10ರಿಂದ ರಾಹುಲ್‌ ರಾಜ್ಯ ಪ್ರವಾಸ


Team Udayavani, Feb 5, 2018, 12:27 PM IST

rahul-gandhi.jpg

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಫೆ.10ರಿಂದ 13ರವರೆಗೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಹೈದರಾಬಾದ್‌ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ಸಾರ್ವಜನಿಕ ಸಭೆ, ಸಮಾರಂಭಗಳ ಜತೆಗೆ ಹುಲಿಗೆಮ್ಮ ದೇವಿ ದೇವಸ್ಥಾನ, ಗವಿಸಿದ್ದೇಶ್ವರ ಮಠ, ಖಾಜಾ ಬಂದೇ ನವಾಜ್‌ ದರ್ಗಾ ಹಾಗೂ ಅನುಭವ ಮಂಟಪಕ್ಕೆ ಭೇಟಿ ಕೊಡಲಿದ್ದಾರೆ.

ಫೆ.10ರಂದು ರಾಹುಲ… ಹೊಸಪೇಟೆಯಲ್ಲಿ ಸಮಾವೇಶ ನಡೆಸಿ, ಬಸ್‌ನಲ್ಲಿ ಕೊಪ್ಪಳ ಜಿಲ್ಲೆ ಮುನಿರಾಬಾದ್‌ನಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಗ ಮಧ್ಯೆ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೂ ಭೇಟಿ ಕೊಟ್ಟು, ಬಳಿಕ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅದೇ ದಿನ ಸಂಜೆ ಕುಕನೂರಿನಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಅಂದು ರಾತ್ರಿ ಕುಕನೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಫೆ.11ರಂದು ಬಸ್‌ ಮೂಲಕ ಕುಷ್ಟಗಿ, ಕನಕಗಿರಿ, ಕಾರಟಗಿ, ಗಂಗಾವತಿಗೆ ಭೇಟಿ ಕೊಟ್ಟು, ಕಾರಟಗಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹಂಚಿನಾಳ ಕ್ಯಾಂಪ್‌ನಲ್ಲಿ ಜನರನ್ನು ಭೇಟಿ ಮಾಡಲಿದ್ದಾರೆ. ಸಿಂಧನೂರಿನಲ್ಲಿ ರೈತರೊಂದಿಗೆ ಸಂವಾದ ನಡೆಸುವ ರಾಹುಲ್‌, ರಾಯಚೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಫೆ.12ರಂದು ರಾಯಚೂರು, ಕಲ್ಮಲ ಭೇಟಿ, ದೇವದುರ್ಗದಲ್ಲಿ ಆದಿವಾಸಿಗಳ ರ್ಯಾಲಿ, ಜೇವರ್ಗಿಯಲ್ಲಿ ಸಾರ್ವಜನಿಕ ಸಭೆ, ಸಂಜೆ ಕಲಬುರಗಿಯಲ್ಲಿ ಸಾರ್ವಜನಿಕ ಸಭೆ ನಡೆಸಿ, ಖಾಜಾ ಬಂದೇ ನವಾಜ್‌ ದರ್ಗಾಗೆ ಭೇಟಿ ಕೊಡಲಿದ್ದಾರೆ. 

ಫೆ.13ರಂದು ಮಾಜಿ ಸಚಿವ ದಿ.ಖಮರುಲ್‌ ಇಸ್ಲಾಂ ಮನೆಗೆ ಭೇಟಿ ನೀಡಲಿರುವ ರಾಹುಲ್‌, ಬಳಿಕ ಎಚ್‌.ಕೆ.ಸೊಸೈಟಿಯಲ್ಲಿ ವಾಣಿಜ್ಯೋದ್ಯಮಿಗಳ ಜೊತೆಗೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಹೆಲಿಕಾಪ್ಟರ್‌ ಮೂಲಕ ಬಸವಕಲ್ಯಾಣಕ್ಕೆ ತೆರಳಿ, ಅನುಭವ ಮಂಟಪಕ್ಕೆ ಭೇಟಿ ಕೊಟ್ಟು, ಅಲ್ಲಿಂದ ಹೈದರಾಬಾದ್‌ಗೆ ಪ್ರಯಾಣ ಬೆಳಸಲಿದ್ದಾರೆ.

ಅದೇ ರೀತಿ, ಫೆ.21ರಿಂದ ಮೂರು ದಿನಗಳ ಕಾಲ ರಾಹುಲ್‌ ಮತ್ತೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಮುಂಬೈ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಈ ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ಚರ್ಚಿಸಲು ಸೋಮವಾರ ಮುಂಬೈ ಕರ್ನಾಟಕ ಭಾಗದ ಮುಖಂಡರ ಸಭೆ ಕರೆಯಲಾಗಿದೆ ಎಂದು ಕೆಪಿಸಿಸಿ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Tamilnadu: ಫೆಂಗಲ್‌ ಚಂಡಮಾರುತದ ಅಬ್ಬರ-ಚೆನ್ನೈ ವಿಮಾನ ನಿಲ್ದಾಣ ಬಂದ್‌, ರೆಡ್‌ ಅಲರ್ಟ್

Tamilnadu: ಫೆಂಗಲ್‌ ಚಂಡಮಾರುತದ ಅಬ್ಬರ-ಚೆನ್ನೈ ವಿಮಾನ ನಿಲ್ದಾಣ ಬಂದ್‌, ರೆಡ್‌ ಅಲರ್ಟ್

12-uv-fusion

UV Fusion: ಕಳಿಯಾಟಂ – ದೈವಗಳ ಆಂತರಿಕ ಶಕ್ತಿ ರೂಪ

One man is the reason I left Congress: Ramesh Jarkiholi taunts DK Shivakumar

Belagavi: ನಾನು ಕಾಂಗ್ರೆಸ್ ಬಿಡಲು ಒಬ್ಬ ಮನುಷ್ಯ ಕಾರಣ: ರಮೇಶ್‌ ಜಾರಕಿಹೊಳಿ

Bangladesh: ಚಿನ್ಮಯ್ ಕೃಷ್ಣ ದಾಸ್ ಸೇರಿ 17 ಮಂದಿಯ ಬ್ಯಾಂಕ್ ಖಾತೆ ಸ್ಥಗಿತಕ್ಕೆ ಆದೇಶ

Bangladesh: ಚಿನ್ಮಯ್ ಕೃಷ್ಣ ದಾಸ್ ಸೇರಿ 17 ಮಂದಿಯ ಬ್ಯಾಂಕ್ ಖಾತೆ ಸ್ಥಗಿತಕ್ಕೆ ಆದೇಶ

Moral Story: ಸೋಮಾರಿ ಅರಿತ ಸಮಯದ ಬೆಲೆ

Moral Story: ಸೋಮಾರಿ ಅರಿತ ಸಮಯದ ಬೆಲೆ

ನಮ್ಮ ನಾಯಕರ ತೇಜೋವಧೆಗೆ ಯತ್ನಿಸಿದರೆ ಒಟ್ಟಾಗಿ ಎದುರಿಸುತ್ತೇವೆ: ಎಚ್.ಕೆ.ಪಾಟೀಲ

Hubli: ನಮ್ಮ ನಾಯಕರ ತೇಜೋವಧೆಗೆ ಯತ್ನಿಸಿದರೆ ಒಟ್ಟಾಗಿ ಎದುರಿಸುತ್ತೇವೆ: ಎಚ್.ಕೆ.ಪಾಟೀಲ

Desi Swara: ಅವ – ಇವ ಎಂಬ ಮಾತುಗಳ ಅವಯವ : ಪದಗಳ ವನ್ಯಲೋಕದಲ್ಲಿ

Desi Swara: ಅವ – ಇವ ಎಂಬ ಮಾತುಗಳ ಅವಯವ : ಪದಗಳ ವನ್ಯಲೋಕದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ- ಮಕ್ಕಳ ಆರೋಗ್ಯದ ಚಿಕಿತ್ಸೆಯನ್ನು ಸೇವೆ ಎಂಬಂತೆ ಮಾಡಬೇಕು: ಮಾಜಿ ಸಚಿವ ಅರವಿಂದ ಲಿಂಬಾವಳಿ

ಮಹಿಳೆ- ಮಕ್ಕಳ ಆರೋಗ್ಯದ ಚಿಕಿತ್ಸೆಯನ್ನು ಸೇವೆ ಎಂಬಂತೆ ಮಾಡಬೇಕು: ಅರವಿಂದ ಲಿಂಬಾವಳಿ

8-cubbon-park-3

Bengaluru: ಕಬ್ಬನ್‌ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ

7-wedding

Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್‌ ಭಕ್ಷ್ಯಗಳಿವು…

6-bng

Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!

5-renukaswamy

Renukaswamy Case: ಶೆಡ್‌ನ‌ಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

15-uv-fusion

UV Fusion: ಬಾಂಧವ್ಯ ಬೆಸೆಯುವ ಹಬ್ಬಗಳ ಆಚರಣೆ

Tamilnadu: ಫೆಂಗಲ್‌ ಚಂಡಮಾರುತದ ಅಬ್ಬರ-ಚೆನ್ನೈ ವಿಮಾನ ನಿಲ್ದಾಣ ಬಂದ್‌, ರೆಡ್‌ ಅಲರ್ಟ್

Tamilnadu: ಫೆಂಗಲ್‌ ಚಂಡಮಾರುತದ ಅಬ್ಬರ-ಚೆನ್ನೈ ವಿಮಾನ ನಿಲ್ದಾಣ ಬಂದ್‌, ರೆಡ್‌ ಅಲರ್ಟ್

14-uv-fusion

UV Fusion: ಮೊದಲು ನಾವು ಕನ್ನಡಿಗರಾಗೋಣ..!

13-tulsi

Tulsi Pooja: ತುಳಸಿ ಪೂಜೆ ಹಿನ್ನೆಲೆ ಏನು ಗೊತ್ತಾ?

12-uv-fusion

UV Fusion: ಕಳಿಯಾಟಂ – ದೈವಗಳ ಆಂತರಿಕ ಶಕ್ತಿ ರೂಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.