ಅಕ್ರಮ ಮರಳು ಅಡ್ಡೆಗೆ ದಾಳಿ
Team Udayavani, Feb 1, 2018, 10:32 AM IST
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಸರಪಾಡಿ ಮತ್ತು ಬರಿಮಾರಿನಲ್ಲಿ ಅಕ್ರಮ ಮರಳು ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಹಾಗೂ ಗಣಿ ಇಲಾಖಾ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಮರಳು, ನಾಲ್ಕು ಯಾಂತ್ರೀಕೃತ ದೋಣಿ ಹಾಗೂ 1 ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಎಸ್ಪಿ ರವಿಕಾಂತೇ ಗೌಡ ಅವರ ಮಾರ್ಗ ದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಎಸ್ಸೆ ಪ್ರಸನ್ನ ಅವರ ನೇತೃತ್ವದ ತಂಡ ಈ ದಾಳಿ ನಡೆಸಿದೆ. ಮರಳುಗಾರಿಕೆಯಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಸ್ವಾಧೀನಪಡಿಸಿಕೊಂಡಿರುವ ಮರಳು, ದೋಣಿ ಹಾಗೂ ಲಾರಿಯ ಮೌಲ್ಯ ಸುಮಾರು 5 ಲಕ್ಷ ರೂ. ಆಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ
Mangaluru ಕಂಬಳಕ್ಕೆ ನೆರವು: ಇಂದು ಸಿಎಂಗೆ ಅಹವಾಲು
ವಿಶಿಷ್ಟ ವಿಚಾರ ಚಿಂತನ ಮಂಥನ: ಮಂಗಳೂರು ಲಿಟ್‌ಫೆಸ್ಟ್ ಇಂದಿನಿಂದ
ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 153: ವೈಯಕ್ತಿಕ ಅಭಿಪ್ರಾಯ ಬೇರೆ, ಕರ್ತವ್ಯ ಬೇರೆ
BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
Chandan Shetty: ಕಾಟನ್ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.