10% ಸರ್ಕಾರ ಆರೋಪ ಸಾಬೀತುಪಡಿಸಿ
Team Udayavani, Feb 5, 2018, 6:15 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಪ್ರಸ್ಥಾಪಿಸಿದ”ಹತ್ತು ಪರ್ಸೆಂಟ್ ಸರ್ಕಾರ’ ಆರೋಪಕ್ಕೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರು, ಯಾರು ಯಾರಿಗೆ ಮತ್ತು ಯಾವ ಯೋಜನೆಗೆ ಕಮೀಷನ್ ಕೊಟ್ಟಿದ್ದಾರೆ ಎಂಬುದನ್ನು ಪ್ರಧಾನಿಯವರು ಸಾಬೀತುಪಡಿಸಬೇಕು ಎಂದು ಸವಾಲು ಹಾಕಿದ್ದಾರೆ.
ಪ್ರತಿಯೊಂದು ಸರ್ಕಾರಿ ಕೆಲಸಕ್ಕೂ ಶೇ. 10ರಷ್ಟು ಕಮೀಷನ್ ನೀಡಬೇಕಿದೆ. ಇದು ಹತ್ತು ಪರ್ಸೆಂಟ್ ಸರ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿ ದೂರಿದ್ದಾರೆ. ಆದರೆ, ಈ ಕಮೀಷನ್ ತೆಗೆದುಕೊಂಡವರು ಯಾರು? ಹಾಗೂ ಕೊಟ್ಟವರು ಯಾರು ಎಂಬುದನ್ನು ಸ್ವತಃ ಪ್ರಧಾನಿ ಸ್ಪಷ್ಟಪಡಿಸಬೇಕು. ಇಲ್ಲದಿದ್ದರೆ, ಇದೊಂದು ಜವಾಬ್ದಾರಿ ಸ್ಥಾನದಲ್ಲಿರುವ ಪ್ರಧಾನಿಗಳ ಬೇಜವಾಬ್ದಾರಿಯುತ ಹೇಳಿಕೆ ಆಗಲಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ಭ್ರಷ್ಟಾಚಾರದ ನಂಗಾನಾಚ್ ಎಂದು ಪ್ರಧಾನಿ ಆರೋಪಿಸಿದ್ದಾರೆ. ಇದು ಚುನಾಯಿತ ಸರ್ಕಾರವೊಂದಕ್ಕೆ ಮಾಡಿದ ಅಪಮಾನ. ನಿಜವಾಗಿಯೂ ಇಷ್ಟೊಂದು ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದರೆ, ಕೇಂದ್ರ ಮಧ್ಯಪ್ರವೇಶಿಸಲಿ ಎಂದು ಸವಾಲು ಹಾಕಿದ ಡಾ. ಪರಮೇಶ್ವರ್, ಭ್ರಷ್ಟಾಚಾರವೆಸಗಿ ಜೈಲಿಗೆ ಹೋಗಿಬಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಭ್ರಷ್ಟಾಚಾರ ಮುಕ್ತ ಕರ್ನಾಟಕ ಮಾಡುವುದಾಗಿ ಘೋಷಿಸಿರುವ ಪ್ರಧಾನಿ ಹೇಳಿಕೆ ಸೋಜಿಗ ಎಂದು ವ್ಯಂಗ್ಯವಾಡಿದರು.
ರಾಜ್ಯಕ್ಕೆ ಅಪರಾಧಿ ಪಟ್ಟ; ಅವಮಾನ
ದೇಶದಲ್ಲೇ ಅತಿ ಹೆಚ್ಚು ಅಪರಾಧ ನಡೆಯುತ್ತಿರುವುದು ಉತ್ತರ ಪ್ರದೇಶದಲ್ಲಿ (ಪ್ರಮಾಣ ಶೇ. 9.5), ನಂತರದ ಸ್ಥಾನ ಮಧ್ಯಪ್ರದೇಶ (ಶೇ. 8.5) ಇದೆ. ಈ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಅಪರಾಧ ಪ್ರಮಾಣದಲ್ಲಿ ಮೊದಲ ಹತ್ತು ರಾಜ್ಯಗಳಲ್ಲಿ ಕರ್ನಾಟಕ ಇಲ್ಲವೇ ಇಲ್ಲ. ಆದಾಗ್ಯೂ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ “ಅಪರಾಧ’ದ ಪಟ್ಟ ಕೊಟ್ಟಿದ್ದಾರೆ. ಇದು ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಇದೇ ವೇಳೆ ಡಾ.ಪರಮೇಶ್ವರ ತಿರುಗೇಟು ನೀಡಿದರು.
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಹೊತ್ತಿ ಉರಿಯುತ್ತಿದೆ. ಉತ್ತರ ಕರ್ನಾಟಕದಲ್ಲಿ ಜನರಿಗೆ ಕುಡಿಯಲಿಕ್ಕೂ ನೀರಿಲ್ಲ. ಆದರೆ, ಪ್ರಧಾನಿಗಳ ಇಡೀ ಭಾಷಣದಲ್ಲಿ ಮಹದಾಯಿ ವಿವಾದದ ಪ್ರಸ್ತಾಪವೂ ಆಗಿಲ್ಲ. ರೈತರ ಸಾಲಮನ್ನಾ ಮಾಡುವಂತೆ ಒತ್ತಾಯಿಸಲಾಗಿತ್ತು. ಈ ಬಗ್ಗೆಯೂ ಬಜೆಟ್‌ನಲ್ಲಾಗಲಿ ಅಥವಾ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಭಾಷಣದಲ್ಲಾಗಲಿ ಪ್ರಸ್ತಾಪಿಸಲಿಲ್ಲ. ಇದು ರೈತರ ಬಗ್ಗೆ ಬಿಜೆಪಿಗೆ ಮತ್ತು ಪ್ರಧಾನಿಗೆ ಇರುವ ಕಾಳಜಿಯನ್ನು ತೋರಿಸುತ್ತದೆ ಎಂದರು.
ಮುಕ್ತ ಅಲ್ಲ; ಮತ್ತೆ ಕಾಂಗ್ರೆಸ್
ಕಾಂಗ್ರೆಸ್ ಮುಕ್ತ ಕರ್ನಾಟಕ ಅಲ್ಲ; ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಅಷ್ಟೇ ಅಲ್ಲ, 2019ಕ್ಕೆ ಬಿಜೆಪಿ ಕೂಡ “ಎಕ್ಸಿಟ್ ಗೇಟ್’ (ನಿರ್ಗಮನ ದ್ವಾರ)ನಲ್ಲಿ ನಿಲ್ಲಲಿದೆ. ಈಗಾಗಲೇ ರಾಜಸ್ತಾನ ಮತ್ತಿತರ ರಾಜ್ಯಗಳಲ್ಲಿ ಇದರ ಮುನ್ಸೂಚನೆ ದೊರಕಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಇಂಧನ ಸಚಿವ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.