ಅನುದಾನ ಬಿಡುಗಡೆ ಲೆಕ್ಕ ಕೊಟ್ಟ ಸಿದ್ದರಾಮಯ್ಯ
Team Udayavani, Feb 6, 2018, 6:10 AM IST
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೇಂದ್ರದ ಅನುದಾನದ ಬಳಕೆ ಕುರಿತು ಪದೇ ಪದೇ ಲೆಕ್ಕ ಕೇಳುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ರಾಜ್ಯಕ್ಕೆ 14 ನೇ ಹಣಕಾಸು ಆಯೋಗದಲ್ಲಿ ನಿಗದಿಪಡಿಸಿದ ಅನುದಾನಕ್ಕಿಂತಲೂ 10,500 ಕೋಟಿ ರೂ. ಕಡಿಮೆ ಅನುದಾನ ಬಿಡುಗಡೆ ಮಾಡಿದೆ ಎಂದು ತಿರುಗೇಟು ನೀಡಿದ್ದಾರೆ.
ಸೋಮವಾರ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ನೀಡಬೇಕಾಗಿದ್ದ ಹಣದಲ್ಲಿ ಮೋದಿ ಸರ್ಕಾರ 10,500 ಕೋಟಿ ರೂ. ಕಡಿಮೆ ಅನುದಾನ ಬಿಡುಗಡೆ ಮಾಡಿದೆ. ಕೇಂದ್ರಕ್ಕೆ ಸಂಗ್ರಹವಾಗುವ ಒಟ್ಟು ತೆರಿಗೆಯಲ್ಲಿ ಶೇ.9.47 ರಷ್ಟು ತೆರಿಗೆ ರಾಜ್ಯದಿಂದಲೇ ಸಂಗ್ರಹವಾಗುತ್ತದೆ. ಇದನ್ನಾಧರಿಸಿ 14 ನೇ ಹಣಕಾಸು ಆಯೋಗ ರಾಜ್ಯಕ್ಕೆ 2015 ರಿಂದ 18ರವರೆಗೆ 95 ಸಾವಿರ ಕೋಟಿ ರೂ.ಅನುದಾನ ನಿಗದಿಪಡಿಸಿದೆ. ರಾಜ್ಯದ ಪಾಲಿನ ಹಣದಲ್ಲಿ ಇಲ್ಲಿಯತನಕ 84.500 ಕೋಟಿ ರೂ. ಮಾತ್ರ ಬಂದಿದೆ. 10,500 ಕೋಟಿ ಖೋತಾ ಆಗಿದೆ. ಕೇಂದ್ರ ನಮಗೆ ಕೇವಲ ಶೇ.4.65 ರಷ್ಟು ಮಾತ್ರ ಅನುದಾನ ನೀಡುತ್ತಿದೆ ಎಂದರು.
ಕೇಂದ್ರದ ಅನುದಾನ ಬಿಡುಗಡೆ ವಿಚಾರದಲ್ಲಿ ಕೃಷಿ ಸಚಿವ ಕೃಷ್ಣ ಭೈರೇಗೌಡ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನೀಡಿದ ವಿವರಣೆ ಸರಿಯಾಗಿದೆ. ಕೇಂದ್ರದ ಅನುದಾನ ಬಿಡುಗಡೆ ಬಗ್ಗೆ ಅಮಿತ್ ಶಾಗೆ ಸರಿಯಾದ ಲೆಕ್ಕ ಗೊತ್ತಿಲ್ಲ. ಅವರು 2 ಲಕ್ಷ ಕೋಟಿ ರೂ. ಕೊಟ್ಟಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಜನರಲ್ಲಿ ಗೊಂದಲ ಉಂಟು ಮಾಡುವ ಉದ್ದೇಶದಿಂದ ಬಿಜೆಪಿ ನಾಯಕರು ಕೇಂದ್ರ ಅನುದಾನ ಕುರಿತು ಸುಳ್ಳು ಮಾಹಿತಿ ನೀಡುತ್ತಿದ್ದಾರೆಂದು ಆರೋಪಿಸಿದರು.
ಬರ ಪರಿಹಾರ ಹಣ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಗುಜರಾತ್‌ಗೆ 8195 ಕೋಟಿ, ತಮಿಳುನಾಡಿಗೆ 3751 ಕೋಟಿ, ಆಂಧ್ರಕ್ಕೆ 2430 ಕೋಟಿ, ರಾಜಸ್ಥಾನಕ್ಕೆ 2153 ಕೋಟಿ ಹಣ ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಕೇವಲ 1435 ಕೋಟಿ ರೂ.ನೀಡಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.