ತಜ್ಞರ ಸಮಿತಿಗೆ ವಿವರಣೆ ನಿರಾಕರಿಸಿದ ವೀರಶೈವಮಹಾಸಭಾ
Team Udayavani, Feb 3, 2018, 9:21 AM IST
ಬೆಂಗಳೂರು: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ರಚಿಸಿರುವ ತಜ್ಞರ ಸಮಿತಿ ಮುಂದೆ ವಾದ ಮಂಡಿಸಲು ವೀರಶೈವ ಮಹಾಸಭೆ ನಿರಾಕರಿಸಿದೆ. ಅಲ್ಪ ಸಂಖ್ಯಾತ ಆಯೋಗದ ಮೂಲಕ ರಾಜ್ಯ ಸರ್ಕಾರ ನ್ಯಾ. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿ ಶುಕ್ರವಾರ ಪ್ರತ್ಯೇಕ ಧರ್ಮ ಮಾನ್ಯತೆ ವಿಚಾರದಲ್ಲಿ ಸಲ್ಲಿಕೆಯಾಗಿರುವ ಮನವಿಗಳ ಬಗ್ಗೆ ಮೌಖೀಕ ವಿವರಣೆ ನೀಡುವಂತೆ ವೀರಶೈವ ಮಹಾಸಭೆಗೆ ಆಹ್ವಾನ ನೀಡಿದ್ದರು.
ಆದರೆ, ವೀರಶೈವ ಮಹಾಸಭೆಯ ಕಾರ್ಯದರ್ಶಿ ರೇಣುಕ ಪ್ರಸನ್ನ ಈ ಕುರಿತು ಸಮಿತಿಗೆ ಪತ್ರ ಬರೆದು, ವೀರಶೈವ ಮಹಾಸಭೆ ಯಾವುದೇ ದಾಖಲೆಗಳನ್ನು ಅಲ್ಪ ಸಂಖ್ಯಾತ ಆಯೋಗಕ್ಕಾಗಲಿ ಅಥವಾ ಆಯೋಗ ರಚಿಸಿರುವ ಸಮಿತಿಗಾಗಲಿ ನೀಡಲ್ಲ ಎಂದು ಹೇಳಿದ್ದಾರೆ. ಜತೆಗೆ ಪತ್ರದ ಮೂಲಕ ತಜ್ಞರ ಸಮಿತಿಯ ಅಸ್ತಿತ್ವವನ್ನೇ ಪ್ರಶ್ನಿಸಿರುವ ಅವರು, ಧರ್ಮದ ಮಾನ್ಯತೆ ಇಲ್ಲದಿರುವ ಧರ್ಮಗಳಿಗೆ ಅಲ್ಪ ಸಂಖ್ಯಾತರು ಅಥವಾ ಬಹು ಸಂಖ್ಯಾತರು ಎಂದು ತೀರ್ಮಾನಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಸಮಿತಿಯಲ್ಲಿರುವ ಸದಸ್ಯರ ಜ್ಞಾನದ ಬಗ್ಗೆ ಜಿಜ್ಞಾಸೆ ಇದೆ. ವೀರಶೈವ ಧರ್ಮದ ಹೆಸರಿನಲ್ಲಿ ರಾಜ್ಯದಲ್ಲಿ ಒಂದೂವರೆ ಕೋಟಿ
ವೀರಶೈವ ಲಿಂಗಾಯತ ಜನಸಂಖ್ಯೆ ಇದೆ. ಅಂತಹ ಸಮಾಜವನ್ನು ಒಡೆಯಲು ಹೊರಟಿರುವುದು ಸರ್ಕಾರ ಹಾಗೂ ಸರ್ಕಾರ ರಚಿಸಿರುವ ಸಮಿತಿಗೆ ಗೌರವ ತರುವುದಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ತಜ್ಞರ ಸಮಿತಿ ಮುಂದೆ ಶುಕ್ರವಾರ ವೀರಶೈವ ಲಿಂಗಾಯತ ಎರಡೂ ಒಂದೇ ಎಂದು ಸುಮಾರು 15 ಅರ್ಜಿಗಳು ಸಲ್ಲಿಕೆಯಾಗಿವೆ. ಸಮಿತಿ ಸದಸ್ಯರು ಶನಿವಾರವೂ ಸಾರ್ವಜನಿಕರಿಂದ ಮೌಖೀಕ ವಿವರಣೆ ಪಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.