ಮೈಸೂರು- ಬೆಂಗಳೂರು ಹೆದ್ದಾರಿ ಕಾಮಗಾರಿ ಶೀಘ್ರ
Team Udayavani, Jan 30, 2018, 8:51 AM IST
ಬೆಂಗಳೂರು: ಬೆಂಗಳೂರು- ಮೈಸೂರು ಹೆದ್ದಾರಿಯ ಗರಿಷ್ಠ ಸಾಮರ್ಥಯದ ಎರಡು ಪಟ್ಟು ವಾಹನಗಳು ಸಂಚರಿಸುತ್ತಿದ್ದು, ದಟ್ಟಣೆ ಹೆಚ್ಚಾಗಿದೆ. ಈಗಾಗಲೇ ಈ ಮಾರ್ಗ ರಾಷ್ಟ್ರೀಯ ಹೆದ್ದಾರಿ ಮಾನ್ಯತೆ ಪಡೆದಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯ ಮಹಾಸಂಸ್ಥೆ ಹಮ್ಮಿಕೊಂಡಿದ್ದ ಸಂವಾದದಲ್ಲಿ ಮಾತನಾಡಿದ ಅವರು, “ಹಾಲಿ ಬೆಂಗಳೂರು- ಮೈಸೂರು ರಾಜ್ಯ ಹೆದ್ದಾರಿಯು ಗಂಟೆಗೆ ಗರಿಷ್ಠ 35,000 ವಾಹನ ಸಂಚಾರ ತಡೆದುಕೊಳ್ಳುವ ಸಾಮರ್ಥಯ ಹೊಂದಿದೆ. ಆದರೆ ವಾರಾಂತ್ಯಗಳಲ್ಲಿ 70,000ದಿಂದ 80,000 ವಾಹನಗಳು ಸಂಚರಿಸುತ್ತವೆ. ಕೆಲವೊಮ್ಮೆ ವಾಹನ ಸಂಖ್ಯೆ ಲಕ್ಷ ತಲುಪಿದ್ದು, ದಟ್ಟಣೆ ಉಂಟಾಗುತ್ತಿದೆ ಎಂದರು.
ಕೇಂದ್ರ ಸರ್ಕಾರವು ಈ ಮಾರ್ಗವನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಗುರುತಿಸಿದ್ದು, ಡಿಪಿಆರ್ ಸಿದ್ಧವಾಗಿದೆ. ಭೂಸ್ವಾಧೀನ ಪ್ರಕ್ರಿಯೆಯೂ ಶೇ.70ರಷ್ಟು ಪೂರ್ಣಗೊಂಡಿದ್ದು, ಯಾವುದೇ ಸಂದರ್ಭದಲ್ಲಿ ಕಾಮಗಾರಿ ಆರಂಭವಾಗಬಹುದು. ಇನ್ನೊಂದೆಡೆ ಬೆಂಗಳೂರಿನಿಂದ ಕನಕಪುರ, ಮಳವಳ್ಳಿ ಮಾರ್ಗವಾಗಿ ಮೈಸೂರು ಸಂಪರ್ಕಿಸುವ ರಸ್ತೆ ವಿಸ್ತರಣೆಗೆ ಆದ್ಯತೆ ನೀಡಲಾಗಿದ್ದು, ಬೆಂಗಳೂರಿನಿಂದ ಕನಕಪುರ ನಡುವಿನ ಮಾರ್ಗದ ವಿಸ್ತರಣೆ ಕಾಮಗಾರಿ ಭರದಿಂದ ಸಾಗಿದೆ ಎಂದರು. ಹಿಂದೆಲ್ಲ ಲೋಕೋಪಯೋಗಿ ಇಲಾಖೆ ವಿರುದ್ಧ
ಆರೋಪ ಕೇಳಿಬರುತ್ತಿದ್ದವು. ಆದರೆ ಕಳೆದ 4 ವರ್ಷ 8 ತಿಂಗಳ ಅವಧಿಯಲ್ಲಿ ಇಲಾಖೆ ಬಗ್ಗೆ ಇಂತಹ ಆರೋಪ ಕೇಳಿ ಬಂದಿಲ್ಲ. ರಾಜ್ಯದಲ್ಲಿ 19,000 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿಯಿದ್ದು, 12,000 ಕಿ.ಮೀ. ಮಾರ್ಗವನ್ನು ಸರ್ಕಾರ ಅಭಿವೃದ್ಧಿ ಪಡಿಸಿದೆ. ಹಾಗೆಯೇ 49,000 ಕಿ.ಮೀ. ಉದ್ದದ ಜಿಲ್ಲಾ ಹೆದ್ದಾರಿಯಿದ್ದು, 20,000 ಕಿ.ಮೀ. ಮಾರ್ಗದ ಅಭಿವೃದ್ಧಿಯಾಗಿದೆ. 24,000 ಕಿ.ಮೀ. ಉದ್ದದ ಮಾರ್ಗ ಪರೀಕ್ಷಿಸಲಾಗಿದೆ. ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು. ಎಫ್ಕೆಸಿಸಿಐ ಅಧ್ಯಕ್ಷ ಕೆ.ರವಿ, ಎಫ್ ಕೆಸಿಸಿಐ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷ ಪ್ರಕಾಶ್ ಮಂಡೋತ್ ಇತರರು ಉಪಸ್ಥಿತರಿದ್ದರು.
