರಾಜ್ಯಪಾಲರ ಅಂಕಿತ ಇನ್ನೂ ಬಿದ್ದಿಲ್ಲ. ಹೀಗಾಗಿ ಗಣರಾಜ್ಯೋತ್ಸವಕ್ಕೆ ಕೈದಿಗಳು ಬಿಡುಗಡೆಯಾಗುವ ನಿರೀಕ್ಷೆ ಹುಸಿಯಾಗಿದೆ.

ಬಿಡುಗಡೆ ಪಟ್ಟಿಯಲ್ಲಿರುವ ಸಜಾಕೈದಿಗಳ ಪೈಕಿ ಕೆಲವರ ಹೆಸರು ಕಳೆದ ವರ್ಷವೇ ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆ ಬಿಡುಗಡೆ ಪಟ್ಟಿಯಲ್ಲಿದ್ದವು. ಈ ಬಾರಿಯಾದರೂ ತಮ್ಮ ಬಿಡುಗಡೆಯಾಗಬಹುದೆನ್ನುವ ನಿರೀಕ್ಷೆಯಲ್ಲಿದ್ದ ಕೈದಿಗಳು ಹಾಗೂ ಅವರನ್ನು ಬರಮಾಡಿಕೊಳ್ಳಲು ಚಾತಕ ಪಕ್ಷಿಗಳಂತೆ‌ ಕಾಯುತ್ತಿದ್ದ ಸಂಬಂಧಿಕರು, ಸ್ನೇಹಿತರು ಮತ್ತಷ್ಟು ದಿನಗಳ ಕಾಲ ಕಾಯಬೇಕಿದೆ.

ಕೇಂದ್ರ ಪರಪ್ಪನ ಅಗ್ರಹಾರದಿಂದ 14 ವರ್ಷ ಜೈಲು ಶಿಕ್ಷೆ ಪೂರೈಸಿರುವ 43 ಮಂದಿ ಪುರುಷ ಕೈದಿಗಳು, ಓರ್ವ ಮಹಿಳೆ , ಬಳ್ಳಾರಿ ಜೈಲಿನಿಂದ 12, ಬಿಜಾಪುರ ಜೈಲಿಂದ 11, ಮೈಸೂರು ಕಾರಾಗೃಹದಿಂದ 16, ಬೆಳಗಾವಿ ಜೈಲಿಂದ 16 ಮಂದಿ, ಧಾರವಾಡ ಜೈಲಿಂದ 8 ಹಾಗೂ ತುಮಕೂರಿನ ಮಹಿಳಾ ಬಂಧಿಖಾನೆಯಿಂದ ಓರ್ವ ಸಜಾಕೈದಿ ಮಹಿಳೆ ಸೇರಿ ವಿವಿಧ ಕಾರಾಗೃಹಗಳಿಂದ 100ಕ್ಕೂ ಅಧಿಕ ಕೈದಿಗಳ ಪಟ್ಟಿಯನ್ನು ರಾಜ್ಯಸರ್ಕಾರಕ್ಕೆ ಡಿಸೆಂಬರ್‌ ತಿಂಗಳಿನಲ್ಲಿಯೇ ಕಳುಹಿಸಿಕೊಡಲಾಗಿತ್ತು ಎಂದು ಉನ್ನತ ಮೂಲಗಳಿಂದ “ಉದಯವಾಣಿ’ಗೆ ತಿಳಿದು ಬಂದಿದೆ. 

ಪ್ರತಿಬಾರಿಯಂತೆ ಈ ಬಾರಿಯೂ ಸನ್ನಡತೆ ಆಧಾರದಲ್ಲಿ ಬಿಡುಗಡೆಗೆ ಸಿದ್ಧಪಡಿಸಲಾಗಿರುವ ಕೈದಿಗಳ ಶಿಫಾರಸು ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗಿತ್ತು. ಸರ್ಕಾರ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿದ ಬಳಿಕವೇ ಬಿಡುಗಡೆ ಮಾಡುತ್ತೇವೆ. ಆದರೆ, ಇದುವರೆಗೂ ಅಂತಹ ಯಾವುದೇ ಆದೇಶ ಬಂದಿಲ್ಲ ಎಂದು ಕಾರಾಗೃಹ ಇಲಾಖೆಯ ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದರು. 

ವಿಳಂಬ ಧೋರಣೆ ಕಾರಣವೇ?: ರಾಜ್ಯಸರ್ಕಾರಕ್ಕೆ ಡಿಸೆಂಬರ್‌ನಲ್ಲಿಯೇ ಕೈದಿಗಳ ಪಟ್ಟಿ ಕಳುಹಿಸಿಕೊಡಲಾಗಿದೆ. ನಿಯಮಗಳ ಪ್ರಕಾರ ಈ ಪಟ್ಟಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದ ಬಳಿಕ ರಾಜ್ಯಪಾಲರ ಅಂಕಿತ ಹಾಕಬೇಕು. ಆದರೆ, ಡಿಸೆಂಬರ್‌ 28 ಹಾಗೂ ಜನವರಿ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪಟ್ಟಿಯನ್ನು ಮಂಡಿಸುವ ಗೋಜಿಗೆ ಹೋಗಿಲ್ಲ. ಜ.17ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 105 ಪುರುಷ ಸಜಾಕೈದಿಗಳು ಹಾಗೂ ನಾಲ್ವರು ಮಹಿಳಾ ಕೈದಿಗಳ ಬಿಡುಗಡೆಗೆ ಅನುಮತಿ ನೀಡಿ ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಹೀಗಾಗಿ ವಿಳಂಬವಾಗಿದೆ ಎಂದು ಮೂಲಗಳು ತಿಳಿಸಿವೆ. 

“ಗಣರಾಜ್ಯೋತ್ಸವಕ್ಕೆ ಸನ್ನಡತೆ ಆಧಾರದಲ್ಲಿ ಶಿಫಾರಸು ಮಾಡಲಾಗಿದ್ದ ನೂರಕ್ಕೂ ಹೆಚ್ಚು ಕೈದಿಗಳ ಪಟ್ಟಿಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ರಾಜ್ಯಪಾಲರ ಅನುಮತಿಗೆ ಕಳುಹಿಸಿಕೊಡಲಾಗಿದೆ.ರಾಜ್ಯಪಾಲರು ಒಪ್ಪಿಗೆ ಸೂಚಿಸಿದ ಬಳಿಕ ಬಿಡುಗಡೆ ಮಾಡಲಾಗುವುದು’
-ರಾಮಲಿಂಗಾರೆಡ್ಡಿ, ಗೃಹಸಚಿವ

* ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.