ಕೊಲೆ ಖಂಡಿಸಿ ಔರಾದ ಬಂದ್‌


Team Udayavani, Feb 2, 2018, 12:46 PM IST

bid-4.jpg

ಔರಾದ: ಭಾಲ್ಕಿ ತಾಲೂಕಿನ ಕೋಸಂ ಗ್ರಾಮದ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಖಂಡಿಸಿ ಲಿಂಗಾಯತ ಸಮಾಜ ಯುವ ಸಂಘ ಹಾಗೂ ಹಿಂದೂಪರ ಸಂಘಟನೆಗಳು ಗುರುವಾರ ಕರೆ ನೀಡಿದ್ದ ಔರಾದ ಬಂದ್‌ ಸಂಪೂರ್ಣ ಯಶಸ್ವಿಯಾಗಿದೆ.

ಬೆಳಗ್ಗೆಯಿಂದ ಸಂಜೆ ವರೆಗೆ ಜನಜೀವನ ಬಹುತೇಕ ಸ್ತಬ್ಧವಾಗಿತ್ತು. ಶಾಲೆ-ಕಾಲೇಜು, ವ್ಯಾಪಾರ ಮಳಿಗೆಗಳನ್ನು ಸ್ವಯಂ ಪ್ರರಿತವಾಗಿ ಬಂದ ಮಾಡಲಾಗಿತ್ತು. ಖಾಸಗಿ ಶಾಲಾ ಕಾಲೇಜುಗಳಿಗೂ ರಜೆ ನೀಡಲಾಗಿತ್ತು. ಸಾರಿಗೆ ಸಂಸ್ಥೆ ಬಸ್‌ ಹಾಗೂ ಖಾಸಗಿ ವಾಹನಗಳ ಸಂಚಾರವೂ ಇಲ್ಲದ್ದರಿಂದ ಪ್ರಯಾಣಿಕರು ಕೆಲ ಕಾಲ ಪರದಾಡಿದರು.

ಲಿಂಗಾಯತ ಯುವ ಸಂಘ, ಭಜರಂಗ ದಳ, ಶ್ರೀರಾಮ ಸೇನೆ, ಕರ್ನಾಟಕ ರಕ್ಷಣಾ ವೇದಿಕೆ, ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌, ದಲಿತ ಸಂಘರ್ಷ ಸಮಿತಿ ಸೇರಿದಂತೆ 25ಕ್ಕೂ ಹೆಚ್ಚು ಸಂಘಟನೆಯ ಸದಸ್ಯರು, ಶಾಸಕ ಪ್ರಭು ಚವ್ಹಾಣ, ಬಿಜೆಪಿ ಮುಖಂಡರು ಹಾಗೂ ಸಾವಿರಾರು ಜನರು ಕನ್ನಡಾಂಬೆಯ ವೃತ್ತದ ಬಳಿ ಸೇರಿ ಪ್ರತಿಭಟನಾ ರ್ಯಾಲಿ ಮೂಲಕ ಬಸವೇಶ್ವರ ವೃತ್ತಕ್ಕೆ ತೆರಳಿದರು. ಬಳಿಕ ಗೃಹ ಸಚಿವರಿಗೆ ಬರೆದ ಮನವಿಯನ್ನು ತಹಶೀಲ್ದಾರ ಎಂ.ಚಂದ್ರಶೇಖರ ಅವರಿಗೆ ಸಲ್ಲಿಸಿದರು.

ಈ ವೇಳೆ ಶಾಸಕ ಪ್ರಭು ಚವ್ಹಾಣ, ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆ ನಡೆಸಬೇಕು. ಸಿಎಂ ಸಿದ್ದರಾಮಯ್ಯ ಅವರು ಮೂರು ದಿನಗಳಲ್ಲಿ ಮೃತ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ 30 ಲಕ್ಷ ರೂ. ಪರಿಹಾರ ನೀಡಬೇಕು ಎಂದರು. ಇಲ್ಲವಾದಲ್ಲಿ ತಾವು ಮೃತ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ವೈಯಕ್ತಿಕವಾಗಿ ಕೈಲಾದಷ್ಟು ಸಹಾಯ ಮಾಡಲಾಗುವುದು ಎಂದರು. ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌ ಪ್ರಮುಖ ಹಾವಪ್ಪ ದ್ಯಾಡೆ, ಇಂಥ ಘಟನೆಗಳನ್ನು ಅಳಿಸಿ ಹಾಕಲು ಸರ್ಕಾರ ವಿಶೇಷ ನ್ಯಾಯಾಲಯ ಸ್ಥಾಪಿಸಿ ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೇ ಕಠಿಣ ಶಿಕ್ಷೆ ನೀಡಬೇಕೆಂದು ಹೇಳಿದರು. ಬಸವರಾಜ ಹಳ್ಳೆ ಮಾತನಾಡಿದರು.

ಪೊಲೀಸ್‌ ಬಂದೋಬಸ್ತ್: ಔರಾದ ಬಂದ್‌ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ದೇವರಾಜ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು, ಭಾಲ್ಕಿ ಡಿವೈಎಸ್‌ಪಿ ವೆಂಕನಗೌಡ, ಸಿಪಿಐ ರಮೇಶಕುಮಾರ ಸೇರಿದಂತೆ 200 ಪೊಲೀಸ್‌ ಸಿಬ್ಬಂದಿ ಬಂದೋಬಸ್ತ್ನಲ್ಲಿ ತೊಡಗಿದ್ದರು. 

ಲಿಂಗಾಯತ ಸಮಾಜದ ಆನಂದ ದ್ಯಾಡೆ, ಅನೀಲ ಹೇಡೆ, ಸುದೀಪ, ಮನೋಹರ ಕಾಡೋಡೆ, ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌ನ ಅಶೋಕ ಶೆಂಬೆಳ್ಳಿ, ಅನೀಲ ಮೇತ್ರೆ, ಅಶೋಕ ಅಲ್ಮಾಜೆ, ಜಿಪಂ ಮಾಜಿ ಸದಸ್ಯ ಕಾಶಿನಾಥ ಜಾಧವ, ದೀಪಕ ಪಾಟೀಲ, ಸತೀಶ ಪಾಟೀಲ, ಸಚೀನ ರಾಠೊಡ, ವೀರೇಂದ್ರ ರಾಜಾಪೂರೆ, ಅರಹಂತ, ಶರಣಬಸವ ಸಾವಳೆ, ಬಂಡೆಪ್ಪ ಕಂಟೆ, ಸಂಗಮೇಶ ಪಾಟೀಲ, ಶಿವರಾಜ ಅಲ್ಮಾಜೆ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Donald-Trumph

US; ನೀಲಿತಾರೆ ಹಣ ಪ್ರಕರಣ: ಟ್ರಂಪ್‌ ಬೇಷರತ್‌ ರಿಲೀಸ್‌

Supreme Court

Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್‌

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Satish Jarkiholi

Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Donald-Trumph

US; ನೀಲಿತಾರೆ ಹಣ ಪ್ರಕರಣ: ಟ್ರಂಪ್‌ ಬೇಷರತ್‌ ರಿಲೀಸ್‌

Supreme Court

Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್‌

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.