ಸ್ಟ್ಯಾಂಡರ್ಡ್‌ ಡಿಡಕ್ಷನ್‌ ಕೊಡುಗೆ


Team Udayavani, Feb 2, 2018, 8:45 AM IST

Jetli-3.jpg

ಆದಾಯ ತೆರಿಗೆ ಮಿತಿಯಲ್ಲಿ ಬದಲಾವಣೆಯಾಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ. ಆ ಬೇಸರವನ್ನು ಸ್ಟ್ಯಾಂಡರ್ಡ್‌ ಡಿಡಕ್ಷನ್‌ ಅನ್ನು ದಶಕದ ಬಳಿಕ ಮತ್ತೆ ಪ್ರಾರಂಭಿಸುವ ಮೂಲಕ ಆಂಶಿಕ ಸಂತೋಷ ನೀಡಲು ಪ್ರಯತ್ನ ಮಾಡಲಾಗಿದೆ. ಪ್ರತಿ ತಿಂಗಳು  ಸಂಬಳ ಎಣಿಸುವ ಮಂದಿಗೆ ಪ್ರಯಾಣ ಮತ್ತು ವೈದ್ಯಕೀಯ ವೆಚ್ಚಗಳ ಮೇಲೆ 40,000 ರೂ. ತೆರಿಗೆ ವಿನಾಯಿತಿ ಸ್ಟ್ಯಾಂಡರ್ಡ್‌ ಡಿಡಕ್ಷನ್‌ ರೂಪದಲ್ಲಿ ಸಿಗಲಿದೆ. 2006-07ನೇ ಸಾಲಿನಿಂದ ಅದು ನಿಂತು ಹೋಗಿತ್ತು. ಈ ಒಂದು ಅಂಶ ಹೊರತುಪಡಿಸಿದರೆ ವೈಯಕ್ತಿಕ ಆದಾಯ ಕರ ಪಾವತಿದಾರರ ತೆರಿಗೆ ಪದ್ಧತಿಯಲ್ಲಿ ಯಾವ ಬದಲಾವಣೆಯೂ ಆಗಿಲ್ಲ. ಕಳೆದ ಮೂರು ವರ್ಷಗಳಲ್ಲಿ ಬಹಳಷ್ಟು ಬದಲಾವಣೆಗಳನ್ನು ಮಾಡಿರುವುದರಿಂದ ಈ ಸಲ ಯಥಾಸ್ಥಿತಿ ಉಳಿಸಿಕೊಳ್ಳಲಾಗಿದೆ.


ಹಾಗೆಂದು ಇದು ಭಾರೀ ಸಂಭ್ರಮಿಸುವ ವಿಚಾರವೂ ಅಲ್ಲ. ಪ್ರಸ್ತುತ ಪ್ರಯಾಣ  ಮತ್ತು ವೈದ್ಯಕೀಯ ಭತ್ತೆ ಇರುವವರಿಗೆ ಕರ ವಿನಾಯಿತಿ ಸಿಗುತ್ತಿದೆ. ತಿಂಗಳಿಗೆ 1,600 ರೂ.ಯಂತೆ ಪ್ರಯಾಣ ಭತ್ತೆ ಹಾಗೂ ವರ್ಷಕ್ಕೆ 15,000 ರೂ. ವೈದ್ಯಕೀಯ ವೆಚ್ಚವನ್ನು ತೋರಿಸಿ ವಿನಾಯಿತಿ ಪಡೆದುಕೊಳ್ಳಬಹುದಿತ್ತು. ಇದು ಒಟ್ಟು 34,200 ರೂ. ಆಗುತ್ತದೆ. ಜನರಿಗೆ ಹೆಚ್ಚುವರಿ ಲಾಭವಾಗಿರುವುದು 5800 ರೂ. ಮಾತ್ರ. ಆದರೆ ಈಗ ಸ್ಟ್ಯಾಂಡರ್ಡ್‌ ಡಿಡಕ್ಷನ್‌ ಮಾಡಿರುವುದರಿಂದ ವೈದ್ಯಕೀಯ ಬಿಲ್‌ಗ‌ಳನ್ನೆಲ್ಲ ಸಂಗ್ರಹಿಸಿಟ್ಟುಕೊಂಡು ತೆರಿಗೆ ರಿಟರ್ನ್ಸ್ ಸಲ್ಲಿಸುವ ವೇಳೆ ತೋರಿಸುವ ತಲೆಬಿಸಿ ಇಲ್ಲ. ವೇತನದಾರರೆಲ್ಲ ಈ ವಿನಾಯಿತಿ ಪಡೆದುಕೊಳ್ಳಬಹುದು. ಬಹುತೇಕ ಮಧ್ಯಮ ಮತ್ತು ಮೇಲ್ಮಧ್ಯಮ ವರ್ಗದ 2.5 ಕೋಟಿ ವೇತನದಾರರಿಗೆ ಪ್ರಯೋಜನವಾಗುವ ಕೊಡುಗೆಯಿದು. ಇದರಿಂದ ಕೇಂದ್ರ ಸರಕಾರಕ್ಕೆ 8 ಸಾವಿರ ಕೋಟಿ ರೂ. ಆದಾಯ ಕಡಿಮೆಯಾಗಲಿದೆ.