ಶಿರಾಡಿ ಘಾಟ್ ರಸ್ತೆ ಅಭಿವೃದ್ಧಿಗೆ ಆದ್ಯತೆ:
ಬೆಂಗಳೂರು- ಮಂಗಳೂರು ಹೆದ್ದಾರಿ ನಡುವಿನ ಶಿರಾಡಿ ಘಾಟ್ ಬಳಿಯ 26 ಕಿ.ಮೀ. ಉದ್ದದ ಮಾರ್ಗದ ವಿಸ್ತರಣೆ ಅಭಿವೃದ್ಧಿ ಕಾರ್ಯ ಭರದಿಂದ ಸಾಗಿದ್ದು, ಮೇ ವೇಳೆಗೆ ಮುಕ್ತಾಯವಾಗುವ ನಿರೀಕ್ಷೆ ಇದೆ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಭಾರಿ ವಾಹನಗಳು ಸಂಚರಿಸುವ ಹಾಗೂ ಭಾರಿ ಮಳೆ ಸುರಿಯುವ ಪ್ರದೇಶದಲ್ಲಿ ಸರ್ವಋತು ಗಳಿಗೂ ಹೊಂದುವ ರಸ್ತೆಯನ್ನು ಚೆನ್ನೈನ ತಾಂತ್ರಿಕ ತಜ್ಞರ ಸಲಹೆ ಪಡೆದು ನಿರ್ಮಿಸಲಾಗುತ್ತಿದೆ. ರಸ್ತೆ ಯುದ್ದಕ್ಕೂ ಸುರಕ್ಷತಾ ತಡೆಯನ್ನೂ ಅಳವಡಿಸಲಾಗುವುದು. ಮೇ ವೇಳೆಗೆ ಕಾಮಗಾರಿ ಪೂರ್ಣ ಗೊಂಡು ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲು ಚಿಂತಿಸಲಾಗಿದೆ ಎಂದು ತಿಳಿಸಿದರು.
ಜಪಾನ್‌ಗೆ ಭೇಟಿ ನೀಡಿ ಸುರಂಗ ಮಾರ್ಗದ ಯೋಜನೆಗಳನ್ನು ಪರಿಶೀಲಿಸಲಾಗಿದೆ. ಹಾಗೆಯೇ ಶಿರಾಡಿ ಘಾಟ್ ಮಾರ್ಗದಲ್ಲಿ ಸುರಂಗ ನಿರ್ಮಾಣಕ್ಕೆ ಡಿಪಿಆರ್ ಕೂಡ ಸಿದ್ಧವಾಗುತ್ತಿದೆ. ಪರಿಸರ ಇಲಾಖೆಯಿಂದ ಅನುಮತಿ ಸಿಕ್ಕರೆ ಯೋಜನೆ ಮುಂದುವರಿಸಲು ಅನುಕೂಲವಾಗಲಿದೆ ಎಂದು ಹೇಳಿದರು. ಮಂಗಳೂರು ವಿಮಾನನಿಲ್ದಾಣಕ್ಕೆ ಸಂಪರ್ಕಿಸುವ 2.4 ಕಿ.ಮೀ. ಉದ್ದದ ರಸ್ತೆ
ಅಭಿವೃದ್ಧಿಗೂ ಗಮನ ನೀಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Pro Kabaddi: ಯೋಧಾಸ್‌ಗೆ ತಲೈವಾಸ್ ಆಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.