ಚಿಂತಾಮಣಿಗೆ ಹಾಲಿ, ಮಾಜಿ ಶಾಸಕರ ಕೊಡುಗೆ ಏನು?
Team Udayavani, Feb 1, 2018, 3:42 PM IST
ಚಿಂತಾಮಣಿ: ತಾಲೂಕಿನಲ್ಲಿ ಕಳೆದ 65 ವರ್ಷಗಳಿಂದ ಶಾಸಕರ ಆಡಳಿತ ವೈಫಲ್ಯದಿಂದ ಗ್ರಾಮಾಂತರ ಪ್ರದೇಶಗಳಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಜನತೆ ಮೂಲ ಭೂತ ಸೌಲಭ್ಯಗಳಿಗಾಗಿ ಪರಿತಪಿಸುವಂತಾಗಿದೆ ಎಂದು ಕಾಂಗ್ರೆಸ್ ಮುಖಂಡ ವೆಂಕಟೇಶ್‌ರೆಡ್ಡಿ ದೂರಿದರು.
ತಾಲೂಕಿನ ನೆರ್ನಕಲ್ಲು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 60 ವರ್ಷಗಳಿಂದ ತಾಲೂಕಿನಲ್ಲಿ ಸ್ಥಳೀಯ ಎರಡು ಪ್ರಭಾವಿ ಕುಟುಂಬಗಳ ಆಡಳಿತದಲ್ಲಿ ತಾಲೂಕು ಅಭಿವೃದ್ಧಿ ಕುಂಠಿತಗೊಂಡಿದೆ. ಇದರ ಜೊತೆಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತ್ತೂಬ್ಬ ವ್ಯಕ್ತಿ ಕ್ಷೇತ್ರಕ್ಕೆ ಆಗಮಿಸಿ ಶಾಸಕರಾದರೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ
ಎಂದು ಮಾಜಿ ಶಾಸಕ ಎಂ.ಸಿ.ಸುಧಾಕರ್ ಹಾಗೂ ದಿ.ಕೆ. ಎಂ. ಕೃಷ್ಣಾರೆಡ್ಡಿ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು.
ಅಭಿವೃದ್ಧಿ ಪ್ರಚಾರ: ಕ್ಷೇತ್ರದಲ್ಲಿ ಕೆಲವರು ನಮ್ಮದು 60 ವರ್ಷಗಳ ಇತಿಹಾಸವುಳ್ಳ ರಾಜಕಾರಣ ಎಂದು ಹೇಳಿಕೊಳ್ಳುತ್ತಾರೆ. ಇದೇ ರೀತಿ ಮತ್ತೂಬ್ಬರು 5 ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಯಾವುದೇ ಅಭಿವೃದ್ಧಿಯಾಗಿಲ್ಲ. ತಾಲೂಕಿನಲ್ಲಿ ರಸ್ತೆಗಳು ಗುಂಡಿಗಳಿಂದ ಕೂಡಿವೆ. ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಿಲ್ಲ. ಗ್ರಾಮಗಳು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ. ಆದರೆ, ಇಲ್ಲಿನ
ರಾಜಕೀಯ ನಾಯಕರು ಮಾತ್ರ ಕ್ಷೇತ್ರದಲ್ಲಿ ನಾವು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ ಎಂದು ಜನರನ್ನು ವಂಚಿಸುತ್ತಿದ್ದಾರೆ ಎಂದು ಹಾಲಿ ಶಾಸಕ ಕೃಷ್ಣಾರೆಡ್ಡಿ ವಿರುದ್ಧ ವಾಗ್ಧಾಳಿ ನಡೆಸಿದರು.
ಕಾಂಗ್ರೆಸ್ ಅಭ್ಯರ್ಥಿ: ಕಳೆದ ಒಂದು ವರ್ಷದಿಂದ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಹಲವು ರೀತಿಯ ಸಮಾಜ ಸೇವಾ ಕಾರ್ಯಕ್ರಮ ಹಮ್ಮಿಕೊಂಡು ಬಡವರು, ದಿನದಲಿತರು, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ನೆರವಿಗೆ ಧಾವಿಸಿ ಅವರ ಕಷ್ಟ
ಸುಖಗಳಿಗೆ ಸ್ಪಂದಿಸಿದ್ದೇನೆ. ತಮ್ಮ ಸಮಾಜಮುಖೀ ಕಾರ್ಯ ಗುರುತಿಸಿರುವ ಸಂಸದ ಕೆ.ಎಚ್.ಮುನಿಯಪ್ಪ ಕಾಂಗ್ರೆಸ್ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಿಂತಾಮಣಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಮತದಾರರು ಆಶೀರ್ವದಿಸಿದರೆ ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತಾವು ಏನು ಎಂಬುದನ್ನು ತೋರಿಸುತ್ತೇನೆ ಎಂದು ತಿಳಿಸಿದರು.
ಸಭೆಯಲ್ಲಿ ಮುಖಂಡರಾದ ಚಂದ್ರು, ನಾರಮಾಕಲಹಳ್ಳಿ ಮೂರ್ತಿ, ದೂಪಂ ಪ್ರಸಾದ್, ನೆರ್ನಕಲ್ಲು ಗ್ರಾಮದ ಎನ್.ಕೆ.ನಾಗರಾಜ್, ನಾಗಪ್ಪ, ಎನ್.ನಾರಾಯಣಸ್ವಾಮಿ, ಮುರಳಕೃಷ್ಣ, ಲಕ್ಷ್ಮೀಪತಿ, ದೇವರಾಜ್, ಮುನಿರಾಜ್, ಅನಿಲ್ ಕುಮಾರ್, ನಾರಾಯಣಸ್ವಾಮಿ, ವೆಂಕಟೇಶ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.