ಹಲ್ಲೆ, ಮಾನಭಂಗ ಯತ್ನ : ಸೆರೆ
Team Udayavani, Feb 1, 2018, 10:28 AM IST
ವಿಟ್ಲ: ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವ್ಯಕ್ತಿಗೆ ಹಲ್ಲೆ ನಡೆಸಿ, ಆತನ ಪತ್ನಿಯ ಮಾನಭಂಗಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ವಿಟ್ಲ ಪೊಲೀಸರು ಬುಧವಾರ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ವಿಟ್ಲದ ಉಕ್ಕುಡ ಕಾಂತಡ್ಕ ನಿವಾಸಿ ಬಶೀರ್ ಬಂಧಿಸಲ್ಪಟ್ಟ ಆರೋಪಿ. ಕಾಂತಡ್ಕ ನಿವಾಸಿ ಮಹಮ್ಮದ್ ಶರೀಫ್ ಅವರು ಉಕ್ಕುಡದಲ್ಲಿ ಮೆಹಂದಿ ಕಾರ್ಯಕ್ರಮಕ್ಕೆ ಪತ್ನಿ ಜತೆ ಆಗಮಿಸಿದ್ದರು. ಇಲ್ಲಿಗೆ ಕಾಂತಡ್ಕ ನಿವಾಸಿಗಳಾದ ಇರ್ಷಾದ್, ಸಮದ್, ಹಕೀಂ ಹಾಗೂ ಬಶೀರ್ ಆಗಮಿಸಿದ್ದರು. ಈ ಪೈಕಿ ಇರ್ಷಾದ್ ಸಂಪ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾಳುಮೆಣಸು ಕಳ್ಳತನ ಪ್ರಕರಣದ ಆರೋಪಿಯಾಗಿ ದ್ದನೆನ್ನಲಾಗಿದೆ. ಈ ಪ್ರಕರಣದ ಬಗ್ಗೆ ಮಹಮ್ಮದ್ ಶರೀಫ್ ಜತೆ ಜಗಳ ಆರಂಭಿಸಿದ ಇರ್ಷಾದ್, ನೀನು ನನ್ನ ವಿರುದ್ಧ ಪೊಲೀಸರಿಗೆ ಮಾಹಿತಿ ನೀಡುತ್ತೀಯಾ ಎಂದು ಬೆದರಿಸಿ ಹಲ್ಲೆ ನಡೆಸಿದ್ದು, ತಡೆಯಲು ಬಂದ ಶರೀಫ್ ಅವರ ಪತ್ನಿಯ ಕೈ ಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.