ನಿರಂತರ 6ನೇ ದಿನ ಕುಸಿತ: ಮುಂಬಯಿ ಶೇರು 561 ಅಂಕ ನಷ್ಟ
Team Udayavani, Feb 6, 2018, 4:19 PM IST
ಮುಂಬಯಿ : ಜಾಗತಿಕ ಮಾರುಕಟ್ಟೆಗಳಲ್ಲಿ ನಿರಂತರ ಕುಸಿತಕ್ಕೆ ನಲುಗಿರುವ ಮುಂಬಯಿ ಶೇರು ಪೇಟೆ ಇಂದು ಮಂಗಳವಾರದ ವಹಿವಾಟನ್ನು, ನಿರಂತರ ಆರನೇ ಕುಸಿತದ ದಿನವಾಗಿ, 561 ಅಂಕಗಳ ಭಾರೀ ನಷ್ಟದೊಂದಿಗೆ 34,195.94 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 168.30 ಅಂಕಗಳ ಕುಸಿತಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,498.25 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ಇದೇ ವರ್ಷ ಜನವರಿ 3ರಂದು ನಿಫ್ಟಿ 10,443.20 ಅಂಕಗಳ ನಿಕೃಷ್ಟ ಮಟ್ಟವನ್ನು ಕಂಡಿತ್ತು.
ಹೂಡಿಕೆದಾರರು ಈಗಿನ್ನು ಆರ್ಬಿಐ ಹಣಕಾಸು ನೀತಿ ಪರಾಮರ್ಶೆಯ ಫಲಿತಾಂಶವನ್ನು ಕಾತರದಿಂದ ಎದುರು ನೋಡುತ್ತಿದ್ದಾರೆ. ಬಜೆಟ್ ತಂದ ನಿರಾಶೆಯ ಬೆನ್ನಿಗೇ ಜಾಗತಿಕ ಶೇರುಗಳ ಕುಸಿತ ಮುಂಬಯಿ ಶೇರು ಪೇಟೆಯಲ್ಲಿ ಭಾರೀ ತಲ್ಲಣಕ್ಕೆ ಕಾರಣವಾಗಿದೆ.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,901 ಶೇರುಗಳು ವಹಿವಾಟಿಗೆ ಒಳಪಟ್ಟವು.ಕೇವಲ 529 ಶೇರುಗಳು ಮುನ್ನಡೆ ಕಂಡವು; 2,223 ಶೇರುಗಳು ಹಿನ್ನಡೆಗೆ ಗುರಿಯಾದವು; 149 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.