ಬೆಂಕಿ ಹಚ್ಚಲು ಶಾ, ಶಾಂತಿ ಕದಡಲು ಮೋದಿ ಬರ್ತಾರೆ
Team Udayavani, Feb 5, 2018, 6:25 AM IST
ರಾಯಚೂರು: ರಾಜ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಂಕಿ ಹಚ್ಚಲು ಬಂದರೆ, ಪ್ರಧಾನಿ ಮೋದಿ ಶಾಂತಿ ಕದಡಲು ಬರುತ್ತಾರೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಆರೋಪಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಆಗಮಿಸುವ ಅಮಿತ್ ಶಾ ರಾಜ್ಯದಲ್ಲಿ ಎಷ್ಟು ಹೋರಾಟಗಳಾಗಿವೆ. ಎಷ್ಟು ದಂಗೆ ಮಾಡಿಸಿದ್ದಾರೆಂದು ಬೆಂಕಿ ಹಚ್ಚುವ ಮಾತನಾಡುತ್ತಾರೆ. ಇನ್ನು ಭಾಷಣ ಮಾಡುವುದರಲ್ಲಿ ಪ್ರಧಾನಿ ನರೇಂದ್ರ ಮೋದಿ ನಿಸ್ಸೀಮರು. ಆದರೆ, ಅವರ ಭಾಷಣಗಳಿಂದ ಹೊಟ್ಟೆ ತುಂಬುವುದಿಲ್ಲ. ಅವರು ರಾಜ್ಯಕ್ಕೆ ಭೇಟಿ ನೀಡುವುದರಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ. ಬಿಜೆಪಿಯವರು ಹಿಂದುತ್ವದ ಹೆಸರಿನಲ್ಲಿ ಪಕ್ಷ ಸಂಘಟಿಸುತ್ತಿದ್ದಾರೆ. ಕೊಲೆಯಾದವರೆಲ್ಲ ಬಿಜೆಪಿ ಕಾರ್ಯಕರ್ತರಾಗುತ್ತಿದ್ದಾರೆ ಎಂದು ಟೀಕಿಸಿದರು.
ಬಿಜೆಪಿ ಯಾತ್ರೆ ಯಶಸ್ವಿಗೊಳಿಸಲು ಯಡಿಯೂರಪ್ಪನವರು ಹುಬ್ಬಳ್ಳಿಯಲ್ಲಿ ಮಹದಾಯಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದರು. ಆದರೆ, ಈ ವಿಚಾರದಲ್ಲಿ ಗೋವಾ ಸರ್ಕಾರ ಒಕ್ಕೂಟ ವ್ಯವಸ್ಥೆ ವಿರುದ್ಧ ನಡೆದುಕೊಂಡಿದೆ. ರಾಜ್ಯದ ಸಿಎಂ ಸಿದ್ದರಾಮಯ್ಯ ಪತ್ರ ಬರೆದರೆ ಅದಕ್ಕೆ ಗೋವಾ ಸರ್ಕಾರದ ನೀರಾವರಿ ಇಲಾಖೆ ಕಾರ್ಯದರ್ಶಿ ಉತ್ತರ ನೀಡದಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.