ನಾಗಪಟ್ಟಣ ಸೇತುವೆ ಬಳಿ ಪಯಸ್ವಿನಿಗೆ ಮರಳು ಕಟ್ಟ 


Team Udayavani, Feb 1, 2018, 10:47 AM IST

1-Feb-5.jpg

ಸುಳ್ಯ : ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ನೀರೊದಗಿಸುವ ಪಯಸ್ವಿನಿಯಲ್ಲಿ ಹರಿವು ಇಳಿಮುಖಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾಗಪಟ್ಟಣ ಸೇತುವೆ ಬಳಿ ತಾತ್ಕಾಲಿಕ ಮರಳು ಕಟ್ಟ ನಿರ್ಮಾಣ ಪ್ರಕ್ರಿಯೆಗೆ ಸಿದ್ಧತೆ ಆರಂಭಗೊಂಡಿದೆ.

ಬಹುನಿರೀಕ್ಷಿತ ವೆಂಟೆಡ್‌ ಡ್ಯಾಂ ನಿರ್ಮಾಣ ಪ್ರಸ್ತಾವನೆ ಕಡತದೊಳಗೆ ಬಂಧಿ ಆಗಿರುವ ಕಾರಣ, ನಗರದ ನೀರಿನ
ಬವಣೆಗೆ ಪರಿಹಾರ ಕಂಡುಕೊಳ್ಳಲು ಈ ವರ್ಷವೂ ಮರಳಿನ ಕಟ್ಟಕ್ಕೆ ಜೋತು ಬೀಳಬೇಕಾದ ಪ್ರಮೇಯ ತಪ್ಪಿಲ್ಲ. ಈ ಬಾರಿ ಬಿಸಿಲಿನ ತೀವ್ರತೆ ಏರಿಕೆಯತ್ತ ಸಾಗಿದ್ದು, ಬೇಸಗೆಯ ಆರಂಭದಲ್ಲಿಯೇ ಕುಡಿಯುವ ನೀರಿನ ಕೊರತೆ ಕಾಡುವ ಅಪಾಯ ಇರುವುದನ್ನು ಮನಗಂಡು ನೀರು ನಿಲ್ಲಿಸುವ ನಿಟ್ಟಿನಲ್ಲಿ ನ.ಪಂ. ವತಿಯಿಂದ ತಾತ್ಕಾಲಿಕ ಕ್ರಮ ಕೈಗೊಳ್ಳಲಾಗುತ್ತಿದೆ.

ಕಾಮಗಾರಿ ಗುತ್ತಿಗೆ
ನಾಲ್ಕು ಲಕ್ಷ ರೂ. ವೆಚ್ಚದ ಈ ಕಾಮಗಾರಿಗೆ ಟೆಂಡರ್‌ ಆಗಿ, ಗುತ್ತಿಗೆದಾರರು ಕಾಮಗಾರಿ ವಹಿಸಿಕೊಂಡಿದ್ದಾರೆ. ನಿರ್ಮಾಣ ಕಾರ್ಯದ ಪೂರ್ವಭಾವಿ ಸಿದ್ಧತೆಗಳು ಆರಂಭಗೊಂಡಿವೆ. ನದಿ ಭಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಟ್ಟಕ್ಕೆ, 50 ಕೆ.ಜಿ. ಪ್ಲಾಸ್ಟಿಕ್‌ ಚೀಲದಲ್ಲಿ ಮರಳು ತುಂಬಿಸುವ ಕಾರ್ಯ ಪೂರ್ಣಗೊಂಡಿದೆ. ನದಿಯಿಂದ ಮೇಲೆತ್ತುವ ನೀರು ಸಂಗ್ರಹಗೊಳ್ಳುವ ಕಲ್ಲಮುಟ್ಲು ಪಂಪ್‌ಹೌಸ್‌ನ ಬಾವಿಯಿಂದ ಹೊಳೆತ್ತಿ, ಸ್ವಚ್ಛಗೊಳಿಸಲಾಗಿದೆ. ವಾರದೊಳಗೆ ನದಿಯಲ್ಲಿ ಒಂದೂವರೆ ಅಡಿಯಷ್ಟು ಎತ್ತರದಲ್ಲಿ ಮರಳಿನ ಕಟ್ಟ ನಿರ್ಮಾಣ ಪೂರ್ಣಗೊಳ್ಳಲಿದೆ.