ವೇತನದಾರರಿಂದಲೇ ಹೆಚ್ಚು ತೆರಿಗೆ 

2016-17ನೇ ಸಾಲಿನಲ್ಲಿ 1.89 ಕೋಟಿ ವೇತನದಾರರು ಒಟ್ಟು 1.44 ಲಕ್ಷ ಕೋಟಿ ರೂ. ತೆರಿಗೆ ಪಾವತಿಸಿದ್ದಾರೆ. ಅಂದರೆ ಸರಾಸರಿಯಾಗಿ ಒಬ್ಬ ವೇತನದಾರ 76,306 ರೂ. ಆದಾಯ ತೆರಿಗೆ ಪಾವತಿಸಿದಂತಾಯಿತು. ಇದೇ ವೇಳೆ ವ್ಯಾಪಾರ ವಹಿವಾಟು ಮಾಡುವ ಉದ್ಯಮಿಗಳು ಪಾವತಿಸಿರುವ ತೆರಿಗೆ ಬರೀ 48,000 ಕೋಟಿ ರೂ.ಒಟ್ಟಾರೆ 1.88 ಕೋಟಿ ಉದ್ಯಮಿಗಳು ಆದಾಯ ತೆರಿಗೆ ಪಾವತಿಸಿದ್ದಾರೆ. ಅಂದರೆ ಪ್ರತಿ ಉದ್ಯಮಿ ಕೇವಲ 25,753 ರೂ. ತೆರಿಗೆ ಪಾವತಿಸಿದಂತಾಯಿತು. 


ಹಿರಿಯರಿಗೆ ವಿನಾಯಿತಿ

ಅಂಚೆ ಕಚೇರಿ ಹಾಗೂ ಬ್ಯಾಂಕ್‌ಗಳಲ್ಲಿ  ಹಿರಿಯ ನಾಗರಿಕರ ಠೇವಣಿ ಮೇಲೆ ಸಿಗುವ ಬಡ್ಡಿ ದರಕ್ಕೆ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 10,000ದಿಂದ 50,000 ರೂ.ವರೆಗೆ ಏರಿಸಲಾಗಿದೆ. ಇವರಿಗೆ ಟಿಡಿಎಸ್‌ ನಿಯಮಗಳ 194ಎ ಪರಿಚ್ಛೇದದ ಅಡಿಯಲ್ಲಿ ಬರುವ ತೆರಿಗೆಗಳಿಂದ ವಿನಾಯಿತಿ ನೀಡಲಾಗಿದೆ. ಆರೋಗ್ಯ ವಿಮೆಯ ಪ್ರೀಮಿಯಂಗಳ ಮೇಲಿನ 80ಡಿ ಮಾದರಿಯ ತೆರಿಗೆ ಮಿತಿಯನ್ನು 30ರಿಂದ 50 ಸಾವಿರ ರೂ.ವರೆಗೆ ಹೆಚ್ಚಿಸಲಾಗಿದೆ. 

ಮಾರಣಾಂತಿಕ ಕಾಯಿಲೆಗಳ ಚಿಕಿತ್ಸೆಗಾಗಿ ಮಾಡುವ ವೆಚ್ಚದ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯ ಮಿತಿಯನ್ನು 60,000 ರೂ.ದಿಂದ 1 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ. ವಿವಿಧ ಯೋಜನೆಯ ಸಿಗುವ ರಿಯಾಯಿತಿಯಿಂದಾಗಿ, ಹಿರಿಯ ನಾಗರಿಕರಿಗೆ ಒಟ್ಟಾರೆ 4 ಸಾವಿರ ಕೋಟಿ ರೂ. ಅನುಕೂಲ. 

ಪ್ರಧಾನ ಮಂತ್ರಿ ವಾಸ ವಂದನ ಯೋಜನೆಯನ್ನು 2020ರ ಮಾರ್ಚ್‌ವರೆಗೆ ಮುಂದುವರಿಸಲು ನಿರ್ಧಾರ. ಹಿರಿಯ ನಾಗರಿಕರ ಹೂಡಿಕೆ ಮಿತಿಯನ್ನು ಈಗಿರುವ 7.5 ಲಕ್ಷ ರೂ.ಗಳಿಂದ 15 ಲಕ್ಷ ರೂ.ವರೆಗೆ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ.


ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.