ಸ್ತ್ರೀಶಕ್ತಿ ಸಂಘ ಆಕ್ರೋಶ
Team Udayavani, Feb 3, 2018, 2:30 PM IST
ಕಡಬ: ಕುಟ್ರಾಪ್ಪಾಡಿ ಗ್ರಾಮದ ಹೊಸ್ಮಠದಲ್ಲಿ ಸ್ತ್ರೀಶಕ್ತಿ ಸಂಘದ ಸದಸ್ಯರ ಅಂಗಡಿ ಬೆಂಕಿಗಾಹುತಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಅಂಗಡಿಗೆ ಬೆಂಕಿ ಇಟ್ಟಿರುವ ಶಂಕೆಯಿಂದ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಕುಟ್ರಾಪ್ಪಾಡಿಯ ಸ್ತ್ರೀ ಶಕ್ತಿ ಸಂಘದ ಸದಸ್ಯರು ಪ್ರತಿಭಟನೆಗೆ ಮುಂದಾದ ಘಟನೆ ಶುಕ್ರವಾರ ಕಡಬದಲ್ಲಿ ಸಂಭವಿಸಿದೆ.
ಪೊಲೀಸ್ ವೈಫಲ್ಯ ಖಂಡಿಸಿ ಕಡಬ ಠಾಣೆಯ ಮುಂದೆ ಶುಕ್ರವಾರ ಬೆಳಗ್ಗೆ 10.30ಕ್ಕೆ ಸಂಘಟನೆಗಳ ನೆರವಿನೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಕುಟ್ರಾಪ್ಪಾಡಿ ಸ್ತ್ರೀಶಕ್ತಿ ಗೊಂಚಲು ಸಮಿತಿಯ ವತಿಯಿಂದ ಪ್ರಕಟಿಸಲಾಗಿತ್ತು. ದಲಿತಪರ ಹಾಗೂ ಮಹಿಳಾ ಸಂಘಟನೆಗಳ ಪ್ರಮುಖರು ಕಡಬಕ್ಕೆ ಆಗಮಿಸಿದ್ದರು.
ದೂರು ದಾಖಲು
ಕುಟ್ರಾಪ್ಪಾಡಿ ಶಾಲಾಭಿವೃದ್ಧಿ ಸಮಿತಿಯಲ್ಲಿದ್ದ ಸುಗುಣಾ ದೇವಯ್ಯ ಅವರು ಅದೇ ಶಾಲೆಯಲ್ಲಿ ಸಹ ಶಿಕ್ಷಕರಾಗಿದ್ದ ತೀರ್ಥೇಶ್ ಪಡೆದ್ದಾರ್ ವಿರುದ್ಧ ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು. ಈ ದ್ವೇಷದಿಂದ ತೀರ್ಥೇಶ್ ತಮ್ಮ ಅಂಗಡಿಗೆ ಬೆಂಕಿ ಹಚ್ಚಿರಬಹುದು ಎಂದು ಸುಗುಣಾ ಶಂಕೆ ವ್ಯಕ್ತಪಡಿಸಿ, ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯನ್ನು ತನಿಖೆಗೆ ಒಳಪಡಿಸಿ, ಹೇಳಿಕೆ ಪಡೆದುಕೊಂಡಿದ್ದರು. ಈಗ ಸ್ತ್ರೀಶಕ್ತಿ ಸಂಘಟವರು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಕೋಡಿಂಬಾಳ ನಿವಾಸಿ, ಶಿಕ್ಷಕ ತೀರ್ಥೇಶ್ ಅವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.