ಮಹಾ ಮಸ್ತಕಾಭಿಷೇಕಕ್ಕೆ275 ಕೋಟಿ ರೂ.ಬಿಡುಗಡೆ
Team Udayavani, Feb 2, 2018, 6:20 AM IST
ಹಾಸನ : ಶ್ರವಣಬೆಳಗೊಳದ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಮೂಲ ಸೌಕರ್ಯಗಳಿಗೆ ಸರ್ಕಾರ 275 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್ .ಸಿ.ಮಹದೇವಪ್ಪ ತಿಳಿಸಿದರು.
ಶ್ರವಣಬೆಳಗೊಳಕ್ಕೆ ಗುರುವಾರ ಭೇಟಿ ನೀಡಿದ್ದ ಸಚಿವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಜರ್ಮನ್ ಟೆಕ್ನಾಲಜಿಯಲ್ಲಿ ಅಟ್ಟಣಿಗೆ ನಿರ್ಮಾಣ,ಯಾತ್ರಾರ್ಥಿಗಳು, ಪ್ರವಾಸಿಗರಿಗೆ ಮೂಲ ಸೌಕರ್ಯಗಳಾದ ವಸತಿ, ಆಹಾರ, ರಸ್ತೆ, ಆರೋಗ್ಯ,ಕುಡಿಯುವ ನೀರು, ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಸರ್ಕಾರ ಬಜೆಟ್ನಲ್ಲಿ ಘೋಷಣೆ ಮಾಡಿದ್ದ 175 ಕೋಟಿ ರೂ. ಜೊತೆಗೆ ರಸ್ತೆಗಳ ಅಭಿವೃದ್ಧಿ ಮತ್ತಿತರ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ ಅನುದಾನ ಬಿಡುಗಡೆಯಾಗಿದ್ದು, ಇದುವರೆಗೂ 275 ಕೋಟಿ ರೂ.ಬಿಡುಗಡೆಯಾಗಿದೆ. ಪ್ರಾಕೃತ ವಿಶ್ವವಿದ್ಯಾನಿಲಯ ಕಟ್ಟಡ ನಿರ್ಮಾಣಕ್ಕೆ 21 ಕೋಟಿ ಮತ್ತು ಗಣ್ಯರ ಅತಿಥಿ ಗೃಹ
ನಿರ್ಮಾಣಕ್ಕೂ 4 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು.
ಸಿಎಂ ಸಿದ್ದರಾಮಯ್ಯಅವರ ನೇತೃತ್ವದಲ್ಲಿ 3 ಸಭೆಗಳನ್ನು ನಡೆಸಿದ್ದರಿಂದ ಮಹಾಮಸ್ತಕಾಭಿಷೇಕದ ಸಿದ್ಧತಾ ಕಾರ್ಯಗಳು
ತ್ವರಿತವಾಗಿ ಪೂರ್ಣಗೊಳ್ಳಲು ಸಹಕಾರಿಯಾಯಿತು. ಕ್ರಿಯಾ ಯೋಜನೆಯಂತೆ ಸಿದಟಛಿತಾ ಕಾರ್ಯಗಳು ಸುಗಮವಾಗಿ ಪೂರ್ಣಗೊಳ್ಳಲು ಎಲ್ಲಾ ಇಲಾಖಾಧಿಕಾರಿಗಳ ಸಹಕಾರ ದೊರೆತಿದೆ. ಲೋಕಸಭಾ ಸದಸ್ಯರು ಹಾಗೂ ಮಾಜಿ ಪ್ರಧಾನಿಗಳೂ ಆದ ದೇವೇಗೌಡರು ಮಹಾಮಸ್ತಕಾಭಿಷೇಕದ ಯಶಸ್ವಿಗೆ ಸಂಪೂರ್ಣ ಸಹಕಾರ ನೀಡುವರೆಂಬ ವಿಶ್ವಾಸವಿದೆ ಎಂದು ಸಚಿವರು ತಿಳಿಸಿದರು.
ಸಚಿವರು-ಡೀಸಿ ಸಮಾಧಾನಪಡಿಸಿ: ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಸಚಿವ ಮಹದೇವಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯ ಸರ್ಕಾರದ ಸಂಪೂರ್ಣ ಸಹಕಾರ ನೀಡುತ್ತಿರುವುದು ತೃಪ್ತಿ ತಂದಿದೆ.
ಜಿಲ್ಲಾಡಳಿತ ವತಿಯಿಂದ ಎಲ್ಲಾ ರೀತಿಯ ಸಹಕಾರ ದೊರೆಯುತ್ತಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನಡುವೆ ಇರುವ ಭಿನ್ನಾಭಿಪ್ರಾಯವನ್ನು ಹಿರಿಯ ಸಚಿವರಾದ ನೀವು ಪರಿಹರಿಸಬೇಕು ಎಂದು ಸಲಹೆ ನೀಡಿದರು.
ಉಪನಗರಗಳು, ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ವೇದಿಕೆ ಮತ್ತು ವಸ್ತುಪ್ರದರ್ಶನ, ಭೋಜನಾಲಯ, ಮುಖ್ಯ ವೇದಿಕೆ, ಅಗ್ನಿಶಾಮಕ, ಹೆಲಿಪ್ಯಾಡ್, ತಾತ್ಕಾಲಿಕ ಬಸ್ ನಿಲ್ದಾಣಕ್ಕೂ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಲಾಯಿತು.
ಸಚಿವರು 108 ಚಂದ್ರಬಾಬು ಸಾಗರ ಮಹಾರಾಜರನ್ನು ಭೇಟಿ ಮಾಡಿ ಮಹಾಮಸ್ತಕಾಭಿಷೇಕ ಮಹೋತ್ಸವದ ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.