ನಡ ನಾಮಫಲಕ ಕಡ್ನಾಯಕ್ಕೆ 15 ದಿನಗಳ ಗಡು
Team Udayavani, Feb 3, 2018, 11:30 AM IST
ಆಳಂದ: ಹೋಟೆಲ್, ಅಂಗಡಿ ಮತ್ತು ಮಳಿಗೆ ಸೇರಿದಂತೆ ಸಾರ್ವಜನಿಕ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳ ಕಟ್ಟಡಗಳಿಗೆ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಸಬೇಕು ಎಂದು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಜಂಟಿಯಾಗಿ ಜಾಗೃತಿ ಪ್ರತಿಭಟನೆ ಕೈಗೊಂಡು ತಾಲೂಕು ಆಡಳಿತವನ್ನು ಒತ್ತಾಯಿಸಿದರು.
ಕನ್ನಡ ನಾಡಿನಲ್ಲಿದ್ದು ಕನ್ನಡ ಫಲಕ ಹಾಕದೆ ಅನ್ಯಭಾಷೆಗಳ ಫಲಕ ಹಾಕುತ್ತಿರುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಕನ್ನಡಕ್ಕೆ ಮೊದಲಾದ್ಯತೆ ನೀಡದವರ ಅಂಗಡಿ ಮುಂಗಟ್ಟು, ಮಳಿಗೆಗಳ ಮೇಲೆ ಫಲಕ ಅಳವಡಿಸುವಂತೆ ಸೂಚಿಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು. ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಕನ್ನಡ ನಾಮಫಲಕ ಜಾಗೃತಿ ಘೋಷಣೆ ಕೂಗಿ 15 ದಿನಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಹಾಕದಿದ್ದಲ್ಲಿ ಕಪ್ಪು ಮಸಿ ಬಳಿಯಲಾಗುವುದು ಎಂದು ಎಚ್ಚರಿಸಿದರು.
ಜಾಥಾದಲ್ಲಿ ಕರ್ನಾಟಕ ನವ ನಿರ್ಮಾಣ ಸೇನೆ ಅಧ್ಯಕ್ಷ ರಮೇಶ ಜಗತಿ, ಕರವೇ (ಪ್ರವೀಣಶೆಟ್ಟಿ ಬಣ) ಅಧ್ಯಕ್ಷ ಕಿರಣ ಗುತ್ತೇದಾರ, ನಮ್ಮ ಕರುನಾಡು ವೇದಿಕೆ ಜಿಲ್ಲಾ ಅಧ್ಯಕ್ಷ ಗಂಗಾಧರ ಕುಂಬಾರ, ಕರವೇ (ನಾರಾಯಣಗೌಡ ಬಣ) ಅಧ್ಯಕ್ಷ ಲಕ್ಷ್ಮೀಕಾಂತ ಉದನೂರ, ನಮ್ಮ ಕರ್ನಾಟಕ ವೇದಿಕೆ ಅಧ್ಯಕ್ಷ ಶರಣು ಚಿಚಕೋಟಿ ನೇತೃತ್ವದಲ್ಲಿ ಪ್ರತಿಭಟನಾ ಜಾಥಾ ನಡೆಸಿದ ಕಾರ್ಯಕರ್ತರು ತಾಲೂಕು ಆಡಳಿತವು ಸಂಬಂಧಿತರಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿ ನಾಮಫಲಕ ಅಳವಡಿಸಬೇಕು ಎಂದು ತಹಶೀಲ್ದಾರ್ ಬಸವರಾಜ ಎಂ. ಬೆಣ್ಣೆಶಿರೂರ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್‌ರು, ಈ ಕುರಿತು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಬಳಿಕ ಜಾಗೃತಿ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು. ಕರವೇ ಉಪಾಧ್ಯಕ್ಷ ವೆಂಕಟೇಶ ರಾಠೊಡ, ಸದಾಶಿವ ಆಲೂರೆ ಹಾಗೂ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.