ನಗರಕ್ಕೆ ನೀರು
ವರ್ಷದ 365 ದಿನವೂ 24 ತಾಸು ಇಲ್ಲಿಂದ ನಗರಕ್ಕೆ ನೀರು ಪೂರೈಸಲಾಗುತ್ತದೆ. ಆದರೆ ಬೇಸಗೆಯಲ್ಲಿ ಇದರ ಪ್ರಮಾಣ ಹೆಚ್ಚು. ಕಲ್ಲುಮಟ್ಲು ಪಂಪ್‌ಹೌಸ್‌ ಬಳಿ 50 ಎಚ್‌ಪಿಯ 1 ಮತ್ತು 45 ಎಚ್‌ಪಿಯ 2 ಪಂಪ್‌ಗಳಿದ್ದು, ಆ ಮೂಲಕ ನೀರನ್ನು ಸಂಗ್ರಹಿಸಿ ಪಂಪ್‌ಹೌಸ್‌ನಲ್ಲಿರುವ ಬಾವಿಗೆ, ಅಲ್ಲಿಂದ ಅನತಿ ದೂರದಲ್ಲಿರುವ ಶುದ್ಧೀಕರಣ ಘಟಕಕ್ಕೆ ಪೂರೈಕೆಯಾಗುತ್ತದೆ.

ಕಲ್ಲುಮಟ್ಲು ನೀರು ಶುದ್ಧೀಕರಣ ಘಟಕದ ಬಳಿ ಇರುವ ಒಟ್ಟು 1.50 ಲಕ್ಷ ಗ್ಯಾಲನ್‌ ಸಾಮರ್ಥ್ಯದ 2 ಟ್ಯಾಂಕ್‌ಗಳ ಮೂಲಕ ನಗರಕ್ಕೆ ನೀರು ಹರಿದರೆ, ಇನ್ನೊಂದು ಪೈಪ್‌ ಮೂಲಕ ಕುರುಂಜಿಗುಡ್ಡೆಯ ಟ್ಯಾಂಕಿಗೆ ನೀರು ಹರಿಸಲಾಗುತ್ತದೆ. ಅಲ್ಲಿಂದ ನಗರದ ಮನೆ ಹಾಗೂ ಗೃಹೇತರ ಕಟ್ಟಡಗಳಿಗೆ ನಳ್ಳಿ ಸಂಪರ್ಕ ಒದಗಿಸಲಾಗಿದೆ. ಈಗ 3,940 ನಳ್ಳಿ ಸಂಪರ್ಕ ಇದ್ದು, ನದಿ ನೀರಿನ ಜತೆಗೆ 37 ಕೊಳವೆಬಾವಿಗಳನ್ನು ಬಳಸಲಾಗುತ್ತಿದೆ.

ನೀರಿನ ಕೊರತೆ
2011ರ ಜನಗಣತಿ ಆಧಾರದಲ್ಲಿ ನಗರದ ಜನಸಂಖ್ಯೆ 19,958. ಅದೀಗ 25 ಸಾವಿರ ದಾಟಿರಬಹುದು. ದಿನವೊಂದಕ್ಕೆ ನಗರಕ್ಕೆ ಬೇಕಾದ ನೀರಿನ ಪ್ರಮಾಣ 1.69 ಎಂ.ಎಲ್‌.ಡಿ. ವ್ಯಕ್ತಿಯೊಬ್ಬರಿಗೆ ನೀಡುತ್ತಿರುವ ನೀರು 90 ಲೀಟರ್‌. ಅಂದರೆ, 45 ಲೀ. ನೀರು ಕಡಿಮೆಯೇ. ಬೇಸಗೆಯಲ್ಲಿ ಇದರ ಪ್ರಮಾಣ ಇನ್ನಷ್ಟು ಹೆಚ್ಚಾಗುತ್ತದೆ.

ಮಂಜೂರಾತಿ ಸಿಕ್ಕಿಲ್ಲ
ಐದು ವರ್ಷದ ಹಿಂದೆ ನಗರದ ನೀರಿನ ಸಮಸ್ಯೆ ಪರಿಹಾರಕ್ಕೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸರಕಾರಕ್ಕೆ ಸಲ್ಲಿಸಿದ 65.5 ಕೋಟಿ ರೂ. ಪ್ರಸ್ತಾವನೆ ನನೆಗುದಿಗೆ ಬಿದ್ದಿದೆ. ಪಯಸ್ವಿನಿ ನದಿಗೆ ನಾಗಪಟ್ಟಣದಲ್ಲಿ ವೆಂಟೆಡ್‌ ಡ್ಯಾಂ, ಜಾಕ್‌ವೆಲ್‌ ಪಂಪ್‌ ಹೌಸ್‌, ವಾಟರ್‌ ಟ್ರೀಟ್‌ ಪ್ಲಾಂಟ್‌ ರಚನೆ ಸಹಿತ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಕುರಿತು ಪ್ರಸ್ತಾವಿಸಲಾಗಿತ್ತು. ಅದು ಸರಕಾರದ ಹಂತದಲ್ಲಿದ್ದು, ಅನುದಾನ ಬಿಡುಗಡೆಗೆ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆ ಎದುರಾಗಿದೆ. ಹಾಗಾಗಿ ಬೇಸಗೆ ಕಾಲದಲ್ಲಿ ನಗರದಲ್ಲಿ ಕುಡಿಯುವ ನೀರು ಪೂರೈಕೆಗೆ ಶಾಶ್ವತ ವ್ಯವಸ್ಥೆ ಇಲ್ಲದೆ, ಮರಳಿನ ತಾತ್ಕಾಲಿಕ ಕಟ್ಟ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಲಕ್ಷಾಂತರ ರೂ. ಹಣ ವ್ಯಯವಾಗುತ್ತಿದೆ.

ಮರಳಿನ ಕಟ್ಟ
ಕಳೆದ ವರ್ಷ ನಿರ್ಮಿಸಿದ ಸ್ಥಳದಿಂದ ಸ್ವಲ್ಪ ಮೇಲ್ಭಾಗದಲ್ಲಿ ಮರಳಿನ ಕಟ್ಟ ರಚಿಸಿ, ನೀರು ಸಂಗ್ರಹಿಸುವ ಕಾಮಗಾರಿ
ಆರಂಭಗೊಂಡಿದೆ. ಒಂದೆರೆಡು ದಿನದಲ್ಲಿ ಮರಳು ಚೀಲ ಜೋಡಿಸಲಾಗುತ್ತದೆ. ಈ ಕಾಮಗಾರಿಗೆ 4 ಲಕ್ಷ ರೂ. ವೆಚ್ಚ ತಗಲುತ್ತದೆ. ಬೇಸಗೆ ಕಾಲದಲ್ಲಿ ನಗರದ ನೀರಿನ ಸಮಸ್ಯೆ ನಿವಾರಣೆಗೆ ಮರಳಿನ ಕಟ್ಟದಲ್ಲಿ ಸಂಗ್ರಹಗೊಳ್ಳಲಿರುವ ನೀರನ್ನು ಬಳಕೆ ಮಾಡಲಾಗುತ್ತದೆ.
– ಶಿವಕುಮಾರ್‌
ಎಂಜಿನಿಯರ್‌, ನ.ಪಂ., ಸುಳ್ಯ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.