ಕೊನೆಗೂ ಹೊಸಮಠ ಮುಳುಗು ಸೇತುವೆಯಿಂದ ಸಿಗಲಿದೆ ಮುಕ್ತಿ
Team Udayavani, Jan 28, 2018, 4:21 PM IST
ಕಡಬ: ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮೂಲಕ ತಾ| ಕೇಂದ್ರವಾಗಿರುವ ಕಡಬವನ್ನು ಮಳೆಗಾಲದಲ್ಲಿ ಸಂಪರ್ಕಿಸಲು ಪ್ರಮುಖ ತೊಡಕಾಗಿರುವ ಹೊಸಮಠದ ಮುಳುಗು ಸೇತುವೆಯಿಂದ ಜನರಿಗೆ ಕೊನೆಗೂ ಮುಕ್ತಿ ಸಿಗುವ ಕಾಲ ಸನ್ನಿಹಿತವಾಗಿದೆ. ಹೊಸಮಠ ಮುಳುಗು ಸೇತುವೆಯ ಪಕ್ಕ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಮುಗಿದಿದೆ. ಸಂಪರ್ಕ ರಸ್ತೆಯ ಭೂ ಸ್ವಾಧೀನ ಪ್ರಕ್ರಿಯೆಗಳು ಮುಗಿದಿದ್ದು, ಗುಂಡ್ಯ ಹೊಳೆಗೆ ನಿರ್ಮಾಣಗೊಂಡಿರುವ ನೂತನ ಸರ್ವಋತು ಸೇತುವೆ ಮಾರ್ಚ್‌ನಲ್ಲಿ ಲೋಕಾರ್ಪಣೆಗೊಳ್ಳುವ ಸಾಧ್ಯತೆ ಇದೆ.
ಮಳೆಗಾಲದಲ್ಲಿ ಗಂಟೆಗಟ್ಟಲೆ ನೆರೆ ನೀರಿನಲ್ಲಿ ಮುಳುಗಡೆಯಾಗಿ ರಸ್ತೆ ಸಂಪರ್ಕವನ್ನು ಕಡಿದುಹಾಕುವ ಹೊಸಮಠ ಸೇತುವೆಗೆ ಬಲಿಯಾದ ಜೀವಗಳು ಹಲವು. ಸುಮಾರು 52 ವರ್ಷಗಳ ಹಿಂದೆ ನೆರೆನೀರಿನಲ್ಲಿ ಮುಳುಗಿದ್ದ ಸೇತುವೆಯನ್ನು ದಾಟುತ್ತಿದ್ದ ಖಾಸಗಿ ಬಸ್ಸೊಂದು ಮುಳುಗಿ ಓರ್ವ ಪ್ರಯಾಣಿಕ ನೀರುಪಾಲಾಗಿದ್ದ. ಹಲವು ವರ್ಷಗಳ ಅನಂತರ ತಮಿಳುನಾಡಿನ ಪ್ರವಾಸಿ ಯುವಕರಿಬ್ಬರು ನೆರೆನೀರಿನಲ್ಲಿ ಕೊಚ್ಚಿಹೋಗಿದ್ದರು. ಅಡಿಕೆ ಸಸಿ ಸಾಗಿಸುತ್ತಿದ್ದ ಲಾರಿಯೊಂದು ಮುಳುಗಿ ಕೃಷಿಕರೊಬ್ಬರು ಜೀವ ಕಳೆದುಕೊಂಡಿದ್ದರು. 2006ರ ಮಳೆಗಾಲದಲ್ಲಿ ಸಿಮೆಂಟ್ ಸಾಗಾಟದ ಲಾರಿಯೊಂದು ನೀರುಪಾಲಾದ ಸಂದರ್ಭ ಲಾರಿಯಲ್ಲಿದ್ದ 4 ಮಂದಿ ಯುವಕರು ಜಲ ಸಮಾಧಿಯಾದ ನೆನಪು ಜನರ ಮನಸ್ಸಿನಿಂದ ಇನ್ನೂ ಮಾಸಿಲ್ಲ.
7 ಕೋ. 50 ಲ. ರೂ. ಅನುದಾನ
ಹೊಸಮಠದಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ 7 ಕೋಟಿ 50 ಲಕ್ಷ ರೂ. ಬಿಡುಗಡೆಯಾಗಿದೆ. ಕರ್ನಾಟಕ ರಸ್ತೆ
ಅಭಿವೃದ್ಧಿ ನಿಗಮದಡಿಯಲ್ಲಿ ಅನುದಾನ ಮಂಜೂರಾಗಿದ್ದು, ಕಾಮಗಾರಿ ನಡೆಯುತ್ತಿದೆ. ಈಗ ಇರುವ ಸೇತುವೆಗಿಂತ ಎತ್ತರದಲ್ಲಿ ಹೊಸ ಸೇತುವೆ ನಿರ್ಮಾಣವಾಗಿದೆ. 125 ಮೀ. ಉದ್ದ ಹಾಗೂ 12 ಮೀ. ಅಗಲದಲ್ಲಿ ತಡೆಬೇಲಿಯನ್ನೊಳಗೊಂಡ 6 ಪಿಲ್ಲರ್‌ಗಳ ಸುಂದರ ಸೇತುವೆ ನಿರ್ಮಾಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ತೆರೆದು ಕೊಳ್ಳಲಿದೆ. ಪ್ರಸ್ತುತ ಇರುವ ಸೇತುವೆಯನ್ನು ಹಾಗೆಯೇ ಉಳಿಸಿಕೊಂಡು ಸಂಚಾರಕ್ಕೆ ತೊಂದರೆಯಾಗದ ರೀತಿಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ನಡೆಸಲಾಗಿದೆ.
ತೊಡಕು ಇತ್ಯರ್ಥ
ಖಾಸಗಿಯವರಿಂದ ಭೂ ಸ್ವಾಧೀನ ನಡೆಸುವ ಪ್ರಕ್ರಿಯೆ ಪೂರ್ತಿಯಾಗದ ಹಿನ್ನೆಲೆಯಲ್ಲಿ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಇದೀಗ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಭೂ ಸ್ವಾಧೀನದ ನಡಾವಳಿ ನಡೆದು ತೊಡಕುಗಳು ಇತ್ಯರ್ಥಗೊಂಡಿವೆ. ಈಗಾಗಲೇ ಸರಕಾರಿ ಜಮೀನಿನಲ್ಲಿ ಹಾದುಹೋಗುವ ಸಂಪರ್ಕ ರಸ್ತೆಯ ಕಾಮಗಾರಿ ನಡೆದಿದ್ದು, ಇನ್ನುಳಿದ ಕಾಮಗಾರಿ ಶೀಘ್ರವಾಗಿ ಪೂರ್ಣಗೊಂಡು ಸೇತುವೆ ಉದ್ಘಾಟನೆಗೊಳ್ಳಲಿದೆ.
– ಜಾನ್‌ಪ್ರಕಾಶ್ ರೋಡ್ರಿಗಸ್,
ಕಡಬ ತಹಶೀಲ್ದಾರ್
ನಾಗರಾಜ್ ಎನ್. ಕೆ. ಕಡಬ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.