ಗ್ರಾಮೀಣ ಭಾಗದಲ್ಲಿ ಸಮುದಾಯ ಭವನ
Team Udayavani, Feb 2, 2018, 5:24 PM IST
ರಾಯಚೂರು: ಮಡಿವಾಳ ಸಮಾಜದವವರು ಇಷ್ಟೊಂದು ಸಂಖ್ಯೆಯಲ್ಲಿ ಸೇರಿ ಜಯಂತ್ಯುತ್ಸವ ಆಚರಿಸುವುದು ಶ್ಲಾಘನೀಯ. ಮಡಿವಾಳ ಸಮಾಜಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ಭವನ ನಿರ್ಮಿಸುವುದಾಗಿ ಶಾಸಕ ತಿಪ್ಪರಾಜ ಹವಾಲ್ದಾರ್ ಭರವಸೆ ನೀಡಿದರು.
ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗುರುವಾರ ನಗರದ ರಂಗಮಂದಿರದಲ್ಲಿ –ಆಯೋಜಿಸಿದ್ದ ಶರಣ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದಿಂದ ಜಯಂತಿ ಆಚರಿಸುತ್ತಿರುವುದು ಉತ್ತಮ ಕಾರ್ಯ. ಸಮಾಜಕ್ಕೆ ಬೇಕಾದ ನೆರವು ನೀಡಲು ಸಿದ್ಧ ಎಂದರು.
ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಮಾತನಾಡಿ, ಮಡಿವಾಳ ಮಾಚಿದೇವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ನೇರ ನಿಷ್ಠುರ ವಚನಗಳನ್ನು ರಚಿಸಿ ಸಮಾಜ ತಿದ್ದುವ ಕೆಲಸ ಮಾಡಿದರು. ಯಾವುದೇ ಸಮಾಜದ ಮಹಾನ್ ಪುರುಷರ ಜಯಂತಿ ಆಚರಣೆಯಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಮಹಿಳೆಯರು ಭಾಗವಹಿಸಿರಲಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 33 ಗಣ್ಯರ ಜಯಂತಿ ಆಚರಿಸುತ್ತಿದೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಶ್ರೀ ಮಡಿವಾಳ ಮಾಚಿದೇವರ ಸಮುದಾಯ ಭವನಕ್ಕೆ ಈಗಾಗಲೇ 46 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಒಂದು ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. ಇನ್ನೂ ಹೆಚ್ಚುವರಿಯಾಗಿ ತಾವು 10 ಲಕ್ಷ ರೂ. ಅನುದಾನ ನೀಡುವುದಾಗಿ ಹೇಳಿದರು.
ಸಾಹಿತಿ ವೀರ ಹನುಮಾನ್ ಅವರು ಮಾಚಿದೇವರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮಡಿವಾಳ ಸಮಾಜದ ಪತ್ರಕರ್ತ ಶಿವಪ್ಪ ಮಡಿವಾಳರನ್ನು ಸಮಾಜದಿಂದ ಸನ್ಮಾನಿಸಲಾಯಿತು.
ಎಪಿಎಂಸಿ ಅಧ್ಯಕ್ಷ ಅಮರೇಗೌಡ ಹಂಚಿನಾಳ, ಆರ್ ಡಿಎ ಅಧ್ಯಕ್ಷ ಅಬ್ದುಲ್ ಕರೀಂ, ಮಡಿವಾಳ ಸಮಾಜ ಅಧ್ಯಕ್ಷ ಜಿ.ಸುರೇಶ, ಹುಸೇನಪ್ಪ, ನಗರಸಭೆ ಸದಸ್ಯರಾದ ನರಸಪ್ಪ ಯಕ್ಲಾಸಪುರ, ಮಹಾಲಿಂಗ ರಾಂಪುರ, ಆಂಜನೇಯ ಯಕ್ಲಾಸಪುರ, ವಿನಯಕುಮಾರ, ರಾಮು ಗಿಲ್ಲೇರಿ, ವೀರೇಶ, ನರಸಪ್ಪ ಜೇಗರಕಲ್ ಇತರರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ನೀಲಮ್ಮ
ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.