ನಕ್ಸಲರ ಬಂದೂಕಲ್ಲಿ ಗೂಡು ಕಟ್ಟುತ್ತೇವೆ


Team Udayavani, Feb 3, 2018, 11:25 AM IST

30-28.jpg

ಧಾರವಾಡ: ಬಲಪಂಥೀಯ ರಾಷ್ಟ್ರೀಯವಾದಿಗಳ ಹತ್ಯೆಗಾಗಿ ಕೆಂಪು ಉಗ್ರರು ಹೊರ ತೆಗೆದ ಬಂದೂಕಿನ ನಳಿಕೆಯಲ್ಲಿ ಭಾರತಮಾತೆಯ ಗುಬ್ಬಿ ಗೂಡುಗಳನ್ನು ಕಟ್ಟುವ ಮೂಲಕ ಎಬಿವಿಪಿ ಅವರಿಗೆ ತಕ್ಕ ಉತ್ತರ ನೀಡಲಿದೆ ಎಂದು ಎಬಿವಿಪಿ ರಾಷ್ಟ್ರೀಯ ಉಪಾಧ್ಯಕ್ಷ ಡಾ|ಬಿ.ವಿ. ವಸಂತಕುಮಾರ್‌ ಹೇಳಿದರು.

ನಗರದಲ್ಲಿ ಶುಕ್ರವಾರ ಆರಂಭಗೊಂಡ ಮೂರು ದಿನಗಳ ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌ನ 37ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಎಬಿವಿಪಿ ದೇಶವನ್ನು ಕಟ್ಟುವುದಕ್ಕಾಗಿ ಬೆಳೆದು ಬಂದ
ಸಂಘಟನೆ. ಇದು ಕೇವಲ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಮಾತ್ರ ಹೋರಾಟ ಮಾಡುತ್ತಿಲ್ಲ. ಬದಲಿಗೆ ಈ ದೇಶದ ಅಭಿವೃದ್ಧಿಗೆ, ಯುವ ಶಕ್ತಿಯನ್ನು ಜಾಗೃತಗೊಳಿಸಲು ಕೂಡ ಕೆಲಸ ಮಾಡಿಕೊಂಡು ಬಂದಿದೆ. ಆದರೆ ಕೆಲವರು ಈ ಸಂಘಟನೆ ಹೆಸರಿಗೆ ವಿನಾಕಾರಣ ಮಸಿ ಬಳಿಯುತ್ತಿದ್ದಾರೆ ಎಂದು ಆರೋಪಿಸಿದರು. 

ಅದರಲ್ಲೂ ಎಡಪಂಥೀಯರು ಎಬಿವಿಪಿಯನ್ನೇ ಗುರಿಯಾಗಿಸಿ ಆರೋಪಗಳನ್ನು ಮಾಡುತ್ತಿದ್ದಾರೆ. ಅಷ್ಟೇಯಲ್ಲ, ಕೇರಳ, ಕರ್ನಾಟಕ ಸೇರಿ ಅನೇಕ ಕಡೆಗಳಲ್ಲಿ ಈ ಸಂಘಟನೆಯ ಕಾರ್ಯಕರ್ತರನ್ನು ಕೊಲೆ ಕೂಡ ಮಾಡುತ್ತಿದ್ದಾರೆ. ಆದರೆ ಎಬಿವಿಪಿ ಇದಕ್ಕೆ ಅಂಜುವುದಿಲ್ಲ. ಕೆಂಪು ಉಗ್ರರು ಹಿಡಿದಿರುವ ಬಂದೂಕಿನ ನಳಿಕೆಯಲ್ಲಿ ಭಾರತಮಾತೆ ಎಂಬ ಪುಟ್ಟ ಗೂಡುಗಳನ್ನು ಕಟ್ಟಿ ಅವರಿಗೆ
ದಿಟ್ಟ ಉತ್ತರವನ್ನು ಕೊಡುತ್ತೇವೆ ಎಂದು ಹೇಳಿದರು. ಕರ್ನಾಟಕದಲ್ಲಿ ಜಾತಿ-ಧರ್ಮದ ಆಧಾರದ ಮೇಲೆ ಸಮಾಜವನ್ನು ಒಡೆದು ಆಳುವ ನೀತಿಯನ್ನು ಇಲ್ಲಿನ ಸರ್ಕಾರ ಮಾಡುತ್ತಿದೆ. ಆದರೆ ಇದು ಬಹಳ ದಿನ ನಡೆಯುವದಿಲ್ಲ. ಇದಕ್ಕೆ ಮುಂಬರುವ ದಿನಗಳಲ್ಲಿ ಎಬಿವಿಪಿ ಮತ್ತು ಸಂಘ ಪರಿವಾರ ತಕ್ಕ ಉತ್ತರ ನೀಡುತ್ತದೆ ಎಂದು ಹೇಳಿದರು.

ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಎಬಿವಿಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸುನೀಲ್‌ ಅಂಬೇಕರ್‌, ಕರ್ನಾಟಕ ಶತಮಾನಗಳಿಂದಲೂ ಸಾಹಿತ್ಯ, ಸಂಗೀತ, ಕಲೆ ಮತ್ತು ಸಂಸ್ಕೃತಿಯನ್ನು ಪಸರಿಸಿ ಹೆಸರು ಪಡೆದಿರುವ ನಾಡು. ಆದರೆ ಇಲ್ಲಿನ ವಿಚಾರವಾದಿಗಳು ಇದೀಗ ಹಿಂದೂಗಳನ್ನು ನಿಕೃಷ್ಟವಾಗಿ ಕಾಣುತ್ತಿದ್ದಾರೆ. ವಿನಾಕಾರಣ ಆರೋಪಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ. 
ಅಧಿಕಾರಕ್ಕಾಗಿ ಧರ್ಮವನ್ನು ಒಡೆದು ಆಳುವ ಪ್ರಯತ್ನಗಳು ಕರ್ನಾಟಕದಲ್ಲಿ ನಡೆಯುತ್ತಿವೆ. ಎಲ್ಲರೂ ಜಾಗೃತರಾಗಬೇಕು ಎಂದು ಸಲಹೆ ನೀಡಿದರು.

ಜೈಪುರ ಎಂಎನ್‌ಐಟಿ ನಿರ್ದೇಶಕ ಪ್ರೊ|ಉದಯಕುಮಾರ ಯರಗಟ್ಟಿ, ಎಬಿವಿಪಿ ರಾಜ್ಯಾಧ್ಯಕ್ಷ ಡಾ|ಅಲ್ಲಮಪ್ರಭು ಗುಡ್ಡ, ಪ್ರ. ಕಾರ್ಯದರ್ಶಿ ರಾಜೇಶ ಗುರಾಣಿ ಸೇರಿ ಪ್ರಾಂತೀಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಚ್ಚುಕಟ್ಟು ವ್ಯವಸ್ಥೆ ಎಬಿವಿಪಿ 37ನೇ ರಾಜ್ಯ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 1500ಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಕಲಾಭವನ ಮೈದಾನವನ್ನು
ಅಚ್ಚುಕಟ್ಟಾಗಿ ಶೃಂಗರಿಸಲಾಗಿದ್ದು, ಕಲಾಭವನದ ಎದುರಿಗೆ ಎಬಿವಿಪಿ ಧ್ವಜಾರೋಹಣ ಮಾಡಲಾಗಿದೆ. ಶಿಬಿರದಲ್ಲಿ ಭಾಗಿಯಾದ ವಿದ್ಯಾರ್ಥಿಗಳಿಗೆ ನಗರದ ವಿವಿಧೆಡೆ ವಸತಿ ವ್ಯವಸ್ಥೆ ಮಾಡಲಾಗಿದ್ದು, ಕಲಾಭವನದಲ್ಲಿಯೇ ಊಟ ಮತ್ತು ಉಪಾಹಾರ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನ ಹಿನ್ನೆಲೆಯಲ್ಲಿ ಕಲಾಭವನದ ಮೈದಾನದ ಸುತ್ತಲೂ ಬಟ್ಟೆಯ ಕವಾಟು ನಿರ್ಮಿಸಿ ಮೈದಾನಕ್ಕೆ ನೆಲಹಾಸು ಹಾಕಲಾಗಿದೆ.

ಟಾಪ್ ನ್ಯೂಸ್

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

Mangaluru: ಕರಾವಳಿ ಉತ್ಸವ; ಅರಣ್ಯ ಅನುಭವ!

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

10(1

Mangaluru: ನಗರದ 18 ಕಡೆಗಳಲ್ಲಿ ಪೇ ಪಾರ್ಕಿಂಗ್‌

9(1

Kundapura: ಟಿಟಿ ರೋಡ್‌ನ‌ಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.