ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ
Team Udayavani, Feb 2, 2018, 11:18 AM IST
ಮಹದೇವಪುರ: ಇತ್ತೀಚೆಗಷ್ಟೇ ಸುಮಾರು 27 ಗಂಟೆ ಬೆಂಕಿ ಹೊತ್ತಿ ಉರಿದ ಬೆಳ್ಳಂದೂರು ಕೆರೆ ಪ್ರದೇಶದಲ್ಲಿ ಗುರುವಾರ ಸಂಜೆ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಈಜಿಪುರ ಕಡೆಗಿನ ಕಾಲುವೆಯು ಬೆಳಂದೂರು ಕೆರೆ ಸೇರುವ ಕಡೆಯ ಹುಲ್ಲುಗಾವಲಿನಲ್ಲಿ ಸಂಜೆ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿತ್ತು ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಇತ್ತೀಚೆಗಷ್ಟೇ ಕೆರೆಯ ನಾಲ್ಕು ಕಡೆ ಬೆಂಕಿ ಕಾಣಿಸಿಕೊಂಡಿತ್ತು. ಸತತ 27 ಗಂಟೆ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿತ್ತು.
ಕೆರೆಯಲ್ಲಿ ಪದೇ ಪದೇ ಬೆಂಕಿ ಅನಾಹುತ ಸಂಭವಿಸುತ್ತಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವು ಸಂಬಂಧಪಟ್ಟ ಇಲಾಖೆಗಳನ್ನು ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಕೆರೆ ಸುತ್ತ ತಂತಿ ಬೇಲಿ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.
ಕೆರೆಯಲ್ಲಿನ ನೀರನ್ನು ಶೋಧಿಸಿ ವರದಿ ಪಡೆದಿರುವ ಸರ್ಕಾರ ಬೆಂಕಿ ಹತ್ತಿಕೊಳ್ಳುವಷ್ಟು ಮಿಥೇನ್ ಪ್ರಮಾಣ ನೀರಿನಲ್ಲಿ ಇಲ್ಲ ಎಂದು ಹೇಳಿತ್ತು. ಆದರೆ ಇದೀಗ ಕೆರೆಯಲ್ಲಿನ ಹಸಿ ಹುಲ್ಲಿನಲ್ಲೇ ಪದೇ ಪದೇ ಬೆಂಕಿ ಕಾಣಿಸಿಕೊಳ್ಳುತ್ತಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಪರಿಸರವಾದಿ ಮಂಜುನಾಥ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.