ಝೈಬುನ್ನೀಸ ಪ್ರಕರಣದ ಸಮಗ್ರ ತನಿಖೆ: ಶಕುಂತಳಾ ಶೆಟ್ಟಿ
Team Udayavani, Jan 27, 2018, 11:14 AM IST
ಉಪ್ಪಿನಂಗಡಿ: ಕೆ.ಆರ್. ಪೇಟೆಯ ಅಲ್ಪಸಂಖ್ಯಾಕ ಮಾದರಿ ವಸತಿ ಶಾಲೆ ವಿದ್ಯಾರ್ಥಿನಿ ಝೈಬುನ್ನೀಸ ಸಾವಿನ ಬಗ್ಗೆ ಸಂಶಯವಿದ್ದು, ಈ ಬಗ್ಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಸಮಿತಿ ತನಿಖೆ ನಡೆಸಿ ವರದಿ ನೀಡಲಿದೆ ಎಂದು ಶಾಸಕಿ ಶಕುಂತಳಾ ಟಿ. ಶೆಟ್ಟಿ ತಿಳಿಸಿದ್ದಾರೆ.
ಝೈಬುನ್ನೀಸ ಅವರ ಅಜ್ಜಿ ಮನೆ ಉಪ್ಪಿನಂಗಡಿಯ ನಿನ್ನಿಕಲ್‌ಗೆ ಶುಕ್ರವಾರ ಭೇಟಿ ನೀಡಿದ ಅವರು, ಕುಟುಂಬಿಕರನ್ನು ಸಂತೈಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಝೈಬುನ್ನೀಸಾ ಆತ್ಮಹತ್ಯೆ ಬಗ್ಗೆ ಸಂಶಯವಿದೆ. ಈ ಬಗ್ಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಸಮಿತಿ ಅಧ್ಯಕ್ಷೆ ಕೃಪಾ ಆಳ್ವ ಜತೆ ಮಾತನಾಡಿದ್ದೇನೆ. ಅವರು ಶಾಲೆ ಹಾಗೂ ಮನೆಗೆ ಭೇಟಿ ನೀಡಿ ತನಿಖೆ ನಡೆಸಲಿದ್ದಾರೆ. ಝೈಬುನ್ನೀಸ ಶೇ. 97 ಅಂಕ ಪಡೆದ ಪ್ರತಿಭಾವಂತೆ. ವಸತಿ ನಿಲಯದಲ್ಲಿ ಶಿಕ್ಷಕ ರವಿ ಎಂಬಾತ ಕಿರುಕುಳ ನೀಡುತ್ತಿದ್ದ ಬಗ್ಗೆ ಹೆತ್ತವರಿಗೆ ದೂರು ನೀಡಿದ್ದು, ಸಾವಿನಲ್ಲಿ ಆತನ ಕೈವಾಡವಿರುವ ಬಗ್ಗೆ ಆರೋಪವಿದೆ. ಈ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡುತ್ತೇನೆ ಹಾಗೂ ಸಿಒಡಿ ತನಿಖೆಗೆ ಆಗ್ರಹಿಸುತ್ತೇನೆ ಎಂದು ಹೇಳಿದರು.
ಶಾಸಕರೊಂದಿಗೆ ಕೆ.ಡಿ.ಪಿ. ಸದಸ್ಯರಾದ ಅಶ್ರಫ್ ಬಸ್ತಿಕ್ಕಾರ್, ಕೃಷ್ಣಪ್ರಸಾದ್ ಆಳ್ವ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಸಮಿತಿ ಸದಸ್ಯರಾದ ಡಾ| ರಾಜಾರಾಮ್, ಕೃಷ್ಣ ರಾವ್ ಅರ್ತಿಲ, ಪ್ರಕಾಶ್ ರೈ ಬೆಳ್ಳಿಪ್ಪಾಡಿ, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಅಜೀಜ್ ಬಸ್ತಿಕ್ಕಾರ್, ಮಹೇಂದ್ರ ವರ್ಮ, ಯುವ ಕಾಂಗ್ರೆಸ್‌ನ ರೋಶನ್ ರೈ ಉಪಸ್ಥಿತರಿದ್ದರು. ಜ. 24ರಂದು ಸಂಜೆ ವಸತಿ ನಿಲಯದಲ್ಲಿ ಝೈಬುನ್ನೀಸ ನಿಗೂಢ ರೀತಿಯಲ್ಲಿ ಮೃತಪಟ್ಟಿದ್ದರು.
ಆತ್ಮಹತ್ಯೆ ಮಾಡಿಕೊಳ್ಳುವವಳಲ್ಲ
ನನ್ನ ಮಗಳು ಆತ್ಮಹತ್ಯೆ ಮಾಡಿ ಕೊಳ್ಳುವವಳಲ್ಲ. ಕಲಿಕೆಯಲ್ಲಿ ಮುಂದಿದ್ದಳು ಮತ್ತು ದಿಟ್ಟ ಹುಡುಗಿಯಾಗಿದ್ದಳು. ಶಿಕ್ಷಕ ರವಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆ, ನನ್ನನ್ನು ಕರೆದು ಕೊಂಡು ಹೋಗಿ ಎಂದಿದ್ದಳು. ನಾನು ಸಮಾಧಾನ ಹೇಳಿ, ನಾಳೆ ಶಾಲೆಗೆ ಬರುವುದಾಗಿ ತಿಳಿಸಿದ್ದೆ. ಇದನ್ನು ಅರಿತ ರವಿ ನನ್ನ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಝೈಬುನ್ನೀಸ ತಂದೆ ಮಹಮ್ಮದ್ ಇಬ್ರಾಹಿಂ ಸುದ್ದಿಗಾರರೊಂದಿಗೆ ನೋವು ತೋಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.