ಪಕ್ಷ ಉಳಿಸೋದೇ ನನ್ನ ಜೀವನದ ಕೊನೇ ಆಸೆ: ಎಚ್.ಡಿ.ದೇವೇಗೌಡ
Team Udayavani, Jan 29, 2018, 6:15 AM IST
ನಾಗಮಂಗಲ: ಜೆಡಿಎಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು. ಪಕ್ಷ ಉಳಿಯಬೇಕು. ಅದೇ ನನ್ನ ಜೀವನದ ಕೊನೆಯ ಆಸೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.
ತಾಲೂಕಿನ ಟಿ.ನೇರಳೇಕೆರೆ ಗ್ರಾಮದ ಶ್ರೀ ಮಲ್ಲೇಶ್ವರನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಭಾನುವಾರ ಕಸಬಾ ಹೋಬಳಿ ಮಟ್ಟದ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.
ನನಗೆ ಈಶ್ವರನ ಅನುಗ್ರಹವಿದೆ. ದೈವ ಕೃಪೆಯಿಲ್ಲದೆ ನಾನೇನೂ ಮಾಡುವುದಿಲ್ಲ. ದೈವಾನುಗ್ರಹದಿಂದ ರಾಜಕೀಯದಲ್ಲಿ ಇಷ್ಟೆಲ್ಲ ಬೆಳವಣಿಗೆ ಸಾಧ್ಯವಾಗಿದೆ. 56 ವರ್ಷದ ರಾಜಕೀಯ ಜೀವನದಲ್ಲಿ ಹಲವಾರು ಏಳು-ಬೀಳುಗಳನ್ನು ಕಂಡಿದ್ದೇನೆ. ರಾಜಕಾರಣದಲ್ಲಿ ಕಳಂಕರಹಿತವಾಗಿ ಜೀವನ ನಡೆಸಿಕೊಂಡು ಬಂದಿದ್ದೇನೆ ಎಂದು ಹೇಳಿದರು.
ಕಾವೇರಿ ತೀರ್ಪಿನ ಬಗ್ಗೆ ಆತಂಕ: ಇನ್ನೆರಡು ವಾರದಲ್ಲಿ ಹೊರಬೀಳಲಿರುವ ಕಾವೇರಿ ತೀರ್ಪು ನನ್ನಲ್ಲಿ ಆತಂಕ ಮೂಡಿಸಿದ್ದು, ದೇಶದ ನ್ಯಾಯಾಂಗ ವ್ಯವಸ್ಥೆ ವಿರುದ್ಧ ತಿರುಗಿ ಬಿದ್ದಿದ್ದ ನಾಲ್ವರು ಸುಪ್ರೀಂಕೋರ್ಟ್ ನ್ಯಾಯಾಧೀಶರು ಕಾವೇರಿ ವಿಚಾರವಾಗಿ ತೀರ್ಪು ನೀಡಲಿದ್ದಾರೆ. ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ದೊರಕಿಸುವಲ್ಲಿ ಕಾಂಗ್ರೆಸ್, ಬಿಜೆಪಿ ವಿಫಲವಾಗಿವೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.