![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 1, 2018, 3:14 PM IST
ಚಳ್ಳಕೆರೆ: ವಿದ್ಯಾರ್ಥಿಗಳ ಬದುಕು ರೂಪಿಸುವ ಶಕ್ತಿ ಕೇವಲ ಶಿಕ್ಷಕರಿಗೆ ಮಾತ್ರ ಇದೆ. ಶಾಲಾ ಹಂತದಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಶಿಕ್ಷಕರೊಂದಿಗೆ ಪೋಷಕರೂ ಗಮನ ನೀಡಬೇಕು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಸಂಘ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಬುಧವಾರ ನಡೆದ “ಮಕ್ಕಳ ಹಬ್ಬ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದ್ದು ಹಲವಾರು ಸೌಲಭ್ಯ ಒದಗಿಸಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಶಿಕ್ಷಣ ಯಾವುದೇ ರೀತಿಯಲ್ಲಿ ಆರ್ಥಿಕವಾಗಿ ಹೊರೆಯಾಗುತ್ತಿಲ್ಲ. ಶಿಕ್ಷಕರು ನೀಡುವ ಶಿಕ್ಷಣವನ್ನು ಮಕ್ಕಳು ಶ್ರದ್ಧೆಯಿಂದ ಕಲಿಯಬೇಕು. ಎಲ್ಲಾ ಸಮುದಾಯದ ಮಕ್ಕಳಿಗೂ ಸಮಾನ ಶಿಕ್ಷಣ ನೀಡುವಲ್ಲಿ ಶಿಕ್ಷಣ ಇಲಾಖೆ ಸದಾ ಮುಂದಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎನ್. ರವಿಕುಮಾರ್ ಮಾತನಾಡಿ, ವಿಶೇಷವಾಗಿ ಪರಿಶಿಷ್ಟ ವರ್ಗಗಳ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಸಲುವಾಗಿ ಮೊರಾರ್ಜಿ ಶಾಲೆಗಳು ಪ್ರಾರಂಭವಾಗಿವೆ. ಮಕ್ಕಳಿಗೆ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶದ ಮಕ್ಕಳು ಇದರ ಸದುಪಯೋಗ ಪಡೆಯಬೇಕು ಎಂದು ಕರೆ
ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಸ್. ನಾಗೇಂದ್ರಪ್ಪ ಮಾತನಾಡಿ, 2003-04ನೇ ಸಾಲಿನಲ್ಲಿ ಮೊರಾರ್ಜಿ ಶಾಲೆಗಳು ಪ್ರಾರಂಭವಾಗಿವೆ. ಈ ಶಾಲೆಯಲ್ಲಿ 2010-11ನೇ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಅವಕಾಶ ದೊರೆತಿದೆ. ಅಲ್ಲಿಂದ ಇಲ್ಲಿಯ ತನಕ ಪ್ರತಿ ವರ್ಷ ಮಕ್ಕಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗುತ್ತಿದ್ದು, ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು ಶ್ರಮಿಸುತ್ತಿದ್ದಾರೆಂದರು.
ಶಿಕ್ಷಕ ಪಾತಲಿಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಮೊರಾರ್ಜಿ ಶಾಲೆ ಪ್ರತಿವರ್ಷ ಉತ್ತಮ ಫಲಿತಾಂಶ ಪಡೆಯುತ್ತಿದೆ. ಕ್ರೀಡಾ ಸ್ಪರ್ದೆಗಳಲ್ಲೂ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಬಿ.ಟಿ. ರಮೇಶ್ ಗೌಡ, ಪಶುವೈದ್ಯ ಇಲಾಖೆಯ ಡಾ| ಹನುಮಪ್ಪ, ಗ್ರಾಪಂ ಸದಸ್ಯ ಶಿವಣ್ಣ, ಕಿತ್ತೂರು ರಾಣಿ ಚನ್ನಮ್ಮ ಶಾಲೆಯ ಮುಖ್ಯ ಶಿಕ್ಷಕ ನಾಗರಾಜ, ವೆಂಕಟೇಶ್, ಮುರುಗೇಶಪ್ಪ, ಜಗದೀಶ್ ಬಾಗವಹಿಸಿದ್ದರು. ಬಸವರಾಜು ಪ್ರಾರ್ಥಿಸಿದರು. ರವಿಕುಮಾರ್ ವಂದಿಸಿದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
You seem to have an Ad Blocker on.
To continue reading, please turn it off or whitelist Udayavani.