ಆಹ್ವಾನಿತ ಹಾಕಿ ಟೂರ್ನಿ: ಶೂಟೌಟ್ನಲ್ಲಿ ಭಾರತಕ್ಕೆ ಸೋಲು
Team Udayavani, Jan 29, 2018, 6:20 AM IST
ಹ್ಯಾಮಿಲ್ಟನ್: ನಾಲ್ಕು ರಾಷ್ಟ್ರಗಳ ಆಹ್ವಾನಿತ ಹಾಕಿ ಟೂರ್ನಿಯ 2ನೇ ಹಂತದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಬೆಲ್ಜಿಯಂ ವಿರುದ್ಧ ಪೆನಾಲ್ಟಿ ಶೂಟೌಟ್ನಲ್ಲಿ ಆಘಾತ ಅನುಭವಿಸಿದೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಉಭಯ ತಂಡಗಳು ನಿಗದಿತ ಅವಧಿಯಲ್ಲಿ ತಲಾ 4 ಗೋಲು ಬಾರಿಸಿ ಸಮಬಲ ಸಾಧಿಸಿದ್ದವು. ಹೀಗಾಗಿ ಪಂದ್ಯದ ಫಲಿತಾಂಶಕ್ಕಾಗಿ ಪೆನಾಲ್ಟಿ ಶೂಟೌಟ್ ಮೊರೆ ಹೋಗಲಾಯಿತು. ಈ ಹಂತದಲ್ಲಿ ಭಾರತ ಎಡವಿತು.
ನಿಗದಿತ ಅವಧಿಯಲ್ಲಿ ಭಾರತದ ಪರ ರಮಣ್ದೀಪ್ ಸಿಂಗ್ (29 ಮತ್ತು 53ನೇ ನಿಮಿಷ) ಎರಡು ಗೋಲು ಬಾರಿಸಿದರೆ, ನೀಲಕಂಠ ಶರ್ಮ (42ನೇ ನಿಮಿಷ) ಮತ್ತು ಮನ್ದೀಪ್ ಸಿಂಗ್ (49ನೇ ನಿಮಿಷ) ತಲಾ ಒಂದು ಗೋಲು ದಾಖಲಿಸಿದರು. ಬೆಲ್ಜಿಯಂ ಪರವೂ 4 ಗೋಲು ದಾಖಲಾಗಿದ್ದವು. ವಿಶ್ವ ನಂ.3ನೇ ಶ್ರೇಯಾಂಕಿತ ಬೆಲ್ಜಿಯಂ ವಿರುದ್ಧ ಭಾರತ ಭರ್ಜರಿ ಪ್ರದರ್ಶನ ನೀಡಿತು. ದುರಾದೃಷ್ಟವಶಾತ್ ಪೆನಾಲ್ಟಿ ಶೂಟೌಟ್ನಲ್ಲಿ ಅದೃಷ್ಟ ಕೈಕೊಟ್ಟಿದೆ. ನಾಲ್ಕು ರಾಷ್ಟ್ರಗಳ ಆಹ್ವಾನಿತ ಹಾರ್ಕಿ ಟೂರ್ನಿಯ ಮೊದಲನೇ ಹಂತದ ಫೈನಲ್ ಪಂದ್ಯದಲ್ಲಿಯೂ ಭಾರತ ತಂಡ ಬೆಲ್ಜಿಯಂ ವಿರುದ್ಧ ಸೋಲುಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.