ಅಡೋಬ್ ಇಂಡಿಯಾದಲ್ಲಿ ಸಮಾನ ವೇತನ ಜಾರಿ
Team Udayavani, Feb 1, 2018, 6:45 AM IST
ಹೊಸದಿಲ್ಲಿ: ಅಡೋಬ್ ಇಂಡಿಯಾದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ಸಮಾನ ವೇತನ ನೀಡಲಾಗುತ್ತಿದೆ. ಹೀಗೆಂದು ಕಂಪನಿಯೇ ಘೋಷಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಇಂಥ ಘೋಷಣೆ ಮಾಡಲಾಗಿದೆ. ಈ ಮೂಲಕ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಕಂಪನಿಗಳಲ್ಲಿ ಹೊಸ ಭಾಷ್ಯವನ್ನು ಕಂಪನಿ ಬರೆದಿದೆ. ಭಾರತದಲ್ಲಿ ಮಹಿಳೆಯರಿಗೆ, ಪುರುಷರಿಗೆ ವೇತನ ನೀಡುವಲ್ಲಿ ಲಿಂಗ ತಾರತಮ್ಯವಿದೆ ಎಂಬ ವಾದಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ.
ಕಳೆದ ತಿಂಗಳ ಅಂತ್ಯದಲ್ಲಿ ಅಮೆರಿಕದಲ್ಲಿ ಸಮಾನ ರೀತಿಯಲ್ಲಿ ವೇತನ ನೀಡುತ್ತಿರುವುದಾಗಿ ಅಡೋಬ್ ಘೋಷಿಸಿತ್ತು.ಈ ಬಗ್ಗೆ ಬ್ಲಾಗ್ನಲ್ಲಿ ಬರೆದುಕೊಂಡಿರುವ ಸಂಸ್ಥೆ “ಭಾರತದಲ್ಲೂ ನಾವು ಸಮಾನ ವೇತನ ಸಾಧಿಸಿದ್ದೇವೆ ಎಂದು ಘೋಷಿಸಲು ಸಂತಸವಾಗುತ್ತಿದೆ. ಭಾರತದಲ್ಲಿಯ ನಮ್ಮ ಉದ್ಯೋಗಿಗಳ ಒಟ್ಟು ಸಂಖ್ಯೆಯಲ್ಲಿ ಶೇ.80ರಷ್ಟು ಉದ್ಯೋಗಿಗಳು ಲಿಂಗ ತಾರತಮ್ಯವಿಲ್ಲದೇ ವೇತನ ಪಡೆಯುತ್ತಿದ್ದಾರೆ. ಬಾಕಿ ಶೇ.20ರಷ್ಟು ಉದ್ಯೋಗಿಗಳು ಉದ್ಯೋಗ ನಿಮಿತ್ತ ಹೊರದೇಶಗಳಲ್ಲಿದ್ದಾರೆ. ಅವರಿಗೂ ಸಮಾನ ವೇತನ ನೀಡಲು ಪ್ರಯತ್ನಿಸಲಾಗುತ್ತಿದೆ’ ಎಂದಿದೆ. ಕಳೆದ ವರ್ಷ ಗೂಗಲ್ನಲ್ಲಿ ಪುರುಷರಿಗೆ, ಮಹಿಳೆಯರಿಗೆ ಸಮಾನವಾಗಿ ವೇತನ ಕೊಡಲಾಗುತ್ತಿಲ್ಲ ಎಂಬ ವರದಿಗಳ ಬಗ್ಗೆ ಭಾರಿ ಟೀಕೆ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
New Zealand: ತವರಿನಂಗಳದಲ್ಲೇ ಟೆಸ್ಟ್ ನಿವೃತ್ತಿಗೆ ಸೌಥಿ ನಿರ್ಧಾರ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.