ಸಂಶೋಧನೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಿ: ಬಸವರಾಜ
Team Udayavani, Feb 5, 2018, 1:10 PM IST
ಬಸವಕಲ್ಯಾಣ: ವಿದ್ಯಾರ್ಥಿಗಳು ವೈಜ್ಞಾನಿಕ ಸಂಶೋಧನೆಗಳ ಬಗ್ಗೆ ತಿಳಿದುಕೊಂಡು ಸಂಶೋಧನೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಸಲಹೆ ನೀಡಿದರು.
ನಗರದ ಡಾ| ಶರಣಬಸವಪ್ಪ ಅಪ್ಪ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಜಿಲ್ಲಾಮಟ್ಟದ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಹಾಗೂ ವಿಜ್ಞಾನ ಪ್ರದರ್ಶನ ಸಮಾರೋಪ ಸಮಾರಂಭದಲ್ಲಿ ಮಾತನಡಿದ ಅವರು, ಸಾಧನೆಗೆ ದೃಢ ಸಂಕಲ್ಪ, ಅದಕ್ಕೆ ಪೂರಕ ಪರಿಶ್ರಮ ಇದ್ದಾಗ ಸಾಧನೆಯ ದಾರಿ ತಾನಾಗಿಯೇ ತೆರೆದುಕೊಳ್ಳುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ| ಡಿ.ಟಿ ಅಂಗಡಿ ಮಾತನಾಡಿದರು. ಸಹ ಸಂಯೋಜಕ ಪ್ರೊ| ಆರ್.ಡಿ. ಬಾಲಿಕಿಲೆ ಉಪಸ್ಥಿತರಿದ್ದರು, ಪ್ರೊ| ವಿಠೊಬಾ ಡೊಣ್ಣೆಗೌಡರು ಸ್ವಾಗತಿಸಿದರು. ಡಾ.ಕೇದರನಾಥ ನಿರೂಪಿಸಿದರು. ಪ್ರೊ|ಎಸ್. ಜಿ. ಕರಣೆ ವಂದಿಸಿದರು.
ಬಹುಮಾನ ವಿತರಣೆ: ಸಮ್ಮೇಳನ ಹಾಗೂ ಪ್ರದರ್ಶನ ನಿಮಿತ್ತ ವಸ್ತು ಪ್ರದರ್ಶನ, ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆ ನಡೆಸಿ ಪ್ರತ್ಯೇಕವಾಗಿ ಮೂರು ವಿಭಾಗಗಳಲ್ಲಿ ನಗದು ಬಹುಮಾನ ಮತ್ತು ಪ್ರಮಾಣ ಪತ್ರವನ್ನು ನೀಡಲಾಯಿತು. ವಸ್ತು ಪ್ರರ್ದಶನದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವನ್ನು ಎಸ್‌ಎಸ್ ಕೆಬಿ ಕಾಲೇಜು ವಿದ್ಯಾರ್ಥಿಗಳು ಪಡೆದಿದ್ದು, ರಜನಿಕಾಂತ, ಶುಷ್ಮಾ, ವಿಜಯಲಕ್ಷ್ಮೀ, ಶಿವಲೀಲಾ ಪ್ರಥಮ ಬಹುಮಾನ ಪಡೆದಿದ್ದಾರೆ, ಶೃತಿ, ರಾಧಿಕಾ, ಅಂಜಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ.
ಮೀರಮುಸ್ತಾಖ ಅಲಿ, ಸಬಾನೇಹಾ, ಕಾಶಿನಾಥ ನಿಣ್ಣೆ ತೃತೀಯ ಬಹುಮಾನ ಪಡೆದಿದ್ದಾರೆ. ರಸಪ್ರಶ್ನೆ ಸ್ಪರ್ಧೆಯಲ್ಲಿ ಬೀದರಿನ ಬಿವಿಬಿ ಮಹಾವಿದ್ಯಾಲಯದ ವಿದ್ಯಾರ್ಥಿ ಜಗದೀಶ ಪ್ರಥಮ, ಹುಮನಾಬಾದಿನ ಎಸ್‌ಬಿಸಿ ಮತ್ತು ಎಸ್.ವಿ. ಮಹಾವಿದ್ಯಾಲಯದ ವಿದ್ಯಾರ್ಥಿನಿಗಳಾದ ವಿಜಯಲಕ್ಷ್ಮೀ, ಮತ್ತು ಕುಸುಮ ಗೋಪಾಲ ದ್ವಿತೀಯ ಬಹುಮಾನ ಪಡೆದಿದ್ದಾರೆ. ಎಸ್‌ಎಸ್‌ಕೆಬಿ ಕಾಲೇಜು ವಿದ್ಯಾರ್ಥಿಗಳಾದ ಸಿಮ್ರನಜಿತ್ ಕೌರ ಹಾಗೂ ಸೇಖ ಸೋಯಬ ತೃತೀಯ ಬಹುಮಾನ ಪಡೆದಿದ್ದಾರೆ.
ಪ್ರಬಂಧ ಸ್ಪರ್ಧೆಯಲ್ಲಿ ಎಸ್‌ಎಸ್‌ಕೆಬಿ ಕಾಲೇಜಿನ ವಿದ್ಯಾರ್ಥಿಗಳಾದ ಸುಷ್ಮಾ ಆರ್ ಪ್ರಥಮ ಮತ್ತು ಮಿನಾಕ್ಷಿ ಎಸ್. ಪ್ರಥಮ ಬಹುಮಾನ ಪಡೆದಿದ್ದಾರೆ. ಹುಮನಾಬಾದನ ಎಸ್‌ಬಿಸಿ ಮತ್ತು ಎಸ್.ವಿ. ಮಹಾವಿದ್ಯಾಲಯದ ವಿದ್ಯಾರ್ಥಿನಿ ಸಂಧ್ಯಾಶ್ರೀ ತೃತೀಯ ಬಹುಮಾನ ಪಡೆದಿದ್ದಾರೆ.
ರಾಜ್ಯ ಸರ್ಕಾರದ ಮಾಹಿತಿ ತಂತ್ರಜ್ಞಾನ-ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಇಲ್ಲಿನ ಎಸ್‌ಎಸ್‌ಕೆ ಬಸವೇಶ್ವರ ಕಲಾ, ವಿಜ್ಞಾನ, ವಾಣಿಜ್ಯ ಸ್ನಾತಕ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.