ಚಂದ್ರಗ್ರಹಣ: ಧರ್ಮಸ್ಥಳ, ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಇಲ್ಲ
Team Udayavani, Jan 30, 2018, 11:00 AM IST
ಬೆಳ್ತಂಗಡಿ/ಉಡುಪಿ: ಖಗ್ರಾಸ ಚಂದ್ರ ಗ್ರಹಣ ನಿಮಿತ್ತ ಜ. 31ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಧ್ಯಾಹ್ನ 2.30 ಗಂಟೆಯಿಂದ ರಾತ್ರಿ 9ರ ವರೆಗೆ ಶ್ರೀ ಮಂಜುನಾಥ ದೇವರ ದರ್ಶನ ಹಾಗೂ ಪೂಜಾದಿ ಸೇವೆಗಳು ಇರುವುದಿಲ್ಲ. ರಾತ್ರಿ 9.30ರಿಂದ 10.30ರ ವರೆಗೆ ಭಕ್ತರಿಗೆ ಹೊರಾಂಗಣದಿಂದ ದೇವರ ದರ್ಶನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ
ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ. 31ರಂದು ಚಂದ್ರ ಗ್ರಹಣ ನಿಮಿತ್ತ ದೇವರ ದರ್ಶನದ ಸಮಯದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ದೇಗುಲದ ವ್ಯವ ಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ತಿಳಿಸಿದ್ದಾರೆ. ಬೆಳಗ್ಗೆ 6.30ರಿಂದ 9ರ ತನಕ ದೇವರ ದರ್ಶನಕ್ಕೆ ಅವಕಾಶ ಇರುತ್ತದೆ. 9 ಗಂಟೆ ಬಳಿಕ ಯಾವುದೇ ಸೇವೆಗಳು ನಡೆ ಯು ವು ದಿಲ್ಲ. ಮಧ್ಯಾಹ್ನದ ಮಹಾಪೂಜೆ ಬೆಳಗ್ಗೆ 8ಕ್ಕೇ ನೆರ ವೇರು ತ್ತದೆ. ಮಧ್ಯಾಹ್ನದ ಅನ್ನಪ್ರಸಾದ ವಿತ ರಣೆಯೂ ಇರುವುದಿಲ್ಲ. ರಾತ್ರಿ 8.30ರಿಂದ ದೇವರ ದರ್ಶನಕ್ಕೆ ಅವಕಾಶ ಇದೆ ಎಂದು ತಿಳಿಸಿದ್ದಾರೆ.
ಉಡುಪಿ: ದೇವರ ದರ್ಶನ ಅಬಾಧಿತ
ಶ್ರೀಕೃಷ್ಣ ಮಠದಲ್ಲಿ ಬೆಳಗ್ಗೆ 8 ಗಂಟೆಯೊಳಗೆ ಮಹಾಪೂಜೆ ಮತ್ತು ಸಂಜೆ ಚಂದ್ರೋದಯದೊಳಗೆ ರಾತ್ರಿ ಪೂಜೆ ಮುಗಿಯುತ್ತದೆ. ಗ್ರಹಣ ಆರಂಭ ಮತ್ತು ಅಂತ್ಯದಲ್ಲಿ ಮತ್ತೆ ಸ್ನಾನ ಜಪತಪಾದಿ
ಗಳನ್ನು ನಡೆಸಲಾಗುವುದು.
ಅಂದು ಭೋಜನ ನಿಷಿದ್ಧ ವಾಗಿದ್ದರೂ ಯಾತ್ರಾರ್ಥಿ ಗಳಿಗೆ ಮಾತ್ರ ಬೆಳಗ್ಗೆ 8ರಿಂದ 10 ಗಂಟೆಯ ವರೆಗೆ ಮತ್ತು ರಾತ್ರಿ 8.45ಕ್ಕೆ ಗ್ರಹಣ ಮುಗಿದ ಬಳಿಕ ಉಪಾಹಾರದ ವ್ಯವಸ್ಥೆ ಮಾಡ ಲಾಗುವುದು. ದೇವರ ದರ್ಶನಕ್ಕೆ ಇಡೀ ದಿನ ಅವಕಾಶ ಇರುತ್ತದೆ. ಏಕಾದಶಿ ರೀತಿಯಲ್ಲಿ ನಿರ್ಜಲ ಉಪವಾಸವಿದ್ದರೂ ಸ್ವಾಮೀಜಿಯವರು ಮರುದಿನದ ಮಧ್ಯಾಹ್ನವೇ ಪೂಜೆ ನಡೆಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.