ಸಂಚಲನ ಮೂಡಿಸಿದ ಮಾಲಕರೆಡ್ಡಿ ನಿವೃತ್ತಿ!
Team Udayavani, Jan 28, 2018, 6:00 PM IST
ಯಾದಗಿರಿ: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಡಾ.ಎ.ಬಿ. ಮಾಲಕರೆಡ್ಡಿ ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಣೆ ಜಿಲ್ಲೆಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
82 ವಯಸ್ಸಿನ ಶಾಸಕ ಡಾ.ಎ.ಬಿ. ಮಾಲಕರೆಡ್ಡಿ ಅವರು ಐದು ಬಾರಿ ಶಾಸಕರಾಗಿ, ಆರೋಗ್ಯ ಸಚಿವರಾಗಿ, ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ರಾಜ್ಯದಲ್ಲಿ ಸಜ್ಜನ ರಾಜಕಾರಣಿ ಎಂದೇ ಹೆಸರು ವಾಸಿಯಾಗಿದ್ದಾರೆ. 1978ರಲ್ಲಿ
ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಜೀವನ ಆರಂಭಿಸಿದರು. ನಂತರ 1989, 1994, 1999 ಸತತ ಮೂರು ಬಾರಿ ಯಾದಗಿರಿ ವಿಧಾನಸಭೆ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿ ಸಿ ಭದ್ರ ಬುನಾದಿ ಹಾಕಿದ್ದರು. 2008, 2013ರಲ್ಲಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಐದು ಬಾರಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು. ಅಂದಿನ ಮುಖ್ಯಮಂತ್ರಿ
ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾಗಿ ಹಾಗೂ ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ರಾಜ್ಯಾದ್ಯಂತ ಹೆಸರುವಾಸಿಯಾಗಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ನಂತರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆಯುತ್ತದೆ ಎಂಬ ಬಹಳ ಆಸೆ ಹೊಂದಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದಲ್ಲಿ ತಮ್ಮನ್ನು ಸೇರಿಸಿಕೊಳ್ಳದಿರುವುದಕ್ಕೆ ಮಾಲಕರೆಡ್ಡಿ ಅವರು ಕಾಂಗ್ರೆಸ್ ಮುಖಂಡರ ವಿರುದ್ಧ
ಆಕ್ರೋಶ ವ್ಯಕ್ತಪಡಿಸಿದ್ದರು. ಹೈ-ಕ ಭಾಗದ ಹಿರಿಯ ಮುಖಂಡರ ಧೋರಣೆಯಿಂದ ಬೇಸರ ವ್ಯಕ್ತಪಡಿಸಿದ್ದ ಮಾಲಕರೆಡ್ಡಿ ಪದೇ ಪದೇ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಈಗ ಅವರು ಚುನಾವಣೆ ರಾಜಕೀಯದಿಂದ ನಿವೃತ್ತಿ ಪಡೆದಿರುವುದರಿಂದ ಕಾಂಗ್ರೆಸ್‌ಗೆ ಮುಂದಿನ ದಿನಗಳಲ್ಲಿ ನುಂಗಲಾರದ ತುತ್ತಾಗಿ ಪರಿಣಮಿಸಲಿದೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸಹ ನವೀಕರಿಸುವುದಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್‌ನಿಂದ ದೂರ ಉಳಿಯುತ್ತಿರುವುದನ್ನು ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ತಿಳಿಸಿದಂತಿದೆ. ಆದರೆ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಚುನಾವಣೆ ರಾಜಕೀಯದಿಂದ ಮಾತ್ರ ನಿವೃತ್ತಿ ಪಡೆದಿದ್ದೇನೆ.
ಆದರೆ ರಾಜಕಾರಣದಲ್ಲಿರುತ್ತೇನೆ ಎನ್ನುವ ಮೂಲಕ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಾರೆ ಎಂಬ ಅನುಮಾನಗಳು ಸಹ ಮೂಡುತ್ತಿವೆ. ನಿವೃತ್ತಿ ಘೋಷಣೆ ಹಿಂಪಡೆಯುವಂತೆ ರಾಯಚೂರು
ಸಂಸದ ಬಿ.ವಿ. ನಾಯಕ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಮಾಲಕರೆಡ್ಡಿ ಅವರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಇದಕ್ಕೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹುಡುಕಾಟ!
ಮಾಲಕರೆಡ್ಡಿ ಅವರು ನಿವೃತ್ತಿ ಘೋಷಿಸಿದ್ದರಿಂದ ಕಾಂಗ್ರೆಸ್ ಕ್ಷ ಮುಂದಿನ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಹುಡುಕುವಂತಾಗಿದೆ. ಪಕ್ಷದಲ್ಲಿ ಚನ್ನಾರೆಡ್ಡಿ ಪಾಟೀಲ ನ್ನೂರ, ಜಿಲ್ಲಾಧ್ಯಕ್ಷ ಮರಿಗೌಡ ಹುಲಕಲ್, ಕಲಬುರಗಿ ಕಾಡಾ ಮಾಜಿ ಅಧ್ಯಕ್ಷ ಶ್ರೀನಿವಾಸರೆಡ್ಡಿ ಕಂದಕೂರ ಹಿರಿಯ ಮುಖಂಡರಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತದೆ ಅಥವಾ ಹೊಸಬರನ್ನು ಕಣಕ್ಕಿಳಿಸಲಿದೆ ಎಂಬುದನ್ನು ಕಾಲವೇ ರ್ಧರಿಸಲಿದೆ. ನಿವೃತ್ತಿ ಘೋಷಿಸಿರುವುದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆಯಾವ ರೀತಿ ಪರಿಣಾಮ ಬೀರಲಿದೆ ಎಂಬುದನ್ನು ಕಾಯ್ದು ನೋಡಬೇಕಿದೆ ಪಕ್ಷದ ಮುಖಂಡರು, ಕಾರ್ಯಕರ್ತರು ನಿವೃತ್ತಿ ಘೋಷಣೆ ಹಿಂಪಡೆಯುವಂತೆ ಒತ್ತಡ ಹೇರುತ್ತಿದ್ದಾರೆ. ಆದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಮನಸ್ಸು ನಿರ್ಧರಿಸಿದೆ.
ಡಾ.ಎ.ಬಿ. ಮಾಲಕರೆಡ್ಡಿ, ಶಾಸಕರು, ಯಾದಗಿರಿ
ಮನವೊಲಿಸಲು ಪ್ರಯತ್ನ ಡಾ. ಎ.ಬಿ. ಮಾಲಕರೆಡ್ಡಿ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಪಕ್ಷಕ್ಕೆ ಅವರ
ಮಾರ್ಗದರ್ಶನ ಅಗತ್ಯವಿದೆ. ನಿವೃತ್ತಿ ಹಿಂಪಡೆಯುವಂತೆ ಅವರ ಮನವೊಲಿಸಲು ಪ್ರಯತ್ನಸುತ್ತೇವೆ.
ಮರಿಗೌಡ ಹುಲಕಲ್ಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ
ರಾಜೇಶ ಪಾಟೀಲ ಯಡ್ಡಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ
Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.