ಹಿಂದೂ ಕಾರ್ಯಕರ್ತನ ಹತ್ಯೆ ದುರಂತ: ಆರ್.ಅಶೋಕ್
Team Udayavani, Feb 2, 2018, 11:18 AM IST
ಬೆಂಗಳೂರು: ಗೃಹ ಸಚಿವರ ಜಿಲ್ಲೆಯಲ್ಲೇ ಮತ್ತೂಂದು ಹಿಂದೂ ಕಾರ್ಯಕರ್ತನ ಹೆಣ ಬಿದ್ದಿರುವುದು ದುರಂತ. ಇದರಿಂದ ರಾಜಧಾನಿ ಬೆಂಗಳೂರು ಸುರಕ್ಷಿತವಲ್ಲ ಎಂಬುದು ಮತ್ತೂಮ್ಮೆ ಸಾಬೀತಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಧಾನಿಯಲ್ಲೇ ಮತ್ತೂಬ್ಬ ಹಿಂದೂ ಕಾರ್ಯಕರ್ತರ ಹೆಣ ಬಿದ್ದಿರುವುದು ದುರಂತ. ಅದೂ ಗೃಹ ಸಚಿವರ ಜಿಲ್ಲೆಯಲ್ಲಿ ಹಾಡ ಹಗಲೇ ಹೆಣ ಬೀಳುತ್ತಿದ್ದರೂ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹತ್ಯೆಗೊಳಗಾದ ಸಂತೋಷ್ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ನೇತೃತ್ವದಲ್ಲಿ ಬಿಜೆಪಿ ನಿಯೋಗ ಗೃಹ ಸಚಿವ ರಾಮಲಿಂಗಾ ರೆಡ್ಡಿ ಭೇಟಿಮಾಡಿ ಮನವಿ ಸಲ್ಲಿಸಲಿದೆ ಎಂದು ಹೇಳಿದರು.
ಇಂದು ಬಿಜೆಪಿ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ಖಂಡಿಸಿ ಪಕ್ಷದ ಬೆಂಗಳೂರು ಮಹಾನಗರ ಮತ್ತು ನಗರ ಜಿಲ್ಲೆ ವತಿಯಿಂದ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಶೇಷಾದ್ರಿ ರಸ್ತೆಯ ಮೌರ್ಯ ಹೋಟೆಲ್ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.