ತೊಗರಿ ಖರೀದಿ ಕೇಂದ್ರಗಳು ರೈತ ಸ್ನೇಹಿಯಾಗಲಿ
Team Udayavani, Jan 28, 2018, 5:04 PM IST
ರಾಯಚೂರು: ಜಿಲ್ಲೆಯಲ್ಲಿ ತೊಗರಿ ಖರೀದಿ ಕೇಂದ್ರಗಳ ಬಗ್ಗೆ ದೂರುಗಳು ಹೆಚ್ಚಾಗಿ ಬರುತ್ತಿವೆ. ರೈತರಿಗೆ ಯಾವುದೇ ತೊಂದರೆ ಆಗದಂತೆ ಕೇಂದ್ರಗಳು ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಿ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸಂಸದ ಬಿ.ವಿ.ನಾಯಕ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಕವಿತಾಳದಲ್ಲಿ ತೊಗರಿ ಖರೀದಿ ಕೇಂದ್ರ ಕೆಲಸ ಮಾಡುತ್ತಿಲ್ಲ ಎಂದು ರೈತರು ದೂರಿದ್ದಾರೆ. ನಿಯಮಾನುಸಾರ ರೈತರಿಂದ ತೊಗರಿ ಖರೀದಿಸಬೇಕು. ಮಾರಾಟಕ್ಕೆ ನೋಂದಣಿ ಕಾಲಾವಕಾಶ ಹೆಚ್ಚಿಸಬೇಕು. ಅಲ್ಲದೇ, ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಡಲೆ ಬೆಳೆದಿದ್ದು, ಕೂಡಲೇ ಬೆಂಬಲ ಬೆಲೆ ನೀಡಿ ಖರೀದಿಗೆ ಮುಂದಾಗಿ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್, ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ತೊಗರಿ ಮಾರಾಟಕ್ಕೆ ನೋಂದಾಯಿಸಿದ ರೈತರ ಸಂಖ್ಯೆ ಹೆಚ್ಚಾಗಿದೆ. ಆದರೂ ಅವಧಿ ವಿಸ್ತರಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾಗಿ ತಿಳಿಸಿದರು.
ಸಂಸದ ಸಂಗಣ್ಣ ಮಾತನಾಡಿ, ಕೃಷಿ ಹೊಂಡ, ಚೆಕ್ ಡ್ಯಾಂ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಉದ್ಯೋಗ ಖಾತರಿ ಯೋಜನೆಯಲ್ಲಿ ಪ್ರತಿಶತ ಪ್ರಗತಿ ಸಾಧಿಸಬೇಕು. ಶೌಚಗೃಹ ನಿರ್ಮಾಣ ಗುರಿ ತಲುಪಿ. ಫಲಾನುವಿಗಳಿಗೆ ಸಕಾಲಕ್ಕೆ ಹಣ ಪಾವತಿಸುವಂತೆ ಸೂಚಿಸಿದರು.
ಪಂಚಾಯತ್ ರಾಜ್ ಇಲಾಖೆ ಎಇಇ ಮಾತನಾಡಿ, ಉದ್ಯೋಗ ಖಾತರಿಯಡಿ ಪ್ರಸಕ್ತ ವರ್ಷ 71.8 ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿ ನೀಡಿದ್ದು, ಈಗಾಗಲೇ ಶೇ.51.74ರಷ್ಟು ಸಾಧನೆಯಾಗಿದೆ. ಮಾರ್ಚ್ ಅಂತ್ಯಕ್ಕೆ ನಿಗದಿತ ಗುರಿ ತಲುಪಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶದಂತೆ 38 ಅಂಗನವಾಡಿ ಕೇಂದ್ರಗಳ ಕಟ್ಟಡ ಕಾಮಗಾರಿ ಮುಗಿಸಲಾಗಿದೆ. 76 ಪ್ರಗತಿಯಲ್ಲಿವೆ ಎಂದರು.
ಜಿಪಂ ಸಿಇಒ ಅಭಿರಾಮ್ ಜಿ. ಶಂಕರ ಮಾತನಾಡಿ, ಜಿಲ್ಲೆಯಲ್ಲಿ 94,807 ಶೌಚಗೃಹ ನಿರ್ಮಿಸಲು ಆದೇಶ ನೀಡಿದ್ದು, 26,616 ಮುಗಿದಿವೆ. ಶೌಚಗೃಹ ನಿರ್ಮಿಸಿಕೊಂಡವರಿಗೆ ಹಣ ವತಿಸಲು ಪಿಡಿಒ ಹಾಗೂ ಅಧ್ಯಕ್ಷರು ಕಂಪ್ಯೂಟರ್ ಸಾಫ್ಟ್‌ವೇರ್‌ನಲ್ಲಿ ಒಪ್ಪಿಗೆ ಕೊಟ್ಟ ಬಳಿಕ ಅದು ಕೇಂದ್ರಕ್ಕೆ ತೆರಳುತ್ತದೆ. ಅಲ್ಲಿನ ಸರ್ವರ್‌ನಲ್ಲಿ ಎಲ್ಲ ಜಿಲ್ಲೆಗಳ ಬಿಲ್‌ಗಳು ಬಂದಿರುವುದರಿಂದ, ನಿತ್ಯ ಐದು ಸಾವಿರ ಬಿಲ್ ಮಾತ್ರ ಪಾವತಿ ಆಗುತ್ತಿವೆ. ಇದರಿಂದ ಫಲಾನುಭವಿಗಳಿಗೆ ಹಣ ಬರುವುದು ವಿಳಂಬವಾಗುತ್ತಿದೆ. ಈ ಕುರಿತು ಕ್ರಮಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಜಂಟಿ ಕೃಷಿ ನಿರ್ದೇಶಕ ಡಾ| ಡಿ.ಕಿರಣಕುಮಾರ್ ಮಾತನಾಡಿ, 2016-17ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಫಸಲ್‌ಬಿಮಾ ಯೋಜನೆಯಡಿ 78,187 ಅರ್ಜಿ ನೋಂದಣಿಯಾಗಿದ್ದು, 4.65 ಕೋಟಿ ಹಣ ಪಾವತಿಸಲಾಗಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮಾಹಿತಿಯನ್ನು ಎಲ್ಲ ಜನಪ್ರತಿನಿಧಿ ಗಳಿಗೆ ನೀಡಲಾಗಿದೆ ಎಂದು ವಿವರಿಸಿದರು.
ಜೆಸ್ಕಾಂ ಎಂಜಿನಿಯರ್ ಮಾತನಾಡಿ, ಗಂಗಾ ಕಲ್ಯಾಣ ಯೋಜನೆಯಡಿ 346 ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದು ಬಾಕಿ ಇದೆ. ಕಾಮಗಾರಿಗಾಗಿ ಈಗಾಗಲೇ ಗುತ್ತಿಗೆ ನೀಡಿದ್ದು, 100 ಈಗಾಗಲೇ ಮುಗಿದಿವೆ. ಇನ್ನುಳಿದ ಕೆಲಸಗಳನ್ನು ಮಾರ್ಚ್‌ಗೆ ಮುಗಿಸುವುದಾಗಿ ತಿಳಿಸಿದರು.
ನಂತರ ವಿವಿಧ ಇಲಾಖೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಯಿತು. ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಪರಮೇಶಪ್ಪ, ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜ್ ಹಾಗೂ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.