ಬಂಟ್ವಾಳ ಪುರಸಭೆ ನಗರೋತ್ಥಾನ, ಎಸ್ಸಿಪಿ, ಟಿಎಸ್ಪಿ ಯೋಜನೆ
Team Udayavani, Feb 4, 2018, 4:38 PM IST
ಬಂಟ್ವಾಳ: ಬಂಟ್ವಾಳ ಪುರಸಭೆಯ ನಗರೋತ್ಥಾನ, ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯ 2 ಕೋಟಿ ರೂ. ವೆಚ್ಚದ ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ. ಮೂಡ ಮತ್ತು ಪಾಣೆಮಂಗಳೂರಲ್ಲಿ 15 ವಿವಿಧ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಶಿಲಾನ್ಯಾಸ, ಅನುಷ್ಠಾನಿತ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದರು.
ಪುರಸಭಾ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶೇ. 7.25ರ ಯೋಜನೆಯಡಿ ಬಂಟ್ವಾಳ ಪುರಸಭಾ ವ್ಯಾಪ್ತಿಯ 10ನೇ ತರಗತಿಗಿಂತ ಮೇಲ್ಪಟ್ಟ ವಿವಿಧ ತರಗತಿಗಳಲ್ಲಿ ಕಲಿಯುತ್ತಿರುವ 280ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಿದರು.
ಬಿ. ಮೂಡ ಗ್ರಾಮದ ಕಲ್ಲಗುಡ್ಡೆ, ಪಲ್ಲಮಜಲು, ಪರ್ಲಿಯ, ಅಲೆತ್ತೂರು ರಸ್ತೆ ಅಭಿವೃದ್ಧಿಗೆ ಸಚಿವರು ಶಿಲಾನ್ಯಾಸ ನೆರವೇರಿಸಿದರು. ಪುರಸಭಾ ಅಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸ್ಥಾಯೀ ಸಮಿತಿ ಅಧ್ಯಕ್ಷ ವಾಸು ಪೂಜಾರಿ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಸದಸ್ಯರಾದ ಜಗದೀಶ ಕುಂದರ್, ವಸಂತಿ ಚಂದಪ್ಪ, ಯಾಸ್ಮೀನ್, ಮಹಮ್ಮದ್ ಶರೀಫ್, ಚಂಚಲಾಕ್ಷಿ, ಸಂಜೀವಿ, ಪ್ರಭಾ ಆರ್. ಸಾಲ್ಯಾನ್, ಜಸಿಂತಾ ಡಿ’ಸೋಜಾ, ಬಿ. ಮೋಹನ್, ಪ್ರವೀಣ್ ಬಿ., ಭಾಸ್ಕರ ಟೈಲರ್, ಲೋಕೇಶ್ ಪೂಜಾರಿ, ನೊರ್ಬರ್ಟ್ ರೊಡ್ರಿಗಸ್, ಅಬೂಬಕ್ಕರ್ ಸಿದ್ದಿಕ್, ಲೋಲಾಕ್ಷ ಶೆಟ್ಟಿ, ಪ್ರವೀಣ್ ಕಿಣಿ, ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ, ಜಿ.ಪಂ. ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ತಾ.ಪಂ. ಉಪಾಧ್ಯಕ್ಷ ಅಬ್ಟಾಸ್ ಅಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.