ಸಂಸ್ಕೃತಿ ಗೌರವಿಸಿದರಷ್ಟೇ ಸಂವಿಧಾನ ಗೌರವಿಸಿದಂತೆ

Team Udayavani, Jan 27, 2018, 12:43 PM IST

samskruti.jpg

ಬೆಂಗಳೂರು: ರಾಷ್ಟ್ರಧ್ವಜಕ್ಕೆ ಸೆಲ್ಯೂಟ್‌ ಹೊಡೆದು ಬಾಯಿಮಾತಿನಲ್ಲಿ ಸಂವಿಧಾನ ಒಪ್ಪಿಕೊಂಡರೆ ಸಾಲದು. ನಮ್ಮ ಮಣ್ಣಿನ ಸಂಸ್ಕೃತಿಯನ್ನು ಗೌರವಿಸಿದರೆ ಮಾತ್ರ ಸಂವಿಧಾನವನ್ನು ಮನಸಾರೆ ಒಪ್ಪಿಕೊಂಡು ಗೌರವಿಸಿದಂತೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್‌ ಹೆಗಡೆ ಹೇಳಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ 69ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಇಂತಹ ಅನೇಕ ವಿಷಯಗಳನ್ನು ನಾನು ಹೇಳಲು ಹೋದರೆ ವಾಸ್ತವ ಅರ್ಥಮಾಡಿಕೊಳ್ಳದ ಕೆಲವರಿಗೆ ಬಣ್ಣದ ಕನ್ನಡಕ ಕೊಟ್ಟಂತೆ ಆಗುತ್ತದೆ. ಅದರ ಮೂಲಕ ಅವರದೇ ದೃಷ್ಟಿಯಲ್ಲಿ ಜಗತ್ತನ್ನು ನೋಡಲು ಆರಂಭಿಸುತ್ತಾರೆ ಎಂದು ತಮ್ಮ ಟೀಕಾಕಾರರ ಬಗ್ಗೆ ಕಿಡಿ ಕಾರಿದರು.

ತಮ್ಮ ಮಾತಿನ ಉದ್ದಕ್ಕೂ ಪರೋಕ್ಷವಾಗಿ ಟೀಕಾಕಾರರಿಗೆ ತಿರುಗೇಟು ನೀಡಿದ ಅನಂತಕುಮಾರ್‌ ಹೆಗಡೆ, ಬ್ರಿಟಿಷರ ಕಾನೂನು ಹೋಗಲಾಡಿಸಿ ನಮ್ಮ ಕಾನೂನು ಅನುಷ್ಠಾನಗೊಂಡ ದಿನವೇ ಗಣರಾಜ್ಯೋತ್ಸವ. ಆ ದಿನ ರಾಷ್ಟ್ರಧ್ವಜಕ್ಕೆ ನಮಿಸಿ, ಬಾಯಿ ಮಾತಿನಲ್ಲಿ ಸಂವಿಧಾನ ಒಪ್ಪಿಕೊಂಡರೆ ಸಂವಿಧಾನಕ್ಕೆ ಗೌರವ ನೀಡಿದಂತೆ ಆಗುವುದಿಲ್ಲ. ನಮ್ಮ ಮಣ್ಣಿನ ಸಂಸ್ಕೃತಿ ಗೌರವಿಸುವುದು ಕೂಡ ಮುಖ್ಯ. ಇದು ಬಿಜೆಪಿಯಿಂದ ಮಾತ್ರ ಸಾಧ್ಯ. ಬೇರೆ ಕಡೆ ಅದನ್ನು ಅಷ್ಟು ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ ಎಂದರು.

ನಮ್ಮ ಮಣ್ಣಿನ ಸಂಸ್ಕೃತಿ ಗೌರವಿಸದವರು ಸಂವಿಧಾನದ ಬಗ್ಗೆ ಮಾತನಾಡುವುದೇ ವ್ಯರ್ಥ. ಇದ್ದದ್ದನ್ನು ಇದ್ದಂತೆ ಹೇಳಿದರೆ ಕೆಲವರಿಗೆ ಆಗುವುದಿಲ್ಲ. ನಾನು ಏನೇ ಹೇಳಿದರೂ ಅದಕ್ಕೆ ವಿವಾದದ ಬಣ್ಣ ಕಟ್ಟುತ್ತಾರೆ. ಕೆಲವರಿಗೆ ಆಗುವುದಿಲ್ಲ ಎಂದು ಅವರನ್ನು ಸಮಾಧಾನಪಡಿಸುವುದಕ್ಕೆ ಮುಂದಾಗಬಾರದು. ಕಂಡದ್ದನ್ನು ಕಂಡಂತೆ ಹೇಳಬೇಕೇ ಹೊರತು ಸುತ್ತಿ ಬಳಸಿ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

ಸ್ವಾತಂತ್ರ ಸಿಕ್ಕಿದಾಗ ನಮಗೆ ಒಂದು ಚೌಕಟ್ಟು ಸಿಕ್ಕಿರಲಿಲ್ಲ. ಸ್ವಾತಂತ್ರ ನಮಗೇ ಬಂತು ಎಂದು ರಾಜಮನೆತನಗಳವರು ಭಾವಿಸಿದರು. ಹೀಗಾಗಿ ಆ ಚೌಕಟ್ಟು ಒದಗಿಸಲು ಸಂವಿಧಾನ ರಚಿಸಿ ಜಾರಿಗೊಳಿಸಲಾಯಿತು. ಹಾಗೆಂದು ಕೇವಲ ಸಂವಿಧಾನ ಒಪ್ಪಿಕೊಳ್ಳುವುದೇ ರಾಷ್ಟ್ರೀಯತೆಯೇ ಎಂದು ಪ್ರಶ್ನಿಸಿದ ಅವರು, ಸಂವಿಧಾನದ ಜತೆ ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಒಪ್ಪಿಕೊಳ್ಳುವುದೇ ನಿಜವಾದ ರಾಷ್ಟ್ರೀಯತೆ ಎಂದು ಅಭಿಪ್ರಾಯಪಟ್ಟರು. 

ಜಗತ್ತು ಭಾರತವನ್ನು ಒಪ್ಪಿಕೊಳ್ಳುತ್ತಿದೆ ಎಂದರೆ ಅದಕ್ಕೆ ಕಾರಣ ನಮ್ಮ ಸಂಸ್ಕೃತಿ. ನಾವು ಭೂಭಾಗವನ್ನು ಗೆದ್ದುಕೊಳ್ಳದಿರಬಹುದು. ಆದರೆ, ಜಗತ್ತಿನ ಮನಸ್ಸನ್ನು ಗೆದ್ದಿದ್ದೇವೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಸ್ಕೃತಿಯನ್ನು ಒಳಗೊಂಡ ಆಡಳಿತ ಕಾರಣ ಎಂದು ಪ್ರತಿಪಾದಿಸಿದರು. ಬಿಜೆಪಿ ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿ ಬಿ.ಎಲ….ಸಂತೋಷ್‌, ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮತ್ತಿತರ ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.