ಕಾನೂನು ಕಾಯದಿದ್ದರೆ ನೀವೇ ಹೊಣೆ
Team Udayavani, Jan 28, 2018, 11:19 AM IST
ಬೆಂಗಳೂರು: ತಮ್ಮ ಠಾಣೆ ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳನ್ನು ರಾತ್ರಿ ನಿಗದಿತ ಸಮಯಕ್ಕೆ ಮುಚ್ಚಿಸಬೇಕು. ಪೊಲೀಸ್ ಸಿಬ್ಬಂದಿ ಮೇಲಿನ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಹಾಗೇ ರಾತ್ರಿ ಬೀಟ್ ಹೆಚ್ಚಿಸುವುದರ ಜತೆಗೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಇಲ್ಲವಾದಲ್ಲಿ ಆಯಾ ಠಾಣೆ ಹಾಗೂ ವಲಯದ ಹಿರಿಯ ಅಧಿಕಾರಿಗಳನ್ನೆ ಹೊಣೆ ಮಾಡುವುದಾಗಿ ಗೃಹ ಸಚಿವ ರಾಮಲಿಂಗಾರೆಡ್ಡಿ ಶನಿವಾರ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿಕಾಸಸೌಧದಲ್ಲಿ ಎರಡನೇ ಬಾರಿ ಇನ್‌ಸ್ಪೆಕ್ಟರ್‌ಗಳ ಜತೆ ಸಭೆ ನಡೆಸಿದ ಸಚಿವ ರಾಮಲಿಂಗಾರೆಡ್ಡಿ ಈ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.ಪೊಲೀಸ್ ಅಧಿಕಾರಿಗಳು ರಿಯಲ್ ಎಸ್ಟೇಟ್ ದಂಧೆಯಲ್ಲಿ ಶಾಮೀಲಾದರೆ ಸಹಿಸಲ್ಲವೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಎರಡು ತಿಂಗಳ ಹಿಂದೆ ಸಭೆ ನಡೆಸಿದ್ದ ಗೃಹ ಸಚಿವರು ಇನ್‌ಸ್ಪೆಕ್ಟರ್‌ಗಳಿಗೆ ಕೆಲ ಸೂಚನೆಗಳನ್ನು ಕೊಟ್ಟಿದ್ದರು. ಅಲ್ಲದೇ ಒಂದು ತಿಂಗಳ ಒಳಗೆ ಇವುಗಳ ಪ್ರಗತಿ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದರು. ಅದರಂತೆ ಶನಿವಾರ ನಡೆದ ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್, ಪ್ರಾತ್ಯಕ್ಷಿಕೆ ಮೂಲಕ ತಾವು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂಬಂಧ ಕಾನೂನು ಸುವ್ಯವಸ್ಥೆ ಪಾಲನೆ ವಿಚಾರದಲ್ಲಿ ಯಾರೇ ನಿರ್ಲಕ್ಷ್ಯತೋರಿದರು ಸಹಿಸುವುದಿಲ್ಲ ಎಂದು ಎಲ್ಲ ಇನ್‌ಸ್ಪೆಕ್ಟರ್‌ಗಳು, ಎಸಿಪಿ, ಡಿಸಿಪಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ತಾಕೀತು ಮಾಡಿದ್ದು, ಒಟ್ಟಾರೆ 22 ಪ್ರಮುಖ ಅಂಶಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಪ್ರಮುಖವಾಗಿ ಕಲಾಸಿಪಾಳ್ಯದಲ್ಲಿ ನಡೆದ ಬಾರ್ ಬೆಂಕಿ ದುರಂತದ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಪ್ರತಿ ಠಾಣೆ ವ್ಯಾಪ್ತಿಯಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳನ್ನು ನಿಗದಿತ ಸಮಯಕ್ಕೆ ಮುಚ್ಚುವಂತೆ ಆದೇಶ ಹೊರಡಿಸಬೇಕು. ಮತ್ತೂಮ್ಮೆ ಅಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.
ಸೆಕ್ಷನ್ 283 ಬೇಡ: ಸಣ್ಣ-ಪುಟ್ಟ ರಸ್ತೆ ಅಪಘಾತ, ಫುಟ್‌ಪಾತ್ ಮೇಲೆ ಪಾರ್ಕಿಂಗ್ ಮಾಡುವುದು, ಸಾರ್ವಜನಿಕ ರಸ್ತೆ ಅತಿಕ್ರಮಣ ಸೇರಿದಂತೆ ಕೆಲ ಸಂದರ್ಭದಲ್ಲಿ ಬಳಕೆ ಮಾಡುವ ಸೆಕ್ಷನ್ 283 ಅನ್ನು ಆದಷ್ಟು ಕಡಿಮೆ ಮಾಡಿ, ಇದರಿಂದ ಅಪರಾಧ ಪ್ರಕರಣಗಳ ಸಂಖ್ಯೆ ದ್ವಿಗುಣವಾಗುತ್ತದೆ ಎಂದು ಸಚಿವರು ಸಂಚಾರ ಪೊಲೀಸರಿಗೆ ಸಲಹೆ ನೀಡಿದ್ದಾರೆ.
ಪೊಲೀಸ್ ಮೇಲೆ ಹಲ್ಲೆ ಸಹಿಸಲ್ಲ: ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆಯಾದರೆ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗುತ್ತದೆ. ಹೀಗಾಗಿ ಹಲ್ಲೆಕೋರರ ವಿರುದ್ಧ ಗಂಭೀರ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಬೇಕು. ಅಗತ್ಯಬಿದ್ದಲ್ಲಿ ಗುಂಡುಹಾರಿಸಿ ಎಂದು ನಿರ್ದೇಶಿಸಿದ್ದಾರೆ. ಹಾಗೆಯೇ ಸಿಬ್ಬಂದಿ ಮೇಲಿನ ಹಲ್ಲೆ ಸಹಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳು ಮರುಕಳಿಸಿದರೆ ಠಾಣಾಧಿಕಾರಿ ಅಥವಾ ವಲಯದ ಹಿರಿಯ ಅಧಿಕಾರಿಗಳನ್ನೆ ಹೊಣೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಭಿಕ್ಷುಕರು, ಮಂಗಳಮುಖೀಯರ ವಿರುದ್ಧ ಕ್ರಮ: ಭಿûಾಟನೆ ಕಾನೂನು ಬಾಹಿರ. ಸಂಚಾರ ಸಿಗ್ನಲ್ ಬಳಿ ಮಕ್ಕಳು, ಹಿರಿಯರು ಹಾಗೂ ಮಂಗಳಮುಖೀಯರು ಭಿûಾಟನೆಗಿಳಿದಿದ್ದಾರೆ. ಇದೇ ನೆಪದಲ್ಲಿ ಕೆಲವರು ವೇಶ್ಯಾವಾಟಿಕೆ ಹಾಗೂ ದರೋಡೆಗೆ ಮುಂದಾಗಿದ್ದಾರೆ. ಇದನ್ನು ತಡೆಗಟ್ಟುವುದು ನಿಮ್ಮ ಹೊಣೆ. ಇನ್ಮುಂದೆ ಯಾವುದೇ ಕಾರಣಕ್ಕೂ ಸಿಗ್ನಲ್‌ಗಳ ಬಳಿ ಭಿûಾಟನೆ ಮಾಡದಂತೆ ಕಠಿಣ ಕ್ರಮತೆಗೆದುಕೊಳ್ಳಬೇಕು ಎಂದರು.
ಸಿಸಿಟಿವಿ ಅಳವಡಿಸಿ: 300ಕ್ಕೂ ಅಧಿಕ ಮಂದಿ ಸಂಚರಿಸುವ ಹಾಗೂ ಸೂಕ್ಷ್ಮಪ್ರದೇಶಗಳನ್ನು ಗುರುತಿಸಿ, ಅಂತಹ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಬೇಕು. ಈಗಾಗಲೇ ಸಿಸಿಟಿವಿ ಅಳವಡಿಕೆಗಾಗಿಯೇ ಬಿಡುಗಡೆ ಮಾಡಿರುವ ಹಣವನ್ನು ಬಳಸಿಕೊಳ್ಳುವಂತೆ ಸೂಚಿಸಿದ್ದಾರೆ.
ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು
-ಹುಕ್ಕಾ ಬಾರ್‌ಗಳ ವಿರುದ್ಧ ಕ್ರಮ
-ಗಾಂಜಾ ಮಾರಾಟಗಾರರ ವಿರುದ್ಧ ಕ್ರಮ
-ಶಾಲಾ, ಕಾಲೇಜುಗಳ ಬಳಿ ಬಂದೋಬಸ್ತ್
-ರೌಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
-ಪದೇ ಪದೇ ಅಪರಾಧ ಎಸಗುವವರ ವಿರುದ್ಧ ಕೇಸ್
-ಪೊಲೀಸ್ ಮೇಲಿನ ಹಲ್ಲೆಕೋರರಿಗೆ ಗುಂಡೇಟು
-ಸಿಸಿಟಿವಿ ಅಳವಡಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.