ವಿದ್ಯುತ್ ದರ ಪರಿಷ್ಕರಣೆ ಪ್ರಸ್ತಾವ 19ರಿಂದ ಕೆಇಆರ್ಸಿ ವಿಚಾರಣೆ
Team Udayavani, Feb 3, 2018, 11:05 AM IST
ಬೆಂಗಳೂರು: ಎಸ್ಕಾಂಗಳು ಪ್ರತಿ ಯೂನಿಟ್ಗೆ ಗರಿಷ್ಠ 1.65 ರೂ.ವರೆಗೆ ನಾನಾ ಹಂತದ ವಿದ್ಯುತ್ ದರ ಏರಿಸುವ ಸಂಬಂಧ ಸಲ್ಲಿಸಿರುವ ಪ್ರಸ್ತಾವಗಳ ಕುರಿತು ಫೆ.19ರಿಂದ ವಿಚಾರಣೆ ಆರಂಭವಾಗಲಿದೆ. ಬೆಸ್ಕಾಂ, ಕೆಪಿಟಿಸಿಎಲ್ ಪ್ರಸ್ತಾವ ಕುರಿತಂತೆ ಬೆಂಗಳೂರಿನಲ್ಲಿ ವಿಚಾರಣೆ ನಡೆಯಲಿದೆ. ನಂತರ ಆಯಾ ಎಸ್ಕಾಂ ವ್ಯಾಪ್ತಿಯಲ್ಲೇ ವಿಚಾರಣೆ ನಡೆಸಲಾಗುವುದು. ಮಾ. 9ಕ್ಕೆ ಕಲಬುರಗಿಯಲ್ಲಿ ಜೆಸ್ಕಾಂ ದರ ಪರಿಷ್ಕರಣೆ ಪ್ರಸ್ತಾವ ಕುರಿತಂತೆ ವಿಚಾರಣೆ ನಡೆಯಲಿದೆ ಎಂದು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ ತಿಳಿಸಿದ್ದಾರೆ.
ವಸಂತನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಕೆಇಆರ್ಸಿ ಕಚೇರಿ ಉದ್ಘಾಟನೆ ಬಳಿಕ ಪ್ರತಿಕ್ರಿಯಿಸಿದ ಅವರು, ದರ ಹೆಚ್ಚಳಕ್ಕೆ ಸಲ್ಲಿಸಿರುವ ಪ್ರಸ್ತಾವಕ್ಕೆ ಎಸ್ಕಾಂಗಳು ನೀಡುವ ಸಮರ್ಥನೀಯ ಅಂಶಗಳು, ಸಾರ್ವಜನಿಕರ ಅಭಿಪ್ರಾಯದ ಆಧಾರದ ಮೇಲೆ ಆಯೋಗ ತೀರ್ಮಾನ ಕೈಗೊಳ್ಳಲಿದೆ ಎಂದರು.
ಏನಿತ್ತು ಪ್ರಸ್ತಾವನೆ?
ಬೆಸ್ಕಾಂ ಪ್ರತಿ ಯೂನಿಟ್ಗೆ 1.45 ರೂ., ಸೆಸ್ಕ್ 1.65 ರೂ., ಮೆಸ್ಕಾಂ 1.08 ರೂ., ಜೆಸ್ಕಾಂ 1.36 ರೂ. ಹಾಗೂ ಹೆಸ್ಕಾಂ
1.23 ರೂ. ದರ ಹೆಚ್ಚಳಕ್ಕೆ ಕಳೆದ ವರ್ಷ ನವೆಂಬರ್ ನಲ್ಲಿ ಪ್ರಸ್ತಾವ ಸಲ್ಲಿಸಿವೆ. ಪ್ರತಿ ವರ್ಷದಂತೆ ಈ ಬಾರಿಯು ಎಲ್ಲ
ಎಸ್ಕಾಂಗಳು ದರ ಪರಿಷ್ಕರಣೆಗೆ ಪ್ರಸ್ತಾವ ಸಲ್ಲಿಸಿವೆ. ಜತೆಗೆ ಸಾರ್ವಜನಿಕ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು ಎಂದು ಎಂ.ಕೆ.
ಶಂಕರಲಿಂಗೇಗೌಡ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.