ಕಣಕುಂಬಿಯಲ್ಲಿ ನಾಳೆ ಗ್ರಾಮವಾಸವ್ಯ: ಶಾಸಕ ಕೋನರೆಡ್ಡಿ
Team Udayavani, Jan 30, 2018, 8:10 AM IST
ಧಾರವಾಡ: ಗೋವಾದ ಮುಖಂಡರು ಮಹದಾಯಿ, ಕಳಸಾ-ಬಂಡೂರಿ ಉಗಮ ಸ್ಥಾನಕ್ಕೆ ಭೇಟಿ ನೀಡಿರುವುದನ್ನು ವಿರೋಧಿಸಿ ಜ.31ರಂದು ಕಣಕುಂಬಿ ಮಾವಲಿ ದೇವಸ್ಥಾನ ಎದುರು ಗ್ರಾಮ ವಾಸ್ತವ್ಯ ಮಾಡಲಾಗುವುದು ಎಂದು ನವಲಗುಂದ ಶಾಸಕ ಎನ್.ಎಚ್. ಕೋನರೆಡ್ಡಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬುಧವಾರ ಬೆಳಗ್ಗೆ 10:00 ಗಂಟೆಗೆ ನವಲಗುಂದದಲ್ಲಿ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಬಳಿಕ ನವಲಗುಂದದಿಂದ ಕಣಕುಂಬಿಗೆ ತೆರಳಿ, ಅಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುವುದು ಎಂದರು. ರಾಜ್ಯ ಬಿಜೆಪಿ ನಾಯಕರು ಕೂಡಲೇ ಮಹದಾಯಿ, ಕಳಸಾ-ಬಂಡೂರಿ ಜಾರಿಗೆ ಪ್ರಧಾನಿ ಮೇಲೆ ಮತ್ತೂಮ್ಮೆ ಒತ್ತಡ ಹೇರ
ಬೇಕು. ಫೆ.6 ರೊಳಗೆ ನ್ಯಾಯಾಧೀಕರಣದ ಹೊರಗ ಡೆಯೇ ಮಾತುಕತೆ ಮೂಲಕ ಸಮಸ್ಯೆ ಬಗೆ ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಇಲ್ಲದಿದ್ದರೆ ಬಿಜೆಪಿ ವಿರುದ್ಧ ರಾಜ್ಯದ ಜನತೆ ಯೊಂದಿಗೆ ಬೀದಿಗಿಳಿದು ಮಾಡು ಇಲ್ಲವೇ ಮಡಿ ಹೋರಾಟ ಮಾಡುವುದು ಎಂದು ಎಚ್ಚರಿಸಿದರು. ಜ.27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದ ಸರ್ವ ಪಕ್ಷ ಸಭೆಯನ್ನು ಬಹಿಷ್ಕರಿಸಿದ ರಾಜ್ಯ ಬಿಜೆಪಿ ನಾಯಕರು ರಾಜ್ಯಕ್ಕೆ ಅನ್ಯಾಯವಾದರೂ ಪರವಾಗಿಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಅಲ್ಲದೆ, ಫೆ.4ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿಯವರ ಮನವೊಲಿಸುವ ಬದಲು ಅಡ್ಡಗಾಲು ಹಾಕಿದ್ದಾರೆ. ಬಿಜೆಪಿ ಮೌನ ನೋಡಿದರೆ ಇದು ಅವರದ್ದೇ ಕುಮ್ಮಕ್ಕು ಎನ್ನದೆ ಬೇರೆ ವಿಧಿಯಿಲ್ಲ ಎಂದು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಈ ಗ್ರಾಮ ವಾಸ್ತವ್ಯ ಮಾಡಲಿದ್ದು, ಗೋವಾ ಮಂದಿ
ಬಿಯರ್ಗೆ ಮಹತ್ವ ಕೊಟ್ಟರೆ ನಾವು ನೀರಿಗೆ ಮಹತ್ವ ಕೊಡುತ್ತೇವೆ.
●ಎನ್.ಎಚ್.ಕೋನರೆಡ್ಡಿ, ಜೆಡಿಎಸ್ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗ್ತಿರೋದು ಸತ್ಯ:ಸತೀಶ್ ಜಾರಕಿಹೊಳಿ
Renukaswamy Case: ಪವಿತ್ರಾ ಗೌಡ ಜಾಮೀನಿಗೆ ವಾದ ಮಂಡನೆ.. ವಿಚಾರಣೆ ಮುಂದೂಡಿದ ಹೈಕೋರ್ಟ್
Belagavi: ಬಸ್ ಸೀಟಿಗಾಗಿ ಜಗಳ: ದಂಪತಿಗೆ ಮನಸೋ ಇಚ್ಛೆ ಥಳಿಸಿದ ಯುವಕರ ತಂಡ
Electoral Bond Case: ನಿರ್ಮಲಾ, ನಡ್ಡಾ, ನಳಿನ್ ವಿರುದ್ದದ FIR ರದ್ದು ಮಾಡಿದ ಹೈಕೋರ್ಟ್
Fengal Cyclone: ಶಿವಮೊಗ್ಗದಲ್ಲೂ ಎಲ್ಲೊ ಅಲರ್ಟ್; ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.