ಶ್ರೀಶಾಂತ್ ನಿಷೇಧ ವಿಚಾರ: ಬಿಸಿಸಿಐಗೆ ಸುಪ್ರೀಂ ನೋಟಿಸ್
Team Udayavani, Feb 6, 2018, 6:05 AM IST
ನವದೆಹಲಿ: ಕ್ರಿಕೆಟಿಗ ಶ್ರೀಶಾಂತ್ ಪ್ರಕರಣದಲ್ಲಿ ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ)ಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.
2013ರ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಬಿಸಿಸಿಐ ಶ್ರೀಶಾಂತ್‌ಗೆ ಆಜೀವ ನಿಷೇಧ ಹೇರಿತ್ತು. ಇದನ್ನು ಶ್ರೀಶಾಂತ್ ದಿಲ್ಲಿ ಅಧೀನ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು. 2 ವರ್ಷದ ಹಿಂದೆ ಅವರನ್ನು ನ್ಯಾಯಾಲಯ ಧೋಷ ಮುಕ್ತರನ್ನಾಗಿ ಮಾಡಿತ್ತು. ಆದರೆ ಬಿಸಿಸಿಐ ಮಾತ್ರ ಇವರ ಮೇಲಿನ ನಿಷೇಧವನ್ನು ಹಿಂದಕ್ಕೆ ತೆಗೆದುಕೊಂಡಿರಲಿಲ್ಲ. ಅಷ್ಟೇ ಅಲ್ಲ ಇವರು ಇತ್ತೀಚೆಗೆ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ ಹಾಕಿ ನಿಷೇಧಕ್ಕೆ ಬಿಸಿಸಿಐ ಅಡ್ಡಿಪಡಿಸುತ್ತಿದೆ ಎಂದಿದ್ದರು. ಅಲ್ಲಿಯೂ ನ್ಯಾಯಾಲಯ ಶ್ರೀಶಾಂತ್ ಆಜೀವ ನಿಷೇಧವನ್ನು ಹಿಂದಕ್ಕೆ ರದ್ದುಗೊಳಿಸಿತ್ತು. ಆದರೆ ಬಿಸಿಸಿಐ ಅದನ್ನೂ ನಿರಾಕರಿಸಿತ್ತು. ಈ ನಡುವೆ ತನಗೆ ನ್ಯಾಯ ನೀಡಿ ಎಂದು ಶ್ರೀಶಾಂತ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾ.ದೀಪಕ್ ಮಿಶ್ರಾ ಒಳಗೊಂಡ ತ್ರಿಸದಸ್ಯ ಪೀಠ ಬಿಸಿಸಿಐಗೆ ನಾಲ್ಕು ವಾರಗಳ ಸಮಯ ನೀಡಿದೆ. ಇದರೊಳಗೆ ಉತ್ತರ ನೀಡುವಂತೆ ಬಿಸಿಸಿಐಗೆ ಸೂಚಿಸಿದೆ. ಬಿಸಿಸಿಐ ಪರ ಹಿರಿಯ ವಕೀಲ ಪರಾಗ್ ತ್ರಿಪಾಠಿ ನೋಟಿಸ್ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.