ತೆಲಂಗಾಣ: ಸರ್ಕಾರವನ್ನು ಟೀಕಿಸಿದ್ರೆ ಜಾಮೀನಿಲ್ಲದೆ ಜೈಲು
Team Udayavani, Jan 28, 2018, 11:48 AM IST
ಹೈದರಾಬಾದ್: ಇನ್ನು ಮುಂದೆ ತೆಲಂಗಾಣದಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯನ್ನು, ವಿಶೇಷವಾಗಿ ರಾಜ್ಯ ಸರ್ಕಾರವನ್ನು ಟೀಕಿಸಿದರೆ ಕಂಬಿ ಎಣಿಸಬೇಕಾದೀತು. ಮಾತ್ರವಲ್ಲ ಅಂಥ ತಪ್ಪಿಗೆ ಜಾಮೀನು ಕೂಡ ಸಿಗಲಾರದು. ಅಂಥವರನ್ನು ಕೋರ್ಟ್ ಒಪ್ಪಿಗೆಗೆ ಕಾಯದೇ ಬಂಧಿಸುವ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಒಪ್ಪಿಗೆ ನೀಡಿದ್ದಾರೆ.
ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಇತರ ವ್ಯವಸ್ಥೆಗಳಲ್ಲಿ ಸೂಕ್ತ ಹೆಸರುಗಳಿಲ್ಲದೆ ಕಟುವಾಗಿ ಟೀಕಿಸಿದರೆ ಭಾರತೀಯ ದಂಡ ಸಂಹಿತೆ (ಐಪಿಸಿ) 506 ಮತ್ತು 507ರ ಅನ್ವಯ ಬಂಧಿಸುವ ಅವಕಾಶ ಕಲ್ಪಿಸಲಾಗಿದೆ ಎಂದು “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ. ಈ ಕಾನೂನಿನಡಿ ಅಪರಾಧಿಗಳಿಗೆ 2ರಿಂದ 7 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ. ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್)ನೇತೃತ್ವದ ಸರ್ಕಾರದ ಈ ಕ್ರಮಕ್ಕೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SC: ಬಿಯಾಂತ್ ಹಂತಕ ಬಲ್ವಂತ್ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ
Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ
Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.