ಜೈಲಲ್ಲಿ ಶಶಿಕಲಾ ಮೌನವ್ರತ!
Team Udayavani, Jan 31, 2018, 6:05 AM IST
ಚೆನ್ನೈ: ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಅವರ ಆಪ್ತ ಸ್ನೇಹಿತೆ, ಪರಪ್ಪನ ಅಗ್ರಹಾರದಲ್ಲಿರುವ “ಮೌನವ್ರತಧಾರಿ’ ಶಶಿಕಲಾ ಅವರ ಬಾಯಿ ಬಿಡಿಸಲು ಆದಾಯ ತೆರಿಗೆ ಅಧಿಕಾರಿಗಳು ಹೆಣಗಾಡುತ್ತಿದ್ದಾರೆ.
ಕಳೆದ ನ.7 ರಂದು ಶಶಿಕಲಾಗೆ ಸೇರಿದ 187 ಸ್ಥಳಗಳಲ್ಲಿ ಭರ್ಜರಿ “ಆಪರೇಶನ್ ಕ್ಲೀನ್ ಮನಿ’ ದಾಳಿ ನಡೆಸಿದ್ದ ಆದಾಯ ತೆರಿಗೆ ಅಧಿಕಾರಿಗಳು 1400 ಕೋಟಿ ಅಕ್ರಮ ಆಸ್ತಿಯನ್ನು ಪತ್ತೆ ಮಾಡಿದ್ದರು. ಈ ಬಗ್ಗೆ ಬೆಂಗಳೂರಿನ ಜೈಲಿನಲ್ಲಿರುವ ಶಶಿಕಲಾ ಬಳಿ ಹೇಳಿಕೆ ಪಡೆಯಲು ಆಗಿನಿಂದಲೂ ಐಟಿ ಅಧಿಕಾರಿಗಳು ಯತ್ನಿಸುತ್ತಿದ್ದರೂ ಅವರು ಒಂದಲ್ಲಾ ಒಂದು ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ.
ಅಲ್ಲದೆ ಜನವರಿ ಮೊದಲ ವಾರವೇ ಪರಪ್ಪನ ಅಗ್ರಹಾರಕ್ಕೆ ಸಮನ್ಸ್ ಕಳುಹಿಸಿರುವ ಅಧಿಕಾರಿಗಳು, ಶಶಿಕಲಾ ಉತ್ತರಕ್ಕಾಗಿ ಕಾಯುತ್ತಲೇ ಇದ್ದಾರೆ. ವಿಚಿತ್ರವೆಂದರೆ, ಅವರು ಫೆ.10ರ ವರೆಗೆ ಮೌನವ್ರತ ತಾಳಿದ್ದೇನೆ. ಯಾವುದೇ ಕಾರಣಕ್ಕೂ ಬಾಯಿ ಬಿಡುವುದಿಲ್ಲವೆಂದು ಹೇಳಿದ್ದಾರೆ.
ಐಟಿ ಅಧಿಕಾರಿಗಳಿಗೆ ಸಂದಿಗ್ಧಕ್ಕೆ ಕಾರಣವಾಗಿರುವುದೂ ಇದೇ ಅಂಶ. ಜಯಲಲಿತಾ ಅವರ ವೇದ ನಿಲಯಂನಲ್ಲಿ ಸಿಕ್ಕಿರುವ ಭಾರಿ ಪ್ರಮಾಣದ ದಾಖಲೆಗಳು, ಆಸ್ತಿ ಪತ್ರಗಳ ಬಗ್ಗೆ ಮಾಹಿತಿ ಪಡೆಯಬೇಕಾದರೆ ಶಶಿಕಲಾ ಅವರ ಹೇಳಿಕೆ ಪಡೆಯಲೇಬೇಕು. ಆದರೆ, ಪರಪ್ಪನ ಅಗ್ರಹಾರದಲ್ಲೇ ಇದ್ದುಕೊಂಡು ಮಾಹಿತಿ ನೀಡದೇ ತಪ್ಪಿಸಿಕೊಳ್ಳುತ್ತಿರುವ ಶಶಿಕಲಾ ಐಟಿ ಅಧಿಕಾರಿಗಳಿಗೆ ತಲೆನೋವಾಗಿದ್ದಾರೆ.
ಹೀಗಾಗಿ, ವಿಧಿ ಇಲ್ಲದೇ ಫೆ.10ರ ವರೆಗೆ ಕಾಯಲು ನಿರ್ಧರಿಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ನಂತರವೇ ಶಶಿಕಲಾ ಇರುವ ಕಾರಾಗೃಹಕ್ಕೆ ತೆರಳಿ ಹೇಳಿಕೆ ದಾಖಲಿಸಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
“ಮೌನವ್ರತಧಾರಿ’ ಭೇಟಿಯಾದ ದಿನಕರನ್
ಈ ಬೆಳವಣಿಗೆಗಳ ಮಧ್ಯೆ ಶಶಿಕಲಾ ಅವರ ಸಂಬಂಧಿ ಟಿಟಿವಿ ದಿನಕರನ್ ಅವರು, ಮಂಗಳವಾರ ಪರಪ್ಪನ ಅಗ್ರಹಾರಕ್ಕೆ ಆಗಮಿಸಿ ಭೇಟಿ ಮಾಡಿದ್ದಾರೆ. ಈ ವೇಳೆ ಮೌನವ್ರತ ಧರಿಸಿರುವ ಶಶಿಕಲಾ ದಿನಕರನ್ ಅವರನ್ನು ಭೇಟಿಯಾದರೋ ಅಥವಾ ಇಲ್ಲವೋ ಎಂಬುದು ತಿಳಿದುಬಂದಿಲ್ಲ.
– ಐಟಿ ಅಧಿಕಾರಿಗಳ ವಿಚಾರಣೆಗೆ ಸಹಕರಿಸದ ಜಯಾ ಆಪೆ¤
– ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಜಯಾ ಸ್ನೇಹಿತೆ
– ವಿಚಾರಣೆಗಾಗಿ ಸಮನ್ಸ್ ನೀಡಿರುವ ಐಟಿ ಅಧಿಕಾರಿಗಳು
– ಫೆ.10ರ ವರೆಗೆ ಮೌನವ್ರತ, ಮಾತಾಡಲ್ಲ ಎನ್ನುತ್ತಿರುವ ಶಶಿಕಲಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.