ಪೊಲೀಸ್ ವೇತನ ಹೆಚ್ಚಳ : ಔರಾದ್ಕರ್ ವರದಿ ಪರಿಗಣಿಸಲು ಪರಂ ಪತ್ರ
Team Udayavani, Jan 29, 2018, 6:50 AM IST
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಐಪಿಎಸ್‌ಯೇತರ ಸಿಬಂದಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಎಡಿಜಿಪಿ ರಾಘವೇಂದ್ರ ಔರಾದ್ಕರ್ ಸಮಿತಿ ವರದಿಯನ್ನು ವೇತನ ಪರಿಷ್ಕರಣೆ ಸಂದರ್ಭದಲ್ಲಿ ಪರಿಗಣಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ್ ಆರನೇ ವೇತನ ಆಯೋಗದ ಅಧ್ಯಕ್ಷ ಎಂ.ಆರ್ ಶ್ರೀನಿವಾಸಮೂರ್ತಿಯವರಿಗೆ ಪತ್ರ ಬರೆದಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬಂದಿ ಹಾಗು ಅಧಿಕಾರಿಗಳ ವೇತನ, ಭತ್ತೆ ಹೆಚ್ಚಳ ಕುರಿತು ತಾವು ಗೃಹ ಸಚಿವರಾಗಿದ್ದಾಗ ಉನ್ನತ ಪೊಲೀಸ್ ಅಧಿಕಾರಿಯಾಗಿದ್ದ ಔರಾದ್ಕರ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಮಿತಿ ದೇಶದ ವಿವಿಧ ರಾಜ್ಯಗಳ ಪೊಲೀಸ್ ಇಲಾಖೆಯ ಸಿಬಂದಿ ಪಡೆಯುತ್ತಿರುವ ವೇತನ ಮತ್ತು ಇತರೆ ಭತ್ತೆಗಳ ಬಗ್ಗೆ ಅಧ್ಯಯನ ನಡೆಸಿ ವೇತನ ಪರಿಷ್ಕರಣೆ ಮಾಡಬಹುದು ಎಂದು ಸರಕಾರಕ್ಕೆ ವರದಿ ಸಲ್ಲಿಸಿದೆ. ಸಮಿತಿಯ ವರದಿಯಲ್ಲಿನ ಅಂಶಗಳನ್ನು ಪರಿಗಣಿಸಿ ಪೊಲೀಸ್ ಇಲಾಖೆ ಸಿಬಂದಿ ವೇತನ ಹಾಗೂ ಭತ್ತೆ ಹೆಚ್ಚಳಕ್ಕೆ ಶಿಫಾರಸು ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
MUST WATCH
ಹೊಸ ಸೇರ್ಪಡೆ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
Mahalingpur: ಹೊಸ ಬಸ್ ನಿಲ್ದಾಣದಲ್ಲಿ ಹಳೆ ಸಮಸ್ಯೆಗಳು
Bantwal: ಕಲ್ಲಡ್ಕ ಫ್ಲೈಓವರ್; ಪೂರ್ಣತೆಯತ್ತ; ಕಾಂಕ್ರೀಟ್ ಕಾಮಗಾರಿ ಪ್ರಗತಿ
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
AUSvSL: ಲಂಕಾ ಸರಣಿಗೆ ಆಸೀಸ್ ತಂಡ ಪ್ರಕಟ: ಸ್ಟೀವ್ ಸ್ಮಿತ್ ಗೆ ನಾಯಕತ್ವ ಪಟ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